10.12.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಾದ್ಯಂತ ಇಡೀ ದಿನ ಮೋಡ ಕವಿದ ವಾತಾವರಣದೊಂದಿಗೆ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು, ರಾಮನಗರ, ಚಾಮರಾಜನಗರ, ಮಂಡ್ಯ, ಮೈಸೂರು ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಕೊಡಗು, ಚಿಕ್ಕಮಗಳೂರು, ತುಮಕೂರು, ಚಿತ್ರದುರ್ಗ, ಪಾವಗಡ, ದಾವಣಗೆರೆ, ಚಿಕ್ಕಮಗಳೂರು, ಶಿವಮೊಗ್ಗ, ಬಳ್ಳಾರಿ, ರಾಯಚೂರು ಜಿಲ್ಲೆಗಳಲ್ಲಿ ಹೆಚ್ಚಿನ ಭಾಗಗಳಲ್ಲಿ ಮೋಡದ ವಾತಾವರಣ ಇರಲಿದ್ದು ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಮ್ಯಾಂಡಸ್ ಚಂಡಮಾರುತವು ಇವತ್ತು ಮಧ್ಯರಾತ್ರಿ ತಮಿಳುನಾಡಿನ ಮಹಾಬಲಿಪುರಂ ಮೂಲಕ ಭೂ ಪ್ರವೇಶಿಸುವ ಸಾಧ್ಯತೆ ಇದ್ದು, ಡಿಸೆಂಬರ್ 10ರಂದು ದಕ್ಷಿಣ ಒಳನಾಡು ಹಾಗೂ ಮಲೆನಾಡು ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.
No comments:
Post a Comment