Advertise

18 October 2022

Weather report upto 8.00am 19.10.2022




19.10.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕೇರಳ ರಾಜ್ಯದ ಕರಾವಳಿಯ ಬಹುತೇಕ ಭಾಗಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ಇದೆ. 
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಕನ್ನಡದ ಸುಳ್ಯ ಹಾಗೂ ಉಡುಪಿಯ ಕಾರ್ಕಳ ಸುತ್ತಮುತ್ತ ಭಾಗಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು. 

ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಾಮರಾಜನಗರ, ಪಾವಗಡ, ಕಲಬುರ್ಗಿ ಹಾಗೂ ಬೀದರ್ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. 

ರಾಜ್ಯದಾದ್ಯಂತ ಮೋಡದ ವಾತಾವರಣ ಇರಲಿದ್ದು, ಕೊಡಗು, ಶಿೃಂಗೇರಿ, ಕುದುರೆಮುಖ, 
ಮೈಸೂರು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಹಾವೇರಿ, ಧಾರವಾಡ, ಬೆಳಗಾವಿ, ಗದಗ, ಕೊಪ್ಪಳ, ವಿಜಯಪುರ, ಬಳ್ಳಾರಿ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ಗುಡುಗು ಸಹಿತ ತುಂತುರು ಮಳೆಯ ಮುನ್ಸೂಚನೆ ಇದೆ. 

ಬಂಗಾಳಕೊಲ್ಲಿಯ ಅಂಡಮಾನ್ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಂತಹ ತಿರುವಿಕೆ ವಾಯುಭಾರ ಕುಸಿತವಾಗಿ ಪರಿವರ್ತನೆಯಾಗುವ ಸಾಧ್ಯತೆ ಇದ್ದು, ಬಲಗೊಂಡರೆ ಹಿಂಗಾರು ದುರ್ಬಲಗೊಳ್ಳುವ ಸಾಧ್ಯತೆ ಅಧಿಕವಾಗಿದೆ. 

ಈಗನ ಮುನ್ಸೂಚನೆಯಂತೆ ಈ ವಾಯುಭಾರ ಕುಸಿತವು ಚಂಡಮಾರುತವಾಗಿ ಉತ್ತರ ಆಂದ್ರಾ ಅಥವಾ ಒಡಿಶಾ ಕರಾವಳಿಗೆ ಅಪ್ಪಳಿಸುವ ಲಕ್ಷಣಗಳಿವೆ. ಒಕ್ಟೊಬರ್ 22ರ ನಂತರ ರಾಜ್ಯದಾದ್ಯಂತ ಮಳೆ ದೂರವಾಗಿ ಬಿಸಿಲಿನ ವಾತಾವರಣದ ಸಾಧ್ಯತೆ ಇದೆ. 

No comments:

Post a Comment

20.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

20.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರ್ನಾಟಕ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ...