02.11.2022ರ ಬೆಳಿಗ್ಗೆ 8 ಗಂಟೆವರೆಗೆ ಕರ್ನಾಟಕದ ವಾತಾವರಣ ಹೇಗಿರುತ್ತೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಒಣ ಹವೆ ಮುಂದುವರಿಯಲಿದೆ. ಸಂಜೆಯ ವೇಳೆಗೆ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ ಸುತ್ತಮುತ್ತ ಮೋಡ ಅಥವಾ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.
ಚಾಮರಾಜನಗರ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದ್ದರೆ ರಾಮನಗರ, ಬೆಂಗಳೂರು, ಕೋಲಾರ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಚಿಕ್ಕಬಳ್ಳಾಪುರ, ತುಮಕೂರು, ಮಂಡ್ಯ, ಮೈಸೂರು, ಹಾಸನ, ಕೊಡಗು, ಮೂಡಿಗೆರೆ, ಶಿೃಂಗೇರಿ, ತೀರ್ಥಹಳ್ಳಿ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಚಿತ್ರದುರ್ಗ, ಬಳ್ಳಾರಿ, ರಾಯಚೂರು ಜಿಲ್ಲೆಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ
ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ.
ಆಂದ್ರಾ ಹಾಗೂ ತಮಿಳುನಾಡು ಕರಾವಳಿ ಭಾಗಗಳಲ್ಲಿ ಹಿಂಗಾರು ಒತ್ತಡ ಹೆಚ್ಚಾದರೂ ಕರ್ನಾಟಕ ಪ್ರವೇಶಿಸಲು ಸಾಲುತ್ತಿಲ್ಲ.
No comments:
Post a Comment