Advertise

31 January 2023

01.02.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

01.02.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಹೆಚ್ಚಿನ ಭಾಗಗಳಲ್ಲಿ, ದಕ್ಷಿಣ ಕನ್ನಡ ಹಾಗೂ ಉಡುಪಿಯ ಅಲ್ಲಲ್ಲಿ ಸಂಜೆ ಮೋಡದ ವಾತಾವರಣದ ಮುನ್ಸೂಚನೆ ಇದೆ. 
ಕಾಸರಗೋಡು ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ. 

ಕೊಡಗು ಹೆಚ್ಚಿನ ಭಾಗಗಳಲ್ಲಿ, ಸಕಲೇಶಪುರ, ಮೂಡಿಗೆರೆ, ಶಿೃಂಗೇರಿ, ಕುದುರೆಮುಖ ಸುತ್ತಮುತ್ತ ಭಾಗಗಳಲ್ಲಿ ಸಂಜೆ ಮೋಡದ ವಾತಾವರಣದೊಂದಿಗೆ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 

ಮೈಸೂರು, ಹಾಸನ, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು, ಒಣ ಹವೆ ಮುಂದುವರಿಯಲಿದೆ. 

ಈಗನ ಮುನ್ಸೂಚನೆಯಂತೆ ಫೆಬ್ರುವರಿ 1 ಅಥವಾ 2ನೇ ತಾರೀಕಿನವರೆಗೆ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಲಿದ್ದು ಆಮೇಲೆ ಒಣ ಹವೆ ಮುಂದುವರಿಯಲಿದೆ. 
ಈಗನ ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಇಂದು ರಾತ್ರಿ ಶ್ರೀಲಂಕಾಗೆ ಅಪ್ಪಳಿಸಲಿದೆ. 


No comments:

Post a Comment

20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡು ಅಲ್ಲಲ್ಲಿ ಮಳೆ...