Advertise

12 November 2022

13.11.2022ರ ಬೆಳಿಗ್ಗೆ 8 ಗಂಟೆವರೆಗೆ ಕರ್ನಾಟಕದ ವಾತಾವರಣ ಹೇಗಿರುತ್ತೆ

13.11.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಾದ್ಯಂತ ಮೋಡ ಕವಿದ ವಾತಾವರಣದೊಂದಿಗೆ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 
ಛಳಿಯ ವಾತಾವರಣದೊಂದಿಗೆ ಮೋಡ ಕವಿದ ವಾತಾವರಣ ಇರುವುದರಿಂದ ನಿರೀಕ್ಷಿತ ಮಳೆಯ ಸಾಧ್ಯತೆ ಕಡಿಮೆ. ಈಗಿನ ಪ್ರಕಾರ ನವೆಂಬರ್ 13 ರಂದು ಅಲ್ಲಲ್ಲಿ ಸಾಮಾನ್ಯ ಮಳೆಯ ಸಾಧ್ಯತೆ ಇದೆ. 

ಕೊಡಗು, ಕುದುರೆಮುಖ, ಶಿೃಂಗೇರಿ ಹಾಗೂ ಚಾಮರಾಜನಗರ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ದಾವಣಗೆರೆ, ಚಿತ್ರದುರ್ಗ, ಪಾವಗಡ, ತುಮಕೂರು, ಹಾಸನ, ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ ಭಾಗಗಳಲ್ಲಿ ಮೋಡದ ವಾತಾವರಣ ಇರಲಿದ್ದು ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ. 

ನವೆಂಬರ್ 19ರಿಂದ ಇನ್ನೂಂದು ವಾಯುಭಾರ ಕುಸಿತವು ತಮಿಳುನಾಡು ಕರಾವಳಿಗೆ ಅಪ್ಪಳಿಸುವ ಲಕ್ಷಣಗಳಿದ್ದು 20ರಿಂದ ರಾಜ್ಯದ ದಕ್ಷಿಣ ಒಳನಾಡು, ಮಲೆನಾಡು ಹಾಗೂ ಕರಾವಳಿ ಭಾಗಗಳಲ್ಲಿ ಮತ್ತೆ ಮೋಡ, ಮಳೆಯ ವಾತಾವರಣದ ಮುನ್ಸೂಚನೆ ಇದೆ. 



No comments:

Post a Comment

20.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

20.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರ್ನಾಟಕ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ...