Advertise

30 November 2022

01.12.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ


01.12.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಬಿಸಿಲು ಹಾಗೂ ಒಣ ಹವೆ ಇರಲಿದ್ದು, ದಕ್ಷಿಣ ಕನ್ನಡ ಹಾಗೂ ಕಾಸರಗೋಡು ಜಿಲ್ಲೆಗಳಲ್ಲಿ ಸಂಜೆ ಅಲ್ಲಲ್ಲಿ ಮೋಡ ವಾತಾವರಣದ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ. 


ಡಿಸೆಂಬರ್ 1 ರಿಂದ ರಾಜ್ಯದ ಒಳನಾಡು ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಲಕ್ಷಣಗಳಿದ್ದು ಡಿಸೆಂಬರ್ 2 ರಿಂದ ಕರಾವಳಿ ಭಾಗಗಳಲ್ಲಿ ಸಹ ಮೋಡ ಹಾಗೂ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 
ಈ ವಾತಾವರಣವು ದಕ್ಷಿಣ ಕರ್ನಾಟಕದ ಹೆಚ್ಚಿನ ಭಾಗಗಳಲ್ಲಿ  ಡಿಸೆಂಬರ್ 10ರ ವರೆಗೂ ಮುಂದುವರಿಯುವ ಲಕ್ಷಣಗಳಿವೆ. 
ಈ ಮಧ್ಯೆ ಡಿಸೆಂಬರ್ 6, 7 ರಂದು ದಕ್ಷಿಣ ತಮಿಳುನಾಡಿಗೆ ಚಂಡಮಾರುತ ಅಪ್ಪಳಿಸುವ ಲಕ್ಷಣಗಳಿವೆ. 


29 November 2022

30.11.2022ರ ಬೆಳಿಗ್ಗೆ 8 ಗಂಟೆವರೆಗೆ ಕರ್ನಾಟಕದ ವಾತಾವರಣ ಹೇಗಿರುತ್ತೆ

30.11.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಅಲ್ಲಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು ಸಂಜೆ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 

ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಸಂಜೆ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಒಂದೆರಡು ಕಡೆ ಸ್ವಲ್ಪ ಜಾಸ್ತಿ ಇರಬಹುದು. 

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು, ಅಲ್ಲಲ್ಲಿ ಹಗುರವಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಬಂಗಾಳಕೊಲ್ಲಿಯ ಉತ್ತರ ಭಾಗದಲ್ಲಿ ಈಗಿರುವ ವಾಯುಭಾರ ಕುಸಿತದಂತಹ ತಿರುವಿಕೆಯಿಂದ ರಾಜ್ಯದಲ್ಲಿ ಯಾವುದೇ ಪರಿಣಾಮವಿಲ್ಲ. 
ಆದರೆ ಡಿಸೆಂಬರ್ 6ರಿಂದ ದಕ್ಷಿಣ ಬಂಗಾಳಕೊಲ್ಲಿ ಉಂಟಾಗಲಿರುವ  ವಾಯುಭಾರ ಕುಸಿತವು ಈಗಿನ ಪ್ರಕಾರ ಬಲವಾಗಿದ್ದು, ದಕ್ಷಿಣ ಒಳನಾಡು ಭಾಗಗಳಲ್ಲಿ ಮಳೆಯ ಲಕ್ಷಣಗಳಿವೆ. 


28 November 2022

29.11.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

29.11.2022ರ ಬೆಳಿಗ್ಗೆ 8 ಗಂಟೆವರೆಗೆ ಕರ್ನಾಟಕದ ವಾತಾವರಣ ಹೇಗಿರುತ್ತೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಮೋಡ ಕವಿದ ವಾತಾವರಣದೊಂದಿಗೆ ಸಂಜೆ ಗುಡುಗು ಸಹಿತ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 

ಕೊಡಗು, ಸಕಲೇಶಪುರ, ಮೂಡಿಗೆರೆ, ಬಾಳೆಹೊನ್ನೂರು, ಶಿೃಂಗೇರಿ, ಕುದುರೆಮುಖ, ಆಗುಂಬೆ, ಹೊಸನಗರ, ಸಾಗರ ಸುತ್ತಮುತ್ತ ಭಾಗಗಳಲ್ಲಿ ಸಹ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 

ಮೈಸೂರು, ಚಾಮರಾಜನಗರ ಮಳೆಯ ಮುನ್ಸೂಚನೆ ಇದ್ದರೆ, ಮಂಡ್ಯ, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಸಂಜೆ ಮೋಡ ಕವಿದು ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು, ಸಂಜೆ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಡಿಸೆಂಬರ್ 1 ರಿಂದ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದ್ದು, 4, 5ನೇ ತಾರೀಕಿನಂದು ಬಂಗಾಳಕೊಲ್ಲಿಯ ಉತ್ತರ ಶ್ರೀಲಂಕಾ ಸಮೀಪ ಚಂಡಮಾರುತದ ಲಕ್ಷಣಗಳಿದ್ದು, 6 ನೇ ತಾರೀಖಿನಂದು ತಮಿಳುನಾಡುಗೆ ಅಪ್ಪಳಿಸುವ ಲಕ್ಷಣಗಳಿವೆ. 


27 November 2022

28.11.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

28.11.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಮಧ್ಯಾಹ್ನ ನಂತರ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 

ಕೊಡಗು, ಮೈಸೂರು, ಚಾಮರಾಜನಗರ, ರಾಮನಗರ, ಬೆಂಗಳೂರು, ಚಿಕ್ಕಮಗಳೂರು, ಶಿವಮೊಗ್ಗ, ಧಾರವಾಡ, ಬೆಳಗಾವಿ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 

ಅಂಡಮಾನ್ ಲ್ಲಿ ಉಂಟಾಗಿರುವ ವಾಯುಭಾರ ಕುಸಿತದಂತಹ ತಿರುವಿಕೆಯು ಅದೇ ಸ್ಥಿತಿಯಲ್ಲಿ ಮುಂದುವರಿಯುತ್ತಿದೆ. 
ನವೆಂಬರ್ 28 ಮತ್ತು 29ರಂದು ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಅಲ್ಲಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. 
ಆಮೇಲೆ ಕಡಿಮೆಯಾದರೂ ಡಿಸೆಂಬರ್ 1ರಿಂದ ಮತ್ತೆ ಮೋಡ ಅಲ್ಲಲ್ಲಿ ತುಂತುರು ಮಳೆಯ ಲಕ್ಷಣಗಳಿವೆ. 

26 November 2022

27.11.2022ರ ಬೆಳಿಗ್ಗೆ 8 ಗಂಟೆವರೆಗೆ ಕರ್ನಾಟಕದ ವಾತಾವರಣ ಹೇಗಿರುತ್ತೆ

27.11. 2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಸಂಜೆ ಮೋಡ ಕವಿದ ವಾತಾವರಣದೊಂದಿಗೆ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 

ಕೊಡಗು, ಮೈಸೂರು, ಹಾಸನ, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಸಂಜೆ ಮೋಡ ಕವಿದ ವಾತಾವರಣದೊಂದಿಗೆ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ. 

ಅಂಡಮಾನ್ ಲ್ಲಿ ವಾಯುಭಾರ ಕುಸಿತದಂತಹ ತಿರುವಿಕೆ ಆರಂಭವಾಗಿದ್ದು, ಬಲಗೊಂಡರೆ ಹಿಂಗಾರು ಹಿಂದೆ ಸರಿಯುವ ಸಾಧ್ಯತೆ ಇದೆ. 
ಈಗನ ಪ್ರಕಾರ ಡಿಸೆಂಬರ್ 1 ರಂದು ಈ ತಿರುಗುವಿಕೆಯು ತಮಿಳುನಾಡು ಕರಾವಳಿಗೆ ತಲಪುವ ಲಕ್ಷಣಗಳಿವೆ. 

25 November 2022

26.11.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

26.11.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಸಂಜೆ ಮೋಡ ಕವಿದ ವಾತಾವರಣದೊಂದಿಗೆ ಅಲ್ಲಲ್ಲಿ ಗುಡುಗು ಸಹಿತ ತುಂತುರು ಮಳೆಯ ಮುನ್ಸೂಚನೆ ಇದೆ. 

ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಧಾರವಾಡ, ಬೆಳಗಾವಿ, ಮೈಸೂರು ಜಿಲ್ಲಾ ಭಾಗಗಳಲ್ಲಿ ಅಲ್ಲಲ್ಲಿ ಸಂಜೆ ಮೋಡ ಕವಿದ ವಾತಾವರಣದೊಂದಿಗೆ ಒಂದೆರಡು ಕಡೆ ಗುಡುಗು ಸಹಿತ ತುಂತುರು ಮಳೆಯ ಮುನ್ಸೂಚನೆ ಇದೆ. ಹೊಸನಗರ, ಸಾಗರ ಸುತ್ತಮುತ್ತ ಸ್ವಲ್ಪ ಜಾಸ್ತಿ ಇರಬಹುದು. 

ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ. 

ಈಗನ ಈ ವಾತಾವರಣವು ನವೆಂಬರ್ ಕೊನೆಯ ತನಕವೂ ಮುಂದುವರಿಯುವ ಲಕ್ಷಣಗಳಿವೆ. 


24 November 2022

25.11.2022ರ ಬೆಳಿಗ್ಗೆ 8 ಗಂಟೆವರೆಗೆ ಕರ್ನಾಟಕದ ವಾತಾವರಣ ಹೇಗಿರುತ್ತೆ

25.11.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಮೋಡ ಕವಿದ ವಾತಾವರಣದೊಂದಿಗೆ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 

ದಕ್ಷಿಣ ಕನ್ನಡದ ಬೆಳ್ತಂಗಡಿ, ಧರ್ಮಸ್ಥಳ, ಕಾರ್ಕಳ ಸುತ್ತಮುತ್ತ ಸಾಮಾನ್ಯ ಮಳೆಯ ಸಾಧ್ಯತೆ ಇದೆ. 

ಕೊಡಗು, ಹಾಸನ, ಚಿಕ್ಕಮಗಳೂರು( ಮೂಡಿಗೆರೆ, ಶಿೃಂಗೇರಿ, ಕುದುರೆಮುಖ, ತೀರ್ಥಹಳ್ಳಿ, ಆಗುಂಬೆ, ಹೊಸನಗರ  ಸುತ್ತಮುತ್ತ) ಶಿವಮೊಗ್ಗ, ಮೈಸೂರು ಚಾಮರಾಜನಗರ, ರಾಮನಗರ, ಬೆಂಗಳೂರು, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 

ಚಿತ್ರದುರ್ಗ, ಪಾವಗಡ, ದಾವಣಗೆರೆ, ಹಾವೇರಿ, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡ ಅಥವಾ ತುಂತುರು ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಬಂಗಾಳಕೊಲ್ಲಿಯ ವಾಯುಭಾರ  ಕುಸಿತವು ಸಂಪೂರ್ಣ ಶಿಥಿಲಗೊಂಡಿದೆ. 

ರಾಜ್ಯದಲ್ಲಿ ಇದರ ಪ್ರಭಾವ ದಕ್ಷಿಣ ಒಡನಾಡಿಲ್ಲಿ ಇನ್ನೆರಡು ದಿನ ಇದ್ದರೆ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ನವೆಂಬರ್ 28ರ ತನಕ ಮುಂದುವರಿಯುವ ಮುನ್ಸೂಚನೆ ಇದೆ. 



23 November 2022

24.11.2022ರ ಬೆಳಿಗ್ಗೆ 8 ಗಂಟೆವರೆಗೆ ಕರ್ನಾಟಕದ ವಾತಾವರಣ ಹೇಗಿರುತ್ತೆ

24.11. 2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಮೋಡ ಕವಿದ ವಾತಾವರಣ ಇರಲಿದ್ದು ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ. 

ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ, ಉಡುಪಿಯ ಕಾರ್ಕಳ ಸುತ್ತಮುತ್ತ ಭಾಗಗಳಲ್ಲಿ ಸಾಮಾನ್ಯ ಮಳೆಯ ಸಾಧ್ಯತೆ ಇದೆ. 

ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಚಾಮರಾಜನಗರ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. 

ಹಾಸನ, ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಹಾವೇರಿ, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಅಲ್ಲಲ್ಲಿ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದೆ. 

ತಮಿಳುನಾಡು ಕರಾವಳಿಯಲ್ಲಿರುವ ವಾಯುಭಾರ ಕುಸಿತ ಇವತ್ತು ರಾತ್ರಿ ಸಂಪೂರ್ಣ ಶಿಥಿಲಗೊಳ್ಳುವ ಲಕ್ಷಣಗಳಿದ್ದರೂ ಇದರ ಪರಿಣಾಮ ನವೆಂಬರ್ 29ರ ತನಕ ಮುಂದುವರಿಯುವ ಮುನ್ಸೂಚನೆ ಇದೆ. ನವೆಂಬರ್ 30ರಿಂದ ರಾಜ್ಯದಾದ್ಯಂತ ಛಳಿ ಮತ್ತು ಒಣ ಹವೆ ಮುಂದುವರಿಯಲಿದೆ. 


22 November 2022

23.11.2022ರ ಬೆಳಿಗ್ಗೆ 8 ಗಂಟೆವರೆಗೆ ಕರ್ನಾಟಕದ ವಾತಾವರಣ ಹೇಗಿರುತ್ತೆ

23.11.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಾದ್ಯಂತ ಹಗುರಾಗಿ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದೆ. ಉಡುಪಿ ಜಿಲ್ಲೆಯ ಹೆಚ್ಚಿನ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 

ಕೊಡಗು, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಪಾವಗಡ, ದಾವಣಗೆರೆ, ಚಿಕ್ಕಮಗಳೂರು, ಶಿವಮೊಗ್ಗ, ಧಾರವಾಡ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಅಲ್ಲಲ್ಲಿ ಮೋಡವಿದ್ದರೂ ಮಳೆಯ ಸಾಧ್ಯತೆ ಕಡಿಮೆ ಇರಬಹುದು. 

ವಾಯುಭಾರ ಕುಸಿತವು ನಾಳೆ ರಾತ್ರಿ ಅಥವಾ ನವೆಂಬರ್ 24 ರಂದು ತಮಿಳುನಾಡು ಕರಾವಳಿಯಲ್ಲಿಯೇ ಶಿಥಿಲಗೊಳ್ಳುವ ಲಕ್ಷಣಗಳಿವೆ. 
ನವೆಂಬರ್ 23 ರಂದು ಕರ್ನಾಟಕ ಕರಾವಳಿಯಾದ್ಯಂತ, ಮಲೆನಾಡು, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಹೆಚ್ಚಿನ ಭಾಗಗಳಲ್ಲ ಮೋಡ ಮತ್ತು ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ನಾಡಿದ್ದು ನವೆಂಬರ್ 24, 25ರಂದು ಕರಾವಳಿ, ಮಲೆನಾಡು, ದಕ್ಷಿಣ ಒಳನಾಡು ಭಾಗಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 


20 November 2022

21.11.2022ರ ಬೆಳಿಗ್ಗೆ 8 ಗಂಟೆವರೆಗೆ ಕರ್ನಾಟಕದ ವಾತಾವರಣ ಹೇಗಿರುತ್ತೆ



21.11.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ನಿರೀಕ್ಷೆಯಂತೆ ತಮಿಳುನಾಡು, ಪಾಂಡಿಚೇರಿ ಕರಾವಳಿ ಸಮೀಪ ತಲುಪಿದ್ದು, ಉತ್ತರ ಭಾರತದ ಕಡೆಯಿಂದ ಈಗ ಬೀಸುತ್ತಿರುವ ಛಳಿ ಗಾಳಿಯ ತೀವ್ರತೆಯು ವಾಯುಭಾರ ಕುಸಿತಕ್ಕೆ ಭೂಮಿಗೆ ಪ್ರವೇಶಿಸಲು ತಡೆಯಾಗುತ್ತಿದೆ. 

ಈಗನ ಮುನ್ಸೂಚನೆಯಂತೆ ವಾಯುಭಾರ ಕುಸಿತವು ನವೆಂಬರ್ 22ರಿಂದ ನಿಧಾನವಾಗಿ ತನ್ನ ತೀವ್ರತೆಯನ್ನು ಕಳೆದುಕೊಳ್ಳುತ್ತಾ ಪಾಂಡಿಚೇರಿ ಕರಾವಳಿಯಲ್ಲಿಯೇ ಶಿಥಿಲಗೊಳ್ಳುವ ಲಕ್ಷಣಗಳಿವೆ. 

ಪರಿಣಾಮವಾಗಿ ರಾಜ್ಯದಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆ ಕಡಿಮೆಯಾಗುತ್ತಿದೆ. 
ನವೆಂಬರ್ 21ರಿಂದ ದಕ್ಷಿಣ ಒಳನಾಡು, ದಕ್ಷಿಣ ಕರಾವಳಿ, ಮಲೆನಾಡು, ಮಧ್ಯ ಕರ್ನಾಟಕದ ಭಾಗಗಳಲ್ಲಿ ಛಳಿಯ ತೀವ್ರತೆ ಕಡಿಮೆಯಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆಯೂ ಇದೆ. 22ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 
ಈ ವಾತಾವರಣವು ನವೆಂಬರ್ 25ರಿಂದ ಕಡಿಮೆಯಾಗಿ ಪುನಃ ಛಳಿ ಆರಂಭವಾದರೂ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ನವೆಂಬರ್ 28ರ ತನಕವೂ ಮೋಡ ಅಥವಾ ಅಲ್ಲಲ್ಲಿ ಮಳೆ ಮುಂದುವರಿಯುವ ಲಕ್ಷಣಗಳಿವೆ. 

17 November 2022

18.11.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ವರದಿ

18.11.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ರಾಜ್ಯದಾದ್ಯಂತ ನವೆಂಬರ್ 19ರ ತನಕ ಒಣ ಹವೆ ಹಾಗೂ ಛಳಿಯ ವಾತಾವರಣ ಇರಲಿದೆ.

ಈ ಮೊದಲೆ ನಿರೀಕ್ಷಿಸಿದಂತೆ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗುತ್ತಿದ್ದು, ನವೆಂಬರ್ 20ರಂದು ತಮಿಳುನಾಡಿನ ವೇಲಂಕಣಿ, ಪಾಂಡಿಚೇರಿ ಮಧ್ಯ ಪ್ರವೇಶಿಸಲಿದೆ. ಇದೇ ವೇಳೆಗೆ ರಾಜ್ಯದ ದಕ್ಷಿಣ ಒಳನಾಡು ಭಾಗಗಳಲ್ಲಿ ಛಳಿ ಕಡಿಮೆಯಾಗಿ ಮೋಡ ಕವಿದ ವಾತಾವರಣ ಇರಲಿದ್ದು ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ನವೆಂಬರ್ 21ರಿಂದ ಮಲೆನಾಡು ಹಾಗೂ ಕರಾವಳಿ ಭಾಗಗಳಲ್ಲಿಯೂ ಮೋಡ ಕವಿದ ವಾತಾವರಣದೊಂದಿಗೆ ಅಲ್ಲಲ್ಲಿ ನವೆಂಬರ್ 26ರ ತನಕ ಮಳೆಯ ಮುನ್ಸೂಚನೆ ಇದೆ.
ಆಮೇಲೆ ಒಣ ಹವೆ ಮುಂದುವರಿಯಲಿದೆ.

16 November 2022

17.11.2022ರ ಬೆಳಿಗ್ಗೆ 8 ಗಂಟೆವರೆಗೆ ಕರ್ನಾಟಕದ ವಾತಾವರಣ ಹೇಗಿರುತ್ತೆ

17.11. 2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಹಾಗೂ ದಕ್ಷಿಣ ಕನ್ನಡದ ಅಲ್ಲಲ್ಲಿ ಮೋಡದ ವಾತಾವರಣ ಇರಲಿದ್ದು, ಸಂಜೆ ಸುಬ್ರಹ್ಮಣ್ಯ, ಸುಳ್ಯ ಸುತ್ತಮುತ್ತ ಅಲ್ಲಲ್ಲಿ  ತುಂತುರು ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ. 

ಅಂಡಮಾನ್ ಕರಾವಳಿಯಲ್ಲಿ ಈಗ ಉಂಟಾಗುತ್ತಿರುವ ವಾಯುಭಾರ ಕುಸಿತವು ನವೆಂಬರ್ 19ರಂದು ತಮಿಳುನಾಡು ಕರಾವಳಿಗೆ ತಲಪುವ ನಿರೀಕ್ಷೆಯಿದೆ. 
ನವೆಂಬರ್ 20ರಿಂದ ದಕ್ಷಿಣ ಒಳನಾಡು ಹಾಗೂ 21 ರಿಂದ ಮಲೆನಾಡು, ಕರಾವಳಿ ಭಾಗಗಳಲ್ಲಿ ಮತ್ತೆ ಮೋಡ, ಮಳೆಯ ಮುನ್ಸೂಚನೆ ಇದೆ. ಈಗಿನ ಪ್ರಕಾರ ನವೆಂಬರ್ 25 ರ ತನಕವೂ ಮಳೆ ಮುಂದುವರಿಯುವ ಲಕ್ಷಣಗಳಿವೆ. 

15 November 2022

16.11.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

16.11. 2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಾದ್ಯಂತ ಮೋಡ ಕವಿದ ವಾತಾವರಣ ಇರಲಿದ್ದು ಸಂಜೆ, ರಾತ್ರಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 

ಕೊಡಗು, ಚಾಮರಾಜನಗರ, ಶಿೃಂಗೇರಿ, ಕುದುರೆಮುಖ, ತೀರ್ಥಹಳ್ಳಿ, ಹೊಸನಗರ ಭಾಗಗಳಲ್ಲಿ ಸಹ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 

ಹಾಸನ, ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಮೋಡ ಕವಿದ ವಾತಾವರಣದೊಂದಿಗೆ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 

ನವೆಂಬರ್ 16ರಿಂದ ಬಂಗಾಳಕೊಲ್ಲಿಯ ಅಂಡಮಾನ್ ಕರಾವಳಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆ ಇದ್ದು, ಈ ಮೊದಲ ವಾಯುಭಾರ ಕುಸಿತ ಸಾಗಿದ ಹಾದಿಯಲ್ಲೇ ಸಾಗುವ ಲಕ್ಷಣಗಳಿವೆ. 
ಪರಿಣಾಮವಾಗಿ ನವೆಂಬರ್ 20ರ ನಂತರ ದಕ್ಷಿಣ ಒಳನಾಡು, ಮಲೆನಾಡು ಹಾಗೂ ಕರಾವಳಿ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. 



14 November 2022

15.11.2022ರ ಬೆಳಿಗ್ಗೆ 8 ಗಂಟೆವರೆಗೆ ಕರ್ನಾಟಕದ ವಾತಾವರಣ ಹೇಗಿರುತ್ತೆ

15.11.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಬಿಸಿಲಿನ ವಾತಾವರಣ ಇರಲಿದ್ದು ಸಂಜೆ ಹೆಚ್ಚಿನ ಭಾಗಗಳಲ್ಲಿ ಮೋಡ ಕವಿದು ಅಲ್ಲಲ್ಲಿ ಗುಡುಗು ಸಹಿತ ತುಂತುರು ಮಳೆಯ ಮುನ್ಸೂಚನೆ ಇದೆ. ಒಂದೆರಡು ಕಡೆ ಸ್ವಲ್ಪ ಜಾಸ್ತಿ ಇರಬಹುದು. 

ಕೊಡಗು, ಶಿೃಂಗೇರಿ, ತೀರ್ಥಹಳ್ಳಿ, ಹೊಸನಗರ, ಸಾಗರ ಸುತ್ತಮುತ್ತ ಭಾಗಗಳಲ್ಲಿ, ಚಿಕ್ಕಬಳ್ಳಾಪುರ ಒಂದೆರಡು ಕಡೆ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಮೈಸೂರು, ಚಾಮರಾಜನಗರ, ಹಾಸನ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿಕ್ಕಮಗಳೂರು, ಶಿವಮೊಗ್ಗ, ಹಾವೇರಿ ಜಿಲ್ಲೆಗಳಲ್ಲಿ ಸಂಜೆ ಅಲ್ಲಲ್ಲಿ ಮೋಡ ಅಥವಾ ಒಂದೆರಡು ಕಡೆ ಗುಡುಗು ಸಹಿತ ತುಂತುರು ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ. 

ಈಗನ ಮುನ್ಸೂಚನೆಯಂತೆ ಇನ್ನೆರಡು ದಿನಗಳ ಕಾಲ ಕರಾವಳಿ ಭಾಗಗಳಲ್ಲಿ ಅಲ್ಲಲ್ಲಿ ಮೋಡ, ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದರೂ ವಾತಾವರಣದ ಉಷ್ಣಾಂಶ ಏರಿಕೆಯಾಗದ ಹೊರತು ಮಳೆಯ ಸಾಧ್ಯತೆ ಕಡಿಮೆ. 
ನವೆಂಬರ್ 17ರಿಂದ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ. 

13 November 2022

14.11.2022ರ ಬೆಳಿಗ್ಗೆ 8 ಗಂಟೆವರೆಗೆ ಕರ್ನಾಟಕದ ವಾತಾವರಣ ಹೇಗಿರುತ್ತೆ

14.11.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಅಲ್ಲಲ್ಲಿ, ಕಾಸರಗೋಡು - ದಕ್ಷಿಣ ಕನ್ನಡ ಗಡಿ ಭಾಗಗಳಲ್ಲಿ, ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ, ಉಡುಪಿಯ ಅಲ್ಲಲ್ಲಿ, ಉತ್ತರ ಕನ್ನಡ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 

ಕೊಡಗು, ಶಿೃಂಗೇರಿ, ಬಾಳೆಹೊನ್ನೂರು, ಕುದುರೆಮುಖ, ಕೊಪ್ಪ, ಆಗುಂಬೆ, ತೀರ್ಥಹಳ್ಳಿ, ಹೊಸನಗರ, ಸಾಗರ ಸುತ್ತಮುತ್ತ, ಮೈಸೂರು, ಚಿಕ್ಕಮಗಳೂರು, ಶಿವಮೊಗ್ಗ ಹಾಗೂ ರಾಮನಗರ ಜಿಲ್ಲೆಗಳ ಒಂದೆರಡು ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. 

ಹಾಸನ, ಮಂಡ್ಯ, ಚಾಮರಾಜನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಹಾವೇರಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ. 

ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ತಮಿಳುನಾಡು ಹಾಗೂ ಕೇರಳ ಮೂಲಕ ಚಲಿಸಿ ಅರಬ್ಬಿ ಸಮುದ್ರಕ್ಕೆ ಕಾಲಿಟ್ಟಿದೆ. ಇದರ ಪರಿಣಾಮದಿಂದ ಹಿಂಗಾರು ಸ್ವಲ್ಪ ಮಟ್ಟಿಗೆ ಪ್ರಭಾವಿತಗೊಳ್ಳಬಹುದಾದರೂ ವಾತಾವರಣದ ಉಷ್ಣತೆ ಏರಿಕೆಯಾಗದ ಕಾರಣ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗುತ್ತಿಲ್ಲ. 
ವಾತಾವರಣದ ಉಷ್ಣಾಂಶ ತೀವ್ರ ಇಳಿಕೆಯಿಂದ ಮೋಡಗಳ ಸ್ಥರ ವಿಸ್ತರಣೆಯಾಗಬಹುದು. ಇದರಿಂದ ನಿರೀಕ್ಷಿತ ಪ್ರಮಾಣದ ಮಳೆಯಾಗದಿರಬಹುದು. 



12 November 2022

13.11.2022ರ ಬೆಳಿಗ್ಗೆ 8 ಗಂಟೆವರೆಗೆ ಕರ್ನಾಟಕದ ವಾತಾವರಣ ಹೇಗಿರುತ್ತೆ

13.11.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಾದ್ಯಂತ ಮೋಡ ಕವಿದ ವಾತಾವರಣದೊಂದಿಗೆ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 
ಛಳಿಯ ವಾತಾವರಣದೊಂದಿಗೆ ಮೋಡ ಕವಿದ ವಾತಾವರಣ ಇರುವುದರಿಂದ ನಿರೀಕ್ಷಿತ ಮಳೆಯ ಸಾಧ್ಯತೆ ಕಡಿಮೆ. ಈಗಿನ ಪ್ರಕಾರ ನವೆಂಬರ್ 13 ರಂದು ಅಲ್ಲಲ್ಲಿ ಸಾಮಾನ್ಯ ಮಳೆಯ ಸಾಧ್ಯತೆ ಇದೆ. 

ಕೊಡಗು, ಕುದುರೆಮುಖ, ಶಿೃಂಗೇರಿ ಹಾಗೂ ಚಾಮರಾಜನಗರ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ದಾವಣಗೆರೆ, ಚಿತ್ರದುರ್ಗ, ಪಾವಗಡ, ತುಮಕೂರು, ಹಾಸನ, ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ ಭಾಗಗಳಲ್ಲಿ ಮೋಡದ ವಾತಾವರಣ ಇರಲಿದ್ದು ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ. 

ನವೆಂಬರ್ 19ರಿಂದ ಇನ್ನೂಂದು ವಾಯುಭಾರ ಕುಸಿತವು ತಮಿಳುನಾಡು ಕರಾವಳಿಗೆ ಅಪ್ಪಳಿಸುವ ಲಕ್ಷಣಗಳಿದ್ದು 20ರಿಂದ ರಾಜ್ಯದ ದಕ್ಷಿಣ ಒಳನಾಡು, ಮಲೆನಾಡು ಹಾಗೂ ಕರಾವಳಿ ಭಾಗಗಳಲ್ಲಿ ಮತ್ತೆ ಮೋಡ, ಮಳೆಯ ವಾತಾವರಣದ ಮುನ್ಸೂಚನೆ ಇದೆ. 



07.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

07.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಸಂ...