15.12.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಹೆಚ್ಚಿನ ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದ್ದು, ಸುಳ್ಯ, ಪುತ್ತೂರು, ಬಂಟ್ವಾಳ, ವಿಟ್ ಸುತ್ತಮುತ್ತ ಭಾಗಗಳಲ್ಲಿ ಸಹ ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸಂಜೆ ಹೆಚ್ಚಿನ ಭಾಗಗಳಲ್ಲಿ ಮೋಡದ ವಾತಾವರಣದೊಂದಿಗೆ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಕೊಡಗು ಹಾಗೂ ಹೊಸನಗರ ಸುತ್ತಮುತ್ತ ಮಳೆಯ ಮುನ್ಸೂಚನೆ ಇದೆ.
ಮೈಸೂರು, ಚಿಕ್ಕಮಗಳೂರು, ಶಿವಮೊಗ್ಗ, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಸಂಜೆ ಮೋಡ ಕವಿದ ವಾತಾವರಣದೊಂದಿಗೆ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಮಾಂಡೋಸ್ ಅರಬ್ಬಿ ಸಮುದ್ರದಲ್ಲಿ ಪಶ್ಚಿಮಕ್ಕೆ ಚಲಿಸುತ್ತಿದ್ದಂತಯೇ ಬಂಗಾಳಕೊಲ್ಲಿಯ ಉತ್ತರ ಸುಮಾತ್ರ ಕರಾವಳಿ ಭಾಗದಲ್ಲಿ ವಾಯುಭಾರ ಕುಸಿತದಂತಹ ತಿರುವಿಕೆ ಆರಂಭವಾಗಿದ್ದು, ಇನ್ನೆರಡು ದಿನಗಳಲ್ಲಿ ವಾಯುಭಾರ ಕುಸಿತವಾಗುವ ಲಕ್ಷಣಗಳಿವೆ. ಈಗಿನ ಪ್ರಕಾರ ಡಿಸೆಂಬರ್ 20ರಂದು ಮಧ್ಯೆ ಶ್ರೀಲಂಕಾ ಕರಾವಳಿಗೆ ಅಪ್ಪಳಿಸುವ ಸಾಧ್ಯತೆ ಇದೆ.
No comments:
Post a Comment