23.01.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ.
ಈಗಿನ ಮುನ್ಸೂಚನೆಯಂತೆ ಜನವರಿ 24ರಿಂದ ದಕ್ಷಿಣ ಒಳನಾಡು, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಹಾಗೂ ದಕ್ಷಿಣ ಕರಾವಳಿ ಭಾಗಗಳಲ್ಲಿ ಮೋಡದ ವಾತಾವರಣದೊಂದಿಗೆ, ಕೊಡಗು, ಹಾಗೂ ಚಿಕ್ಕಮಗಳೂರಿನ ಕುದುರೆಮುಖ, ಶಿೃಂಗೇರಿ, ಮೂಡಿಗೆರೆ ಸುತ್ತಮುತ್ತ ಭಾಗಗಳಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ. ಇದರ ಪ್ರಭಾವದಿಂದ ದಕ್ಷಿಣ ಕನ್ನಡದ ಸುಬ್ರಹ್ಮಣ್ಯ, ಸುಳ್ಯ, ಬೆಳ್ತಂಗಡಿ ಸುತ್ತಮುತ್ತ ಒಂದೆರಡು ಪ್ರದೇಶಗಳಲ್ಲಿ ಸಣ್ಣ ಪ್ರಮಾಣದ ತುಂತುರು ಮಳೆಯ ಸಾಧ್ಯತೆಯೂ ಇದೆ.
ಜನವರಿ 27 ಹಾಗೂ 28ರಂದು ದಕ್ಷಿಣ ಒಳನಾಡು ಮಲೆನಾಡು ಹಾಗೂ ದಕ್ಷಿಣ ಕರಾವಳಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
No comments:
Post a Comment