Advertise

31 January 2023

01.02.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

01.02.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಹೆಚ್ಚಿನ ಭಾಗಗಳಲ್ಲಿ, ದಕ್ಷಿಣ ಕನ್ನಡ ಹಾಗೂ ಉಡುಪಿಯ ಅಲ್ಲಲ್ಲಿ ಸಂಜೆ ಮೋಡದ ವಾತಾವರಣದ ಮುನ್ಸೂಚನೆ ಇದೆ. 
ಕಾಸರಗೋಡು ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ. 

ಕೊಡಗು ಹೆಚ್ಚಿನ ಭಾಗಗಳಲ್ಲಿ, ಸಕಲೇಶಪುರ, ಮೂಡಿಗೆರೆ, ಶಿೃಂಗೇರಿ, ಕುದುರೆಮುಖ ಸುತ್ತಮುತ್ತ ಭಾಗಗಳಲ್ಲಿ ಸಂಜೆ ಮೋಡದ ವಾತಾವರಣದೊಂದಿಗೆ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 

ಮೈಸೂರು, ಹಾಸನ, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು, ಒಣ ಹವೆ ಮುಂದುವರಿಯಲಿದೆ. 

ಈಗನ ಮುನ್ಸೂಚನೆಯಂತೆ ಫೆಬ್ರುವರಿ 1 ಅಥವಾ 2ನೇ ತಾರೀಕಿನವರೆಗೆ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಲಿದ್ದು ಆಮೇಲೆ ಒಣ ಹವೆ ಮುಂದುವರಿಯಲಿದೆ. 
ಈಗನ ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಇಂದು ರಾತ್ರಿ ಶ್ರೀಲಂಕಾಗೆ ಅಪ್ಪಳಿಸಲಿದೆ. 


30 January 2023

31.01.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

31.01.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಹಗುರಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಸಂಜೆ ಮೋಡದ ವಾತಾವರಣ ಇರಲಿದ್ದು ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 

ಕೊಡಗು, ಮೈಸೂರು, ಚಾಮರಾಜನಗರ, ರಾಮನಗರ, ಮಂಡ್ಯ, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ಸಂಜೆ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ. 

ಈಗನ ಪ್ರಕಾರ ದಕ್ಷಿಣ ಒಳನಾಡು ಭಾಗಗಳಲ್ಲಿ ಇನ್ನೆರಡು ದಿನ ಮೋಡದ ವಾತಾವರಣ ಇರಲಿದ್ದು, ಆಮೇಲೆ ಒಣ ಹವೆ ಮುಂದುವರಿಯಲಿದೆ. 
ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಜನವರಿ 31ರ ರಾತ್ರಿ ಶ್ರೀಲಂಕಾಗೆ ಅಪ್ಪಳಿಸುವ ಮುನ್ಸೂಚನೆ ಇದೆ. 



29 January 2023

31.01.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

31.01.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಜನವರಿ 31ರಂದು ಉತ್ತರ ಶ್ರೀಲಂಕಾ ತೀರಕ್ಕೆ ಅಪ್ಪಳಿಸುವ ಲಕ್ಷಣಗಳಿವೆ. 

ಜನವರಿ 30ರಿಂದ ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು ಫೆಬ್ರುವರಿ 2ನೇ ತಾರೀಕಿನವರೆಗೆ ಬಿಸಿಲು ಹಾಗೂ ಮೋಡದ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ. ಆಮೇಲೆ ಒಣ ಹವೆ ಮುಂದುವರಿಯಲಿದೆ. 

ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಭಾಗಗಳಲ್ಲಿ ಇವತ್ತು ಸಂಜೆಯಿಂದ ಫೆಬ್ರುವರಿ 2ನೇ ತಾರೀಕಿನವರೆಗೆ ಮೋಡದ ವಾತಾವರಣ ಇರಲಿದ್ದು, ಜನವರಿ 30 ರಿಂದ ಫೆಬ್ರುವರಿ 1ನೇ ತಾರೀಕಿನವರೆಗೆ ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಬೆಂಗಳೂರು, ರಾಮನಗರ, ಚಾಮರಾಜನಗರ ಜಿಲ್ಲೆಗಳ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆಯೂ ಇದೆ. 

ಫೆಬ್ರುವರಿ 3ನೇ ತಾರೀಕಿನಿಂದ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ. 


27 January 2023

31.01.2023 ವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

31.01.2023 ವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಬಂಗಾಳಕೊಲ್ಲಿಯ ಉತ್ತರ ಸುಮಾತ್ರ ಹಾಗೂ ಅಂಡಮಾನ್ ಕಡಲ ತೀರದ ಮಧ್ಯೆ ವಾಯುಭಾರ ಕುಸಿತದಂತಹ ತಿರುವಿಕೆ ಆರಂಭವಾಗಿದ್ದು, ವಾಯುಭಾರ ಕುಸಿತವಾಗಿ ಮಾರ್ಪಾಡಾಗುವ ಲಕ್ಷಣಗಳಿವೆ. 

ಜನವರಿ 30 ಅಥವಾ 31ರಂದು ಶ್ರೀಲಂಕಾದ ಪೂರ್ವ ಕರಾವಳಿಗೆ ಅಪ್ಪಳಿಸುವ ಸಾಧ್ಯತೆ ಇದೆ. 

ಇದರ ಪರಿಣಾಮದಿಂದ ಈಗಿನ ಪ್ರಕಾರ ಜನವರಿ 30ರಿಂದ ಮೂರು ದಿನಗಳ ಕಾಲ ಮೋಡದ ವಾತಾವರಣ ಇರಲಿದ್ದು ಬೆಂಗಳೂರು, ಕೋಲಾರ, ಚಾಮರಾಜನಗರ ಭಾಗಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆಯೂ ಇದೆ. ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮೋಡ ಮಾತ್ರ ಇರಬಹುದು. 



25 January 2023

26. 01.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

26.01.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ ಹೆಚ್ಚಿನ ಭಾಗಗಳಲ್ಲಿ, ಉಡುಪಿಯ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 

ಕೊಡಗು ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. 
ಸಕಲೇಶಪುರ ಹಾಗೂ ಮೈಸೂರು ಒಂದೆರಡು ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದ್ದರೆ, ಶಿವಮೊಗ್ಗ, ಹಾಸನ, ಚಾಮರಾಜನಗರ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು. 

ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ. 



24 January 2023

25.01.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

25.01.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದೆ. 
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳಲ್ಲಿ ಮಧ್ಯಾಹ್ನ ನಂತರ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.

ಕೊಡಗು, ಮೂಡಿಗೆರೆ, ಶಿೃಂಗೇರಿ, ಕುದುರೆಮುಖ, ತೀರ್ಥಹಳ್ಳಿ, ಆಗುಂಬೆ, ಹೊಸನಗರ, ಸಾಗರ ಸುತ್ತಮುತ್ತ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಒಂದೆರಡು ಕಡೆ ಉತ್ತಮ ಮಳೆಯ ನಿರೀಕ್ಷೆ ಇದೆ.

ಮೈಸೂರು, ಹಾಸನ, ಮಂಡ್ಯ, ಚಾಮರಾಜನಗರ, ಉಳಿದ ಚಿಕ್ಕಮಗಳೂರು ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.

ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಶಿವಮೊಗ್ಗ, ಹಾವೇರಿ, ಬಾಗಲಕೋಟೆ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಈಗನ ಮುನ್ಸೂಚನೆಯಂತೆ ಜನವರಿ 25ರಂದು ಸಹ ಕರಾವಳಿ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದ್ದರೆ, 26ರಿಂದ ಮತ್ತೆ ಒಣ ಹವೆ ಮುಂದುವರಿಯಲಿದೆ. 

23 January 2023

24.01.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

24.01.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ರಾತ್ರಿ ಮೋಡದ ವಾತಾವರಣ ಆರಂಭವಾಗುವ ಲಕ್ಷಣಗಳಿವೆ. 

ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಹಾಸನ, ಮಂಡ್ಯ, ಮೈಸೂರು, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.

ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ. 

ವಿಶೇಷ ಸೂಚನೆ : ಈಗಿನ ಮುನ್ಸೂಚನೆಯಂತೆ ಜನವರಿ 24ರಂದು ಕೊಡಗು ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ, ಚಾಮರಾಜನಗರ ಹಾಗೂ ಮೈಸೂರು ಒಂದೆರಡು ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳಲ್ಲಿ ಸಹ ಅಲ್ಲಲ್ಲಿ ಸಾಮಾನ್ಯ ಮಳೆಯ ಸಾಧ್ಯತೆ ಇದೆ.

ಜನವರಿ 25ರಂದು ಸಹ ಕೊಡಗು, ಚಿಕ್ಕಮಗಳೂರಿನ ಮೂಡಿಗೆರೆ, ಕುದುರೆಮುಖ, ಶಿೃಂಗೇರಿ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. 


22 January 2023

23.01.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

23.01.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ. 

ಈಗಿನ ಮುನ್ಸೂಚನೆಯಂತೆ ಜನವರಿ 24ರಿಂದ ದಕ್ಷಿಣ ಒಳನಾಡು, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಹಾಗೂ ದಕ್ಷಿಣ ಕರಾವಳಿ ಭಾಗಗಳಲ್ಲಿ ಮೋಡದ ವಾತಾವರಣದೊಂದಿಗೆ, ಕೊಡಗು, ಹಾಗೂ ಚಿಕ್ಕಮಗಳೂರಿನ  ಕುದುರೆಮುಖ, ಶಿೃಂಗೇರಿ, ಮೂಡಿಗೆರೆ ಸುತ್ತಮುತ್ತ ಭಾಗಗಳಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ. ಇದರ ಪ್ರಭಾವದಿಂದ ದಕ್ಷಿಣ ಕನ್ನಡದ ಸುಬ್ರಹ್ಮಣ್ಯ, ಸುಳ್ಯ, ಬೆಳ್ತಂಗಡಿ ಸುತ್ತಮುತ್ತ ಒಂದೆರಡು ಪ್ರದೇಶಗಳಲ್ಲಿ ಸಣ್ಣ ಪ್ರಮಾಣದ ತುಂತುರು ಮಳೆಯ ಸಾಧ್ಯತೆಯೂ ಇದೆ. 

ಜನವರಿ 27 ಹಾಗೂ 28ರಂದು ದಕ್ಷಿಣ ಒಳನಾಡು ಮಲೆನಾಡು ಹಾಗೂ ದಕ್ಷಿಣ ಕರಾವಳಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 




20 January 2023

21.01.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

21.01.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ ಒಣ ಹವೆ ಮುಂದುವರಿಯಲಿದೆ. 

ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಬೆಂಗಳೂರು, ರಾಮನಗರ, ಚಾಮರಾಜನಗರ, ಮಂಡ್ಯ, ಹಾಸನ, ಮೈಸೂರು ಭಾಗಗಳಲ್ಲಿ ಸಂಜೆ, ರಾತ್ರಿ, ತಡ ರಾತ್ರಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ. 


ಈಗನ ಮುನ್ಸೂಚನೆಯಂತೆ ದಕ್ಷಿಣ ಒಳನಾಡು ಭಾಗಗಳಲ್ಲಿ ತಂಪು ವಾತಾವರಣದೊಂದಿಗೆ ರಾತ್ರಿ ಮೋಡದ ವಾತಾವರಣ ಆರಂಭವಾಗುವ ಲಕ್ಷಣಗಳಿದ್ದು, ಜನವರಿ 26ರ ನಂತರ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ. 

ಕೊಡಗು, ಚಿಕ್ಕಮಗಳೂರು ಹಾಗೂ ಕಾಸರಗೋಡು ಸೇರಿದಂತೆ ರಾಜ್ಯದ ದಕ್ಷಿಣ ಕರಾವಳಿ ಭಾಗಗಳಲ್ಲಿ ಜನವರಿ 24 ರಿಂದ ಮೋಡದ ವಾತಾವರಣ ಇರಲಿದ್ದು, 27ರ ನಂತರ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 

07.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

07.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಸಂ...