ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಸಂಜೆ ಮೋಡ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಕುದುರೆಮುಖ, ಶಿೃಂಗೇರಿ, ತೀರ್ಥಹಳ್ಳಿ, ಕೊಪ್ಪ, ಹೊಸನಗರ, ಸಾಗರ ಸುತ್ತಮುತ್ತ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.
ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಸಹ ಸಾಮಾನ್ಯ ಮಳೆಯ ಸಾಧ್ಯತೆ ಇದೆ.
ಕೊಡಗು, ಮೈಸೂರು, ಹಾಸನ, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಪಾವಗಡ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಸಂಜೆ ಮೋಡ ಕವಿದ ವಾತಾವರಣದೊಂದಿಗೆ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ.
ದಕ್ಷಿಣ ಕರ್ನಾಟಕದ ಮೋಡದ ವಾತಾವರಣವು ಡಿಸೆಂಬರ್ 4ರ ತನಕ ಮುಂದುವರಿಯುವ ಸಾಧ್ಯತೆ ಇದ್ದು, 5 ಮತ್ತು 6 ರಂದು ಸ್ವಚ್ಛವಾಗಿರುವ ಸಾಧ್ಯತೆ ಇದೆ.
ಡಿಸೆಂಬರ್ 7ರಿಂದ ತಮಿಳುನಾಡಿಗೆ ಅಪ್ಪಳಿಸಲಿರುವ ಚಂಡಮಾರುತದ ಪ್ರಭಾವದಿಂದ ಮೋಡ ಹಾಗೂ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಪಶ್ಚಿಮ ಕರಾವಳಿಗೆ ಮಳೆ ಬಿದ್ದರೆ ಮುಂದಿನ ಹಂಗಾಮಿನ ಸಿಂಗಾರಕ್ಕೆ/ಅಡಿಕೆ ಫಸಲಿಗೆ ಹೊಡೆತ ಬೀಳುವ ಸಂಭವ ಅಧಿಕ. ತೋಟಗಳಿಗೆ ನೀರು ಹಾಯಿಸುವ ಕೆಲಸ ಸುಲಭ 👍✌🙏🏾😃
ReplyDeleteಅರೇಬಿಕಾ ಕಾಫಿ ಕುಯ್ಲು ಆಗುತ್ತಿದ್ದು, ಒಣಗಿಸಲು ಸಮಸ್ಯೆ ಆಗ್ತಿದೆ. At Agalagandi, ಕೊಪ್ಪ ತಾಲೂಕು.
ReplyDelete