Advertise

24 January 2023

25.01.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

25.01.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದೆ. 
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳಲ್ಲಿ ಮಧ್ಯಾಹ್ನ ನಂತರ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.

ಕೊಡಗು, ಮೂಡಿಗೆರೆ, ಶಿೃಂಗೇರಿ, ಕುದುರೆಮುಖ, ತೀರ್ಥಹಳ್ಳಿ, ಆಗುಂಬೆ, ಹೊಸನಗರ, ಸಾಗರ ಸುತ್ತಮುತ್ತ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಒಂದೆರಡು ಕಡೆ ಉತ್ತಮ ಮಳೆಯ ನಿರೀಕ್ಷೆ ಇದೆ.

ಮೈಸೂರು, ಹಾಸನ, ಮಂಡ್ಯ, ಚಾಮರಾಜನಗರ, ಉಳಿದ ಚಿಕ್ಕಮಗಳೂರು ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.

ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಶಿವಮೊಗ್ಗ, ಹಾವೇರಿ, ಬಾಗಲಕೋಟೆ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಈಗನ ಮುನ್ಸೂಚನೆಯಂತೆ ಜನವರಿ 25ರಂದು ಸಹ ಕರಾವಳಿ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದ್ದರೆ, 26ರಿಂದ ಮತ್ತೆ ಒಣ ಹವೆ ಮುಂದುವರಿಯಲಿದೆ. 

No comments:

Post a Comment

12.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

21.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು ...