Advertise

22 November 2022

23.11.2022ರ ಬೆಳಿಗ್ಗೆ 8 ಗಂಟೆವರೆಗೆ ಕರ್ನಾಟಕದ ವಾತಾವರಣ ಹೇಗಿರುತ್ತೆ

23.11.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಾದ್ಯಂತ ಹಗುರಾಗಿ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದೆ. ಉಡುಪಿ ಜಿಲ್ಲೆಯ ಹೆಚ್ಚಿನ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 

ಕೊಡಗು, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಪಾವಗಡ, ದಾವಣಗೆರೆ, ಚಿಕ್ಕಮಗಳೂರು, ಶಿವಮೊಗ್ಗ, ಧಾರವಾಡ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಅಲ್ಲಲ್ಲಿ ಮೋಡವಿದ್ದರೂ ಮಳೆಯ ಸಾಧ್ಯತೆ ಕಡಿಮೆ ಇರಬಹುದು. 

ವಾಯುಭಾರ ಕುಸಿತವು ನಾಳೆ ರಾತ್ರಿ ಅಥವಾ ನವೆಂಬರ್ 24 ರಂದು ತಮಿಳುನಾಡು ಕರಾವಳಿಯಲ್ಲಿಯೇ ಶಿಥಿಲಗೊಳ್ಳುವ ಲಕ್ಷಣಗಳಿವೆ. 
ನವೆಂಬರ್ 23 ರಂದು ಕರ್ನಾಟಕ ಕರಾವಳಿಯಾದ್ಯಂತ, ಮಲೆನಾಡು, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಹೆಚ್ಚಿನ ಭಾಗಗಳಲ್ಲ ಮೋಡ ಮತ್ತು ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ನಾಡಿದ್ದು ನವೆಂಬರ್ 24, 25ರಂದು ಕರಾವಳಿ, ಮಲೆನಾಡು, ದಕ್ಷಿಣ ಒಳನಾಡು ಭಾಗಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 


No comments:

Post a Comment

20.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

20.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರ್ನಾಟಕ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ...