08.11.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸಂಜೆ ಹೆಚ್ಚಿನ ಭಾಗಗಳಲ್ಲಿ ಮೋಡ ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆ ಇದೆ. ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ ಸುತ್ತಮುತ್ತ ಸಂಜೆ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದರೆ ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡ ಮಾತ್ರ ಇರಬಹುದು. ಉಡುಪಿ ಹಾಗೂ ಉತ್ತರ ಕನ್ನಡ ಒಣ ಹವೆ ಮುಂದುವರಿಯಲಿದೆ.
ಕೊಡಗು ಹಾಗೂ ಮೈಸೂರು ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಹಾಸನ, ಚಾಮರಾಜನಗರ, ಮಂಡ್ಯ, ರಾಮನಗರ, ಸಂಜೆಯ ವೇಳೆಗೆ ಅಲ್ಲಲ್ಲಿ ಮೋಡದ ವಾತಾವರಣದ ಸಾಧ್ಯತೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ.
ಈಗನ ಮುನ್ಸೂಚನೆಯಂತೆ ನವೆಂಬರ್ 8ರಂದು ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆ ಇರುವುದರಿಂದ ಹಿಂಗಾರು ತಾತ್ಕಾಲಿಕವಾಗಿ ದುರ್ಬಲಗೊಂಡು, ನವೆಂಬರ್ 12 ಅಥವಾ 13ರಿಂದ ದಕ್ಷಿಣ ಕರಾವಳಿ, ಕೊಡಗು ಹಾಗೂ ಒಳನಾಡು ಭಾಗಗಳಲ್ಲಿ ಮತ್ತೆ ಮಳೆಯ ಮುನ್ಸೂಚನೆ ಇದೆ.
No comments:
Post a Comment