01 December 2022

02.12.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

02.12.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಒಣ ಹವೆ ಮುಂದುವರಿಯಲಿದೆ. 

ಚಾಮರಾಜನಗರ, ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ. 

ಡಿಸೆಂಬರ್ 2ರಿಂದ ಕರಾವಳಿ ಭಾಗಗಳಲ್ಲಿಯೂ ಮೋಡದ ವಾತಾವರಣ ಇರಲಿದ್ದು, ದಕ್ಷಿಣ ಕರ್ನಾಟಕದ ಅಲ್ಲಲ್ಲಿ ಮಳೆಯ ಸಾಧ್ಯತೆಯೂ ಇದೆ. 
ಡಿಸೆಂಬರ್ 6ರಂದು ಉತ್ತರ ಶ್ರೀಲಂಕಾ ಮೂಲಕ ದಕ್ಷಿಣ ತಮಿಳುನಾಡಿಗೆ ಅಪ್ಪಳಿಸಲಿರುವ ಚಂಡಮಾರುತದ ಪ್ರಭಾವದಿಂದ ಚಾಮರಾಜನಗರ, ಮೈಸೂರು ಭಾಗಗಳಲ್ಲಿ ಉತ್ತಮ ಮಳೆಯ ಸಾಧ್ಯತೆ ಇದೆ. 
 

No comments:

Post a Comment