Advertise

04 November 2022

05.11.2022ರ ಬೆಳಿಗ್ಗೆ 8 ಗಂಟೆವರೆಗೆ ಕರ್ನಾಟಕದ ವಾತಾವರಣ ಹೇಗಿರುತ್ತೆ


05.11.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಾದ್ಯಂತ ಮೋಡದ ವಾತಾವರಣ ಇರಲಿದ್ದು ಮಧ್ಯಾಹ್ನ ಮೇಲೆ ಅಲ್ಲಲ್ಲಿ ತುಂತುರು ಕೆಲವೆಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಕೊಡಗು, ಸೋಮವಾರಪೇಟೆ, ಬಾಳೆಹೊನ್ನೂರು, ಶಿೃಂಗೇರಿ, ಕುದುರೆಮುಖ ಸುತ್ತಮುತ್ತ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂ ಜಿಲ್ಲೆಗಳ ರು ಹೆಚ್ಚಿನ ಭಾಗಗಳಲ್ಲಿ, ಬಳ್ಳಾರಿ, ರಾಯಚೂರು ಅಲ್ಲಲ್ಲಿ ಮೋಡದ ವಾತಾವರಣ ಇರಲಿದ್ದು ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಹೆಚ್ಚಿನ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ. ಕೆಲವೆಡೆ ಮೋಡದ ಸಾಧ್ಯತೆ ಇದೆ. 

ಅರಬ್ಬಿ ಸಮುದ್ರದಲ್ಲಿ ಉತ್ತರ ಕೇರಳ ಹಾಗೂ ದಕ್ಷಿಣ ಕರ್ನಾಟಕದ ಕರಾವಳಿಯ ಬಳಿ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗಿದ್ದು, ಹಿಂಗಾರು ಸೆಳೆಯುವಲ್ಲಿ ಸ್ವಲ್ಪ ಮಟ್ಟಿಗೆ ಸಫಲವಾದೀತು. 
ಈಗನ ಪ್ರಕಾರ ನವೆಂಬರ್ 7 ರ ನಂತರ ಬಂಗಾಳಕೊಲ್ಲಿಯಲ್ಲಿ ಶ್ರೀಲಂಕಾ ಹಾಗೂ ನಿಕೋಬಾರ್ ಮಧ್ಯೆ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿವೆ. ಇದರಿಂದ ಹಿಂಗಾರು ಮತ್ತಷ್ಟು ದುರ್ಬಲಗೊಳ್ಳುವ ಸಾಧ್ಯತೆ ಇದೆ. 



No comments:

Post a Comment

19.09.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

19.09.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು ಸೇರಿದಂತೆ ರಾಜ...