Advertise

22 October 2022

23.10.2022ರ ಬೆಳಿಗ್ಗೆ 8 ಗಂಟೆವರೆಗೆ ಕರ್ನಾಟಕದ ವಾತಾವರಣ ಹೇಗಿರುತ್ತೆ

23.10.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಸಂಜೆ ಮೋಡ ಕವಿದ ವಾತಾವರಣ ಇರಲಿದ್ದು, ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಚಾಮರಾಜನಗರದ ಒಂದೆರಡು ಕಡೆ, ಕೊಡಗು, ಚಿಕ್ಕಮಗಳೂರಿಧ ಶಿೃಂಗೇರಿ, ಕುದುರೆಮುಖ, ತೀರ್ಥಹಳ್ಳಿ, ಹೊಸನಗರ ಸುತ್ತಮುತ್ತ ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 

ಉತ್ತರ ಕನ್ನಡ - ಗೋವಾ ಗಡಿ ಭಾಗಗಳಲ್ಲಿ, ಬೆಳಗಾವಿ - ಮಹಾರಾಷ್ಟ್ರ - ಗೋವಾ ಗಡಿಭಾಗಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಶುಶ್ಕ ಹವೆಯ ಮುನ್ಸೂಚನೆ ಇದೆ. 

ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಇಂದು ನಾಳೆಯಲ್ಲಿ ಚಂಡಮಾರುತವಾಗಿ ಪಶ್ಚಿಮ ಬಂಗಾಳದ ಕರಾವಳಿ ಮೂಲಕ ಬಂಗ್ಲಾದೇಶದ ಕರಾವಳಿಗೆ ನಾಳೆ, ನಾಡಿದ್ದರಲ್ಲಿ ಅಪ್ಪಳಿಸಲಿದೆ. 
ವಾಯುಭಾರ ಕುಸಿತದ ಪ್ರಭಾವ ಸಂಪೂರ್ಣ ಕಡಿಮೆಯಾದ ಮೇಲೆ ಅಂದರೆ ಒಕ್ಟೊಬರ್ 27ರ ನಂತರ ರಾಜ್ಯದ ದಕ್ಷಿಣ ಭಾಗಗಳಲ್ಲಿ ಅಲ್ಲಲ್ಲಿ ಮೋಡ ಅಥವಾ ತುಂತುರು ಮಳೆಯ ಮುನ್ಸೂಚನೆ ಇದೆ. 
ಆದರೆ ಈಗಾಗಲೇ ಉತ್ತರ ಭಾರತದ ಕಡೆಯಿಂದ ಬೀಸುತ್ತಿರುವ ಗಾಳಿಯ ಪ್ರಭಾವ ಹೆಚ್ಚಾಗಿದರೆ ಶುಶ್ಕ ಹವೆ ಮುಂದುವರಿಯಬಹುದು


No comments:

Post a Comment

20.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

20.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರ್ನಾಟಕ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ...