Advertise

28 December 2022

29.12.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

29.12.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಮೋಡ ಅಥವಾ ತುಂತುರು ಮಳೆಯ ಮುನ್ಸೂಚನೆ ಇದೆ. 

ಕೊಡಗು, ಮೈಸೂರು, ಹಾಸನ, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಮೋಡ ಅಥವಾ ತುಂತುರು ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ. 

ಈಗನ ಮುನ್ಸೂಚನೆಯಂತೆ ಡಿಸೆಂಬರ್ 29ರಿಂದ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ. 
ಬಂಗಾಳಕೊಲ್ಲಿಯ ಭಾಗದಿಂದ ಬೀಸುತ್ತಿರುವ ಗಾಳಿಯ ಪ್ರಭಾವದಿಂದ ದಕ್ಷಿಣ ಒಳನಾಡು, ಮಲೆನಾಡು ಹಾಗೂ ದಕ್ಷಿಣ ಕರಾವಳಿ ಭಾಗಗಳಲ್ಲಿ ಛಳಿ ತೀವ್ರತೆ ಪಡೆದುಕೊಳ್ಳುವ ಸಾಧ್ಯತೆ ಕಡಿಮೆ ಇರಬಹುದು. 



27 December 2022

28.12.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

28.12.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಹಾಗೂ ಉಡುಪಿ ಜಿಲ್ಲಾ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದ್ದರೆ ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ದಕ್ಷಿಣ ಕನ್ನಡ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ. 

ಕೊಡಗು, ಮೂಡಿಗೆರೆ, ಶಿೃಂಗೇರಿ, ಕುದುರೆಮುಖ ಸುತ್ತಮುತ್ತ ಭಾಗಗಳಲ್ಲಿ, ಚಿಕ್ಕಮಗಳೂರು ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಮೈಸೂರು, ಮಂಡ್ಯ, ಹಾಸನ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಶಿವಮೊಗ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ. 

ಈಗಿನ ಮುನ್ಸೂಚನೆಯಂತೆ ಡಿಸೆಂಬರ್ 28ರಂದು ಉಡುಪಿ, ದಕ್ಷಿಣ ಕನ್ನಡ ಹಾಗೂ ಕಾಸರಗೋಡು ಜಿಲ್ಲೆಗಳಲ್ಲಿ ಮೋಡದ ವಾತಾವರಣ ಇದ್ದರೆ ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ. 
29ರಿಂದ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ. 

26 December 2022

27.12.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

27.12.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಅಲ್ಲಲ್ಲಿ ಮಧ್ಯಾಹ್ನ ಮೇಲೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಬೆಳ್ತಂಗಡಿ, ಧರ್ಮಸ್ಥಳ, ಸುಳ್ಯ, ಸುಬ್ರಹ್ಮಣ್ಯ ಸುತ್ತಮುತ್ತ ತುಂತುರು ಮಳೆಯ ಸಾಧ್ಯತೆ ಇದೆ. ಒಂದೆರಡು ಗುಡುಗು ಸಾಧ್ಯತೆಯೂ ಇದೆ. 

ಕೊಡಗು, ಮೈಸೂರು, ಹಾಸನ, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡದ ವಾತಾವರಣ ಇರಲಿದ್ದು ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 

ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು, ಶಿವಮೊಗ್ಗ, ಬಳ್ಳಾರಿ, ರಾಯಚೂರು ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ. 


25 December 2022

26.12.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

26.12.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಒಣ ಹವೆಯ ಜೊತೆಗೆ ಅಲ್ಲಿಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 
ಇವತ್ತಿನಿಂದ ಸ್ವಲ್ಪ ಮಟ್ಟಿಗೆ ಛಳಿ ಕಡಿಮೆಯಾಗುವ ಸಾಧ್ಯತೆ ಸಹ ಇದೆ. 

ಮೈಸೂರು, ಚಾಮರಾಜನಗರ,  ಬೆಂಗಳೂರು, ರಾಮನಗರ, ಕೋಲಾರ ಜಿಲ್ಲೆಗಳಲ್ಲಿ ಸಹ ಮೋಡದ ವಾತಾವರಣ ಇರಲಿದ್ದು ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ. 

ಕೊಡಗು, ಹಾಸನ, ಮಂಡ್ಯ, ರಾಮನಗರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಬಳ್ಳಾರಿ, ದಾವಣಗೆರೆ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ 

ವಾಯುಭಾರ ಕುಸಿತವು ಶ್ರೀಲಂಕಾ ದಾಟಿ ಅರಬ್ಬಿ ಸಮುದ್ರದಲ್ಲಿ ಪಶ್ಚಿಮಕ್ಕೆ ಸಾಗುವ ಲಕ್ಷಣಗಳಿವೆ. 
ಪರಿಣಾಮವಾಗಿ ರಾಜ್ಯದಲ್ಲಿ ಡಿಸೆಂಬರ್ 25ರಿಂದ ಛಳಿ ಸ್ವಲ್ಪ ಕಡಿಮೆಯಾಗಿ ಡಿಸೆಂಬರ್ 28ರ ತನಕ ಅಲ್ಲಲ್ಲಿ ಮೋಡ ವಾತಾವರಣದ ಇರಲಿದ್ದು ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆಯೂ ಇದೆ. 
ಡಿಸೆಂಬರ್ 29ರಿಂದ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ. 

20 December 2022

21.12.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

21.12.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಒಣ ಹವೆ ಮುಂದುವರಿಯಲಿದೆ. 

ಮೈಸೂರು ಹಾಗೂ ಚಾಮರಾಜನಗರ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಲಿದ್ದು, ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ. 

ದಿನ ಕಳೆದಂತೆ ಮಳೆಯ ಸಾಧ್ಯತೆ ಕ್ಷೀಣಿಸುತ್ತಿದೆ. 
ಬಂಗಾಳಕೊಲ್ಲಿಯ ವಾಯುಭಾರ ಕುಸಿತತಹ
 ತಿರುವಿಕೆಯ ಚಲನೆ ನಿಧಾನವಾಗಿದ್ದು, ಈಗಿನ ಪ್ರಕಾರ ಇನ್ನೆರಡು ದಿನಗಳಲ್ಲಿ ಶ್ರೀಲಂಕಾ ಕರಾವಳಿ ಸಮೀಪ ತಲುಪಿದರೂ ರಾಜ್ಯದ ದಕ್ಷಿಣ ಒಳನಾಡು ಭಾಗಗಳಲ್ಲಿ ಡಿಸೆಂಬರ್ 24ರಿಂದ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 

18 December 2022

19.12.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

19.12.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಒಣ ಹವೆ ಮುಂದುವರಿಯಲಿದೆ. 
ಸಂಜೆ ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಅಲ್ಲಲ್ಲಿ ಸ್ವಲ್ಪ ಮೋಡದ ವಾತಾವರಣ ಇರಬಹುದು. 

ಕೊಡಗು, ಮೈಸೂರು, ಹಾಸನ, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಪಾವಗಡ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ. 

ಈಗನ ಮುನ್ಸೂಚನೆಯಂತೆ ರಾಜ್ಯದಾದ್ಯಂತ ನಾಳೆ  ಸ್ವಚ್ಛ ವಾತಾವರಣ ಇರಲಿದ್ದು 20ರಿಂದ ಮತ್ತೆ ದಕ್ಷಿಣ ಒಳನಾಡು, ಕೊಡಗು ಹಾಗೂ ದಕ್ಷಿಣ ಕರಾವಳಿ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 
ಈಗಿನಂತೆ ಮಳೆಯ ಸಾಧ್ಯತೆ ಕಡಿಮೆಯಾಗುತ್ತಿದೆ. 



17 December 2022

18.12.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

18. 12.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ. 

ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು 19 ಅಥವಾ 20ರಂದು ದಕ್ಷಿಣ ಶ್ರೀಲಂಕಾ ಕರಾವಳಿ ಸಮೀಪ ಬಂದು ಅಲ್ಲಿಂದ ಉತ್ತರಾಭಿಮುಖವಾಗಿ ಚಲಿಸಿ ಡಿಸೆಂಬರ್ 21 ಅಥವಾ 22ರಂದು ತಮಿಳುನಾಡು ಕರಾವಳಿಗೆ ತಲುಪುವ ಸಾಧ್ಯತೆ ಇದೆ. 
ಪರಿಣಾಮವಾಗಿ ಡಿಸೆಂಬರ್ 18ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಲಿದ್ದು, 21 ಹಾಗೂ 22 ರಿಂದ ದಕ್ಷಿಣ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಬದಲಾಗಬಹುದು 


14 December 2022

15.12.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

15.12.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಹೆಚ್ಚಿನ ಭಾಗಗಳಲ್ಲಿ ಸಂಜೆ  ಗುಡುಗು ಸಹಿತ ಮಳೆಯ ಮುನ್ಸೂಚನೆ ಇದ್ದು, ಸುಳ್ಯ, ಪುತ್ತೂರು, ಬಂಟ್ವಾಳ, ವಿಟ್ ಸುತ್ತಮುತ್ತ ಭಾಗಗಳಲ್ಲಿ ಸಹ  ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 
ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸಂಜೆ ಹೆಚ್ಚಿನ ಭಾಗಗಳಲ್ಲಿ ಮೋಡದ ವಾತಾವರಣದೊಂದಿಗೆ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 

ಕೊಡಗು ಹಾಗೂ ಹೊಸನಗರ ಸುತ್ತಮುತ್ತ ಮಳೆಯ ಮುನ್ಸೂಚನೆ ಇದೆ. 

ಮೈಸೂರು, ಚಿಕ್ಕಮಗಳೂರು, ಶಿವಮೊಗ್ಗ, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಸಂಜೆ ಮೋಡ ಕವಿದ ವಾತಾವರಣದೊಂದಿಗೆ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಮಾಂಡೋಸ್ ಅರಬ್ಬಿ ಸಮುದ್ರದಲ್ಲಿ ಪಶ್ಚಿಮಕ್ಕೆ ಚಲಿಸುತ್ತಿದ್ದಂತಯೇ ಬಂಗಾಳಕೊಲ್ಲಿಯ ಉತ್ತರ ಸುಮಾತ್ರ ಕರಾವಳಿ ಭಾಗದಲ್ಲಿ ವಾಯುಭಾರ ಕುಸಿತದಂತಹ ತಿರುವಿಕೆ ಆರಂಭವಾಗಿದ್ದು, ಇನ್ನೆರಡು ದಿನಗಳಲ್ಲಿ ವಾಯುಭಾರ ಕುಸಿತವಾಗುವ ಲಕ್ಷಣಗಳಿವೆ. ಈಗಿನ ಪ್ರಕಾರ ಡಿಸೆಂಬರ್ 20ರಂದು ಮಧ್ಯೆ ಶ್ರೀಲಂಕಾ ಕರಾವಳಿಗೆ ಅಪ್ಪಳಿಸುವ ಸಾಧ್ಯತೆ ಇದೆ. 





13 December 2022

14.12.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

14.12. 2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚನೆ ಇದ್ದು ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.  ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯ ಪ್ರಮಾಣ ಸ್ವಲ್ಪ ಜಾಸ್ತಿ ಇರಬಹುದು. 

ಕೊಡಗು, ಮೂಡಿಗೆರೆ, ಶಿೃಂಗೇರಿ, ಕುದುರೆಮುಖ, ತೀರ್ಥಹಳ್ಳಿ, ಹೊಸನಗರ, ಸಾಗರ ಸುತ್ತಮುತ್ತ  ಮಳೆಯ ಮುನ್ಸೂಚನೆ ಇದೆ. ಗುಡುಗು ಸಹಿತ ಮಳೆಯ ಸಾಧ್ಯತೆ ಇದೆ. 

ಮೈಸೂರು, ಹಾಸನ, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಪಾವಗಡ, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು, ಶಿವಮೊಗ್ಗ, ಧಾರವಾಡ, ಬೆಳಗಾವಿ ಜಿಲ್ಲೆಗಳ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಮಾಂಡೋಸ್ ಮುಂದುವರಿದ ಭಾಗವು ಅರಬ್ಬಿ ಸಮುದ್ರದಲ್ಲಿ ಸ್ವಲ್ಪ ಮಟ್ಟಿಗೆ ಪ್ರಭಾವಿತಗೊಂಡಿದ್ದು ಮತ್ತಷ್ಟು ಪಶ್ಚಿಮಕ್ಕೆ ಚಲಿಸುವ ಲಕ್ಷಣಗಳಿವೆ. 
ನಾಳೆಯಿಂದ ಒಳನಾಡು ಭಾಗಗಳಲ್ಲಿ ಬಿಸಿಲಿನ ವಾತಾವರಣ ಹೆಚ್ಚಲಿದ್ದು ಸಂಜೆ ಅಲ್ಲಲ್ಲಿ ಮೋಡದ ವಾತಾವರಣದ ಲಕ್ಷಣಗಳಿವೆ. 15ರಿಂದ ಮಲೆನಾಡು ಹಾಗೂ ಕರಾವಳಿ ಭಾಗಗಳಲ್ಲಿಯೂ ಬಿಸಿಲು ವಾತಾವರಣ ಹೆಚ್ಚಿರುವ ಲಕ್ಷಣಗಳಿವೆ. 




12 December 2022

13.12.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

13.12.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಮೋಡ ಕವಿದ ವಾತಾವರಣದೊಂದಿಗೆ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 

ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಚಾಮರಾಜನಗರ, ರಾಮನಗರ, ಬೆಂಗಳೂರು, ತುಮಕೂರು, ಚಿತ್ರದುರ್ಗ, ದಾವಣಗೆರೆ, ರಾಯಚೂರು, ಯಾದಗಿರಿ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 

ಮೈಸೂರು, ಹಾಸನ, ಕೋಲಾರ, ಚಿಕ್ಕಬಳ್ಳಾಪುರ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಕೊಪ್ಪಳ ಬಳ್ಳಾರಿ, ಗದಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡದ ವಾತಾವರಣದೊಂದಿಗೆ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 

ಈಗನ ಈ ವಾತಾವರಣವು ಒಳನಾಡು ಭಾಗಗಳಲ್ಲಿ ನಾಳೆಯ ವರೆಗೆ ಮುಂದುವರಿಯಲಿದ್ದು ಡಿಸೆಂಬರ್ 14ರಿಂದ ಬಿಸಿಲು ಮೂಡುವ ಲಕ್ಷಣಗಳಿವೆ. 
ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಡಿಸೆಂಬರ್ 15ರಿಂದ ಬಿಸಿಲು ಮೂಡುವ ಸಾಧ್ಯತೆ ಇದೆ. 
ಈ ಮಧ್ಯೆ ಮ್ಯಾಂಡೋಸ್ ಚಂಡಮಾರುತವು ದುರ್ಬಲಗೊಂಡು ಅರಬ್ಬಿ ಸಮುದ್ರಕ್ಕೆ ಕಾಲಿಟ್ಟಿದೆ ಹಾಗೂ ಮತ್ತಷ್ಟು ಪಶ್ಚಿಮಕ್ಕೆ ಚಲಿಸುವ ಲಕ್ಷಣಗಳಿವೆ. 




11 December 2022

12.12.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

12.12. 2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಮೋಡ ಕವಿದ ವಾತಾವರಣದೊಂದಿಗೆ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಹಾವೇರಿ, ಧಾರವಾಡ, ಬೆಳಗಾವಿ, ಗದಗ, ದಾವಣಗೆರೆ, ಚಿತ್ರದುರ್ಗ, ಪಾವಗಡ, ಬಳ್ಳಾರಿ, ತುಮಕೂರು, ಬೆಂಗಳೂರು, ರಾಮನಗರ ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 
ಉಳಿದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮೋಡ ಕವಿದ ವಾತಾವರಣದ ಇರಲಿದ್ದು ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 

ಮ್ಯಾಂಡೋಸ್ ಚಂಡಮಾರುತವು ದುರ್ಬಲಗೊಂಡಿದ್ದರೂ ಡಿಸೆಂಬರ್ 13ರಂದು ಅರಬ್ಬಿ ಸಮುದ್ರಕ್ಕೆ ಕಾಲಿಡುವ ಲಕ್ಷಣಗಳಿದ್ದು, ಮತ್ತೆ ಪ್ರಭಲಗೊಂಡು ಯೆಮನ್ ಕಡೆಗೆ ಸಾಗುವ ಸಾಧ್ಯತೆ ಇದೆ. 
ಇದರಿಂದ 13ರ ಎರಡು ದಿನಗಳ ಕಾಲ ಛಳಿ ಕಡಿಮೆಯಾಗಿ ರಾಜ್ಯದ ಕರಾವಳಿ ಭಾಗಗಳಲ್ಲಿ ಒಂದೆರಡು ಗುಡುಗು ಸಹಿತ ಮಳೆಯ ಸಾಧ್ಯತೆ ಇದೆ. 15ರಿಂದ ಮತ್ತೆ ರಾಜ್ಯದಾದ್ಯಂತ ಬಿಸಿಲು ಹಾಗೂ ಒಣ ಹವೆಯ ಮುನ್ಸೂಚನೆ ಇದೆ. 


10 December 2022

11.12.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ


11.12. 2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಮೋಡ ಕವಿದ ವಾತಾವರಣದೊಂದಿಗೆ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದ್ದು, ಸಂಜೆ ಅಥವಾ ರಾತ್ರಿ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ, ಕಾರ್ಕಳ ಸುತ್ತಮುತ್ತ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಕೊಡಗು, ಮೈಸೂರು, ಹಾಸನ, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಪಾವಗಡ, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು, ಶಿವಮೊಗ್ಗ, ಬಳ್ಳಾರಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 



09 December 2022

10.12.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

10.12.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಾದ್ಯಂತ ಇಡೀ ದಿನ ಮೋಡ ಕವಿದ ವಾತಾವರಣದೊಂದಿಗೆ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 

ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು, ರಾಮನಗರ, ಚಾಮರಾಜನಗರ, ಮಂಡ್ಯ, ಮೈಸೂರು ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಕೊಡಗು, ಚಿಕ್ಕಮಗಳೂರು, ತುಮಕೂರು, ಚಿತ್ರದುರ್ಗ, ಪಾವಗಡ, ದಾವಣಗೆರೆ, ಚಿಕ್ಕಮಗಳೂರು, ಶಿವಮೊಗ್ಗ, ಬಳ್ಳಾರಿ, ರಾಯಚೂರು ಜಿಲ್ಲೆಗಳಲ್ಲಿ ಹೆಚ್ಚಿನ ಭಾಗಗಳಲ್ಲಿ ಮೋಡದ ವಾತಾವರಣ ಇರಲಿದ್ದು ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಮ್ಯಾಂಡಸ್ ಚಂಡಮಾರುತವು ಇವತ್ತು ಮಧ್ಯರಾತ್ರಿ ತಮಿಳುನಾಡಿನ ಮಹಾಬಲಿಪುರಂ ಮೂಲಕ ಭೂ ಪ್ರವೇಶಿಸುವ ಸಾಧ್ಯತೆ ಇದ್ದು, ಡಿಸೆಂಬರ್ 10ರಂದು  ದಕ್ಷಿಣ ಒಳನಾಡು ಹಾಗೂ ಮಲೆನಾಡು ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. 



08 December 2022

09.12.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

ಹೊತ್ತು ಹೊತ್ತಿಗೂ ಬದಲಾಗುತ್ತಿರುವ ಹವಾಮಾನ ಹಾಗೂ ಮುನ್ಸೂಚನೆ

09.12.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಾದ್ಯಂತ ಮಧ್ಯಾಹ್ನ ಮೇಲೆ, ಸಂಜೆ ಮೋಡ ಕವಿದ ವಾತಾವರಣ ಇರಲಿದ್ದು, ಉತ್ತರ ಕನ್ನಡ ಒಣ ಹವೆ ಮುಂದುವರಿಯಲಿದೆ. 

ಕೊಡಗು, ಮೈಸೂರು, ಹಾಸನ, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಪಾವಗಡ, ದಾವಣಗೆರೆ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಧ್ಯಾಹ್ನ ನಂತರ, ಸಂಜೆ ಮೋಡದ ವಾತಾವರಣ ಇರಲಿದ್ದು ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ. 

ಚಂಡಮಾರುತವು ಡಿಸೆಂಬರ್ 10ರಂದು ಚೆನ್ನೈ ಮೂಲಕ ಭೂ ಪ್ರವೇಶಿಸುವ ಮುನ್ಸೂಚನೆ ಇದ್ದು, ಈಗಿನ ಮುನ್ಸೂಚನೆಯಂತೆ ಡಿಸೆಂಬರ್ 9 ಹಾಗೂ 10ರಂದು ದಕ್ಷಿಣ ಒಳನಾಡು, ಮಲೆನಾಡು ಹಾಗೂ ದಕ್ಷಿಣ ಕರಾವಳಿ ಭಾಗಗಳಲ್ಲಿ ಉತ್ತಮ ಮಳೆಯಾಗುವ ಲಕ್ಷಣಗಳಿವೆ. 
ಡಿಸೆಂಬರ್ 11ರಿಂದ ಉತ್ತರ ಕರ್ನಾಟಕದ ಭಾಗಗಳಲ್ಲಿಯೂ ಮಳೆಯ ಮುನ್ಸೂಚನೆ ಇದೆ. 


07 December 2022

08.12.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

08.12.2022ರ ಬೆಳಿಗ್ಗೆ 8 ಗಂಟೆವರೆಗೆ ಕರ್ನಾಟಕದ ವಾತಾವರಣ ಹೇಗಿರುತ್ತೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಚದುರದಂತೆ ಮೋಡದ ವಾತಾವರಣ ಇರಲಿದ್ದು, ನಾಳೆ ಅಂದರೆ ಡಿಸೆಂಬರ್ಮ 8 ಮಧ್ಯಾಹ್ನ ಮೇಲೆ ಕೋಲಾರ, ಬೆಂಗಳೂರು, ರಾಮನಗರ, ಚಾಮರಾಜನಗರ ಅಲ್ಲಲ್ಲಿ ಮಳೆ ಆರಂಭವಾಗುವ ಮುನ್ಸೂಚನೆ ಇದೆ. 

ಈಗನ ಪ್ರಕಾರ ಚಂಡಮಾರುತವು ಡಿಸೆಂಬರ್ಚೆ 10 ಮಧ್ಯಾಹ್ನ ಮೇಲೆ ಚೆನ್ನೈ ತೀರಕ್ಕೆ ಅಪ್ಪಳಿಸುವ ಲಕ್ಷಣಗಳಿವೆ. 


20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡು ಅಲ್ಲಲ್ಲಿ ಮಳೆ...