26.11.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಸಂಜೆ ಮೋಡ ಕವಿದ ವಾತಾವರಣದೊಂದಿಗೆ ಅಲ್ಲಲ್ಲಿ ಗುಡುಗು ಸಹಿತ ತುಂತುರು ಮಳೆಯ ಮುನ್ಸೂಚನೆ ಇದೆ.
ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಧಾರವಾಡ, ಬೆಳಗಾವಿ, ಮೈಸೂರು ಜಿಲ್ಲಾ ಭಾಗಗಳಲ್ಲಿ ಅಲ್ಲಲ್ಲಿ ಸಂಜೆ ಮೋಡ ಕವಿದ ವಾತಾವರಣದೊಂದಿಗೆ ಒಂದೆರಡು ಕಡೆ ಗುಡುಗು ಸಹಿತ ತುಂತುರು ಮಳೆಯ ಮುನ್ಸೂಚನೆ ಇದೆ. ಹೊಸನಗರ, ಸಾಗರ ಸುತ್ತಮುತ್ತ ಸ್ವಲ್ಪ ಜಾಸ್ತಿ ಇರಬಹುದು.
ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ.
ಈಗನ ಈ ವಾತಾವರಣವು ನವೆಂಬರ್ ಕೊನೆಯ ತನಕವೂ ಮುಂದುವರಿಯುವ ಲಕ್ಷಣಗಳಿವೆ.
No comments:
Post a Comment