Advertise

23 January 2023

24.01.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

24.01.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ರಾತ್ರಿ ಮೋಡದ ವಾತಾವರಣ ಆರಂಭವಾಗುವ ಲಕ್ಷಣಗಳಿವೆ. 

ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಹಾಸನ, ಮಂಡ್ಯ, ಮೈಸೂರು, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.

ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ. 

ವಿಶೇಷ ಸೂಚನೆ : ಈಗಿನ ಮುನ್ಸೂಚನೆಯಂತೆ ಜನವರಿ 24ರಂದು ಕೊಡಗು ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ, ಚಾಮರಾಜನಗರ ಹಾಗೂ ಮೈಸೂರು ಒಂದೆರಡು ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳಲ್ಲಿ ಸಹ ಅಲ್ಲಲ್ಲಿ ಸಾಮಾನ್ಯ ಮಳೆಯ ಸಾಧ್ಯತೆ ಇದೆ.

ಜನವರಿ 25ರಂದು ಸಹ ಕೊಡಗು, ಚಿಕ್ಕಮಗಳೂರಿನ ಮೂಡಿಗೆರೆ, ಕುದುರೆಮುಖ, ಶಿೃಂಗೇರಿ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. 


No comments:

Post a Comment

25.02.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

26.06.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು, ದಕ್ಷಿಣ ಕನ್ನ...