28 December 2022

29.12.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

29.12.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಮೋಡ ಅಥವಾ ತುಂತುರು ಮಳೆಯ ಮುನ್ಸೂಚನೆ ಇದೆ. 

ಕೊಡಗು, ಮೈಸೂರು, ಹಾಸನ, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಮೋಡ ಅಥವಾ ತುಂತುರು ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ. 

ಈಗನ ಮುನ್ಸೂಚನೆಯಂತೆ ಡಿಸೆಂಬರ್ 29ರಿಂದ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ. 
ಬಂಗಾಳಕೊಲ್ಲಿಯ ಭಾಗದಿಂದ ಬೀಸುತ್ತಿರುವ ಗಾಳಿಯ ಪ್ರಭಾವದಿಂದ ದಕ್ಷಿಣ ಒಳನಾಡು, ಮಲೆನಾಡು ಹಾಗೂ ದಕ್ಷಿಣ ಕರಾವಳಿ ಭಾಗಗಳಲ್ಲಿ ಛಳಿ ತೀವ್ರತೆ ಪಡೆದುಕೊಳ್ಳುವ ಸಾಧ್ಯತೆ ಕಡಿಮೆ ಇರಬಹುದು. 



No comments:

Post a Comment