ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಾದ್ಯಂತ ಮೋಡ ಕವಿದ ವಾತಾವರಣ ಇರಲಿದ್ದು ಸಂಜೆ, ರಾತ್ರಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಕೊಡಗು, ಚಾಮರಾಜನಗರ, ಶಿೃಂಗೇರಿ, ಕುದುರೆಮುಖ, ತೀರ್ಥಹಳ್ಳಿ, ಹೊಸನಗರ ಭಾಗಗಳಲ್ಲಿ ಸಹ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಹಾಸನ, ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಮೋಡ ಕವಿದ ವಾತಾವರಣದೊಂದಿಗೆ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ನವೆಂಬರ್ 16ರಿಂದ ಬಂಗಾಳಕೊಲ್ಲಿಯ ಅಂಡಮಾನ್ ಕರಾವಳಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆ ಇದ್ದು, ಈ ಮೊದಲ ವಾಯುಭಾರ ಕುಸಿತ ಸಾಗಿದ ಹಾದಿಯಲ್ಲೇ ಸಾಗುವ ಲಕ್ಷಣಗಳಿವೆ.
ಪರಿಣಾಮವಾಗಿ ನವೆಂಬರ್ 20ರ ನಂತರ ದಕ್ಷಿಣ ಒಳನಾಡು, ಮಲೆನಾಡು ಹಾಗೂ ಕರಾವಳಿ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.
No comments:
Post a Comment