20 January 2023

21.01.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

21.01.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ ಒಣ ಹವೆ ಮುಂದುವರಿಯಲಿದೆ. 

ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಬೆಂಗಳೂರು, ರಾಮನಗರ, ಚಾಮರಾಜನಗರ, ಮಂಡ್ಯ, ಹಾಸನ, ಮೈಸೂರು ಭಾಗಗಳಲ್ಲಿ ಸಂಜೆ, ರಾತ್ರಿ, ತಡ ರಾತ್ರಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ. 


ಈಗನ ಮುನ್ಸೂಚನೆಯಂತೆ ದಕ್ಷಿಣ ಒಳನಾಡು ಭಾಗಗಳಲ್ಲಿ ತಂಪು ವಾತಾವರಣದೊಂದಿಗೆ ರಾತ್ರಿ ಮೋಡದ ವಾತಾವರಣ ಆರಂಭವಾಗುವ ಲಕ್ಷಣಗಳಿದ್ದು, ಜನವರಿ 26ರ ನಂತರ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ. 

ಕೊಡಗು, ಚಿಕ್ಕಮಗಳೂರು ಹಾಗೂ ಕಾಸರಗೋಡು ಸೇರಿದಂತೆ ರಾಜ್ಯದ ದಕ್ಷಿಣ ಕರಾವಳಿ ಭಾಗಗಳಲ್ಲಿ ಜನವರಿ 24 ರಿಂದ ಮೋಡದ ವಾತಾವರಣ ಇರಲಿದ್ದು, 27ರ ನಂತರ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 

No comments:

Post a Comment