26.12.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಒಣ ಹವೆಯ ಜೊತೆಗೆ ಅಲ್ಲಿಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಇವತ್ತಿನಿಂದ ಸ್ವಲ್ಪ ಮಟ್ಟಿಗೆ ಛಳಿ ಕಡಿಮೆಯಾಗುವ ಸಾಧ್ಯತೆ ಸಹ ಇದೆ.
ಮೈಸೂರು, ಚಾಮರಾಜನಗರ, ಬೆಂಗಳೂರು, ರಾಮನಗರ, ಕೋಲಾರ ಜಿಲ್ಲೆಗಳಲ್ಲಿ ಸಹ ಮೋಡದ ವಾತಾವರಣ ಇರಲಿದ್ದು ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ.
ಕೊಡಗು, ಹಾಸನ, ಮಂಡ್ಯ, ರಾಮನಗರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಬಳ್ಳಾರಿ, ದಾವಣಗೆರೆ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ
ವಾಯುಭಾರ ಕುಸಿತವು ಶ್ರೀಲಂಕಾ ದಾಟಿ ಅರಬ್ಬಿ ಸಮುದ್ರದಲ್ಲಿ ಪಶ್ಚಿಮಕ್ಕೆ ಸಾಗುವ ಲಕ್ಷಣಗಳಿವೆ.
ವಾಯುಭಾರ ಕುಸಿತವು ಶ್ರೀಲಂಕಾ ದಾಟಿ ಅರಬ್ಬಿ ಸಮುದ್ರದಲ್ಲಿ ಪಶ್ಚಿಮಕ್ಕೆ ಸಾಗುವ ಲಕ್ಷಣಗಳಿವೆ.
ಪರಿಣಾಮವಾಗಿ ರಾಜ್ಯದಲ್ಲಿ ಡಿಸೆಂಬರ್ 25ರಿಂದ ಛಳಿ ಸ್ವಲ್ಪ ಕಡಿಮೆಯಾಗಿ ಡಿಸೆಂಬರ್ 28ರ ತನಕ ಅಲ್ಲಲ್ಲಿ ಮೋಡ ವಾತಾವರಣದ ಇರಲಿದ್ದು ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆಯೂ ಇದೆ.
ಡಿಸೆಂಬರ್ 29ರಿಂದ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ.
No comments:
Post a Comment