06.11.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತದಂತಹ ತಿರುವಿಕೆಯಿಂದ ಹಿಂಗಾರು ಚುರುಕುಗೊಂಡು ನಿನ್ನೆ ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಉತ್ತಮ ಮಳೆಯಾಗಿದೆ.
ಇವತ್ತು ಸಹ ತಿರುಗುವಿಕೆ ಮುಂದುವರಿದಿದ್ದು, ಸ್ವಲ್ಪ ದಕ್ಷಿಣಕ್ಕಿದೆ ಚಲಿಸಿರುವುದರಿಂದ ಕೇರಳದಲ್ಲಿ ಹೆಚ್ಚು ಮಳೆಯ ಸಾಧ್ಯತೆ ಇದೆ.
ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಅಲ್ಲಲ್ಲಿ ಮೋಡ ಅಥವಾ ತುಂತುರು ಮಳೆ ಸಾಧ್ಯತೆ ಇದೆ.
ಕೊಡಗು, ಶಿೃಂಗೇರಿ, ಕುದುರೆಮುಖ ಭಾಗಗಳಲ್ಲಿ ಮೈಸೂರು ಹಾಗೂ ಚಾಮರಾಜನಗರದ ಒಂದೆರಡು ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.
ಚಿಕ್ಕಮಗಳೂರು ಅಲ್ಲಲ್ಲಿ, ಶಿವಮೊಗ್ಗ ಒಂದೆರಡು ಕಡೆ, ಹಾಸನ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಬಳ್ಳಾರಿ, ರಾಯಚೂರು ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡ ಅಥವಾ ತುಂತುರು ಮಳೆಯ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ
ನವೆಂಬರ್ 7 ರ ನಂತರ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿರುವುದರಿಂದ ಇವತ್ತಿನಿಂದ ರಾಜ್ಯದಾದ್ಯಂತ ಮಳೆಯ ಪ್ರಮಾಣ ಕಡಿಮೆಯಾಗುವ ಮುನ್ಸೂಚನೆ ಇದೆ.
ಈಗನ ಪರಿಸ್ಥಿತಿಯಂತೆ ನವೆಂಬರ್ 12ರಿಂದ ಮತ್ತೆ ದಕ್ಷಿಣ ಒಳನಾಡು, ಮಲೆನಾಡು ಹಾಗೂ ದಕ್ಷಿಣ ಕರಾವಳಿ ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.
No comments:
Post a Comment