Advertise

18 December 2022

19.12.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

19.12.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಒಣ ಹವೆ ಮುಂದುವರಿಯಲಿದೆ. 
ಸಂಜೆ ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಅಲ್ಲಲ್ಲಿ ಸ್ವಲ್ಪ ಮೋಡದ ವಾತಾವರಣ ಇರಬಹುದು. 

ಕೊಡಗು, ಮೈಸೂರು, ಹಾಸನ, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಪಾವಗಡ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ. 

ಈಗನ ಮುನ್ಸೂಚನೆಯಂತೆ ರಾಜ್ಯದಾದ್ಯಂತ ನಾಳೆ  ಸ್ವಚ್ಛ ವಾತಾವರಣ ಇರಲಿದ್ದು 20ರಿಂದ ಮತ್ತೆ ದಕ್ಷಿಣ ಒಳನಾಡು, ಕೊಡಗು ಹಾಗೂ ದಕ್ಷಿಣ ಕರಾವಳಿ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 
ಈಗಿನಂತೆ ಮಳೆಯ ಸಾಧ್ಯತೆ ಕಡಿಮೆಯಾಗುತ್ತಿದೆ. 



1 comment:

  1. ಉಪಯುಕ್ತ ಮಾಹಿತಿ ನೀಡಿದ್ದೀರಿ
    ಸಾಧ್ಯ ಆದರೆ ಕಾಸರಗೋಡು ಜಿಲ್ಲೆ ಯ ವಾತಾವರಣ ದ ಬಗ್ಗೆ ಇನ್ನೂ ಸ್ಪಷ್ಟ ವಾಗಿ ತಿಳಿಸಿ

    ReplyDelete

20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡು ಅಲ್ಲಲ್ಲಿ ಮಳೆ...