Advertise

06 November 2022

07.11.2022ರ ಬೆಳಿಗ್ಗೆ 8 ಗಂಟೆವರೆಗೆ ಕರ್ನಾಟಕದ ವಾತಾವರಣ ಹೇಗಿರುತ್ತೆ

07.11.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಅಲ್ಲಲ್ಲಿ, ಕೊಡಗು ಉತ್ತಮ ಮಳೆಯ ಕಾರಣ ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ ಸುತ್ತಮುತ್ತ ಸಹ ಮಳೆಯ ಮುನ್ಸೂಚನೆ ಇದೆ. ಬೆಳ್ತಂಗಡಿ, ಧರ್ಮಸ್ಥಳ, ಕಾರ್ಕಳ ಸುತ್ತಮುತ್ತ ಸಹ ಮಳೆಯ ಮುನ್ಸೂಚನೆ ಇದೆ. ಉಡುಪಿ ಹಾಗೂ ಉತ್ತರ ಕನ್ನಡ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 

ಕೊಡಗು ಉತ್ತಮ, ಬಾಳೆಹೊನ್ನೂರು, ಕುದುರೆಮುಖ, ಶಿೃಂಗೇರಿ, ತೀರ್ಥಹಳ್ಳಿ, ಹೊಸನಗರ, ಬೆಂಗಳೂರು ದಕ್ಷಿಣ ಹಾಗೂ ರಾಮನಗರ ಭಾಗಗಳಲ್ಲಿ ಸಹ ಮಳೆಯ ಮುನ್ಸೂಚನೆ ಇದೆ. 
ಮೈಸೂರು, ಮಂಡ್ಯ, ಚಾಮರಾಜನಗರ, ಹಾಸನ, ಉಳಿದ ಬೆಂಗಳೂರು, ಕೋಲಾರ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ. 

ದುರ್ಬಲ ಹಿಂಗಾರು ಮುಂದುವರಿಯಲಿದೆ. 
ನವೆಂಬರ್ 7 ರ ನಂತರ ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಹಿಂಗಾರನ್ನು ಮತ್ತಷ್ಟು ದುರ್ಬಲಗೊಳಿಸಬಹುದು. 




No comments:

Post a Comment

20.04. 2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

20.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು, ದಕ್ಷಿಣ ಕನ್ನ...