04.12.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಸಂಜೆ ಮೋಡ ಕವಿದ ವಾತಾವರಣದೊಂದಿಗೆ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಮುಖ್ಯವಾಗಿ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ, ಶಿೃಂಗೇರಿ, ಕುದುರೆಮುಖ, ಹೊಸನಗರ ಸುತ್ತಮುತ್ತ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.
ಕೊಡಗು, ಹಾಸನ, ಮೈಸೂರು, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಪಾವಗಡ, ದಾವಣಗೆರೆ, ಚಿಕ್ಕಮಗಳೂರು, ಶಿವಮೊಗ್ಗ, ಬಳ್ಳಾರಿ ಜಿಲ್ಲೆಗಳಲ್ಲಿ ಸಂಜೆ ಮೋಡ ಕವಿದ ವಾತಾವರಣ ಇರಲಿದ್ದು ಅಲ್ಲಲ್ಲಿ ಅಥವಾ ತುಂತುರು ಮಳೆಯ ಸಾಧ್ಯತೆಯೂ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ.
ಬಂಗಾಳಕೊಲ್ಲಿಯ ಚಂಡಮಾರುತವು ಡಿಸೆಂಬರ್ 6ರ ನಂತರ ತಮಿಳುನಾಡು ಕರಾವಳಿಗೆ ಅಪ್ಪಳಿಸುವ ಲಕ್ಷಣಗಳಿದ್ದು. ಡಿಸೆಂಬರ್ 7 ಹಾಗೂ 8ರಿಂದ ರಾಜ್ಯದ ದಕ್ಷಿಣ ಒಳನಾಡು, ಮಲೆನಾಡು ಹಾಗೂ ಕರಾವಳಿ ಭಾಗಗಳಲ್ಲಿ ಮಳೆಯ ನಿರೀಕ್ಷೆ ಇದೆ.
No comments:
Post a Comment