01.12.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಬಿಸಿಲು ಹಾಗೂ ಒಣ ಹವೆ ಇರಲಿದ್ದು, ದಕ್ಷಿಣ ಕನ್ನಡ ಹಾಗೂ ಕಾಸರಗೋಡು ಜಿಲ್ಲೆಗಳಲ್ಲಿ ಸಂಜೆ ಅಲ್ಲಲ್ಲಿ ಮೋಡ ವಾತಾವರಣದ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ.
ಡಿಸೆಂಬರ್ 1 ರಿಂದ ರಾಜ್ಯದ ಒಳನಾಡು ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಲಕ್ಷಣಗಳಿದ್ದು ಡಿಸೆಂಬರ್ 2 ರಿಂದ ಕರಾವಳಿ ಭಾಗಗಳಲ್ಲಿ ಸಹ ಮೋಡ ಹಾಗೂ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಈ ವಾತಾವರಣವು ದಕ್ಷಿಣ ಕರ್ನಾಟಕದ ಹೆಚ್ಚಿನ ಭಾಗಗಳಲ್ಲಿ ಡಿಸೆಂಬರ್ 10ರ ವರೆಗೂ ಮುಂದುವರಿಯುವ ಲಕ್ಷಣಗಳಿವೆ.
ಈ ಮಧ್ಯೆ ಡಿಸೆಂಬರ್ 6, 7 ರಂದು ದಕ್ಷಿಣ ತಮಿಳುನಾಡಿಗೆ ಚಂಡಮಾರುತ ಅಪ್ಪಳಿಸುವ ಲಕ್ಷಣಗಳಿವೆ.
No comments:
Post a Comment