Advertise

28 February 2023

01.03.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

01.03.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ರಾತ್ರಿ, ತಡ ರಾತ್ರಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಮಳೆಯ ಸಾಧ್ಯತೆ ಕಡಿಮೆ. 

ಕೊಡಗು ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಅಲ್ಲಲ್ಲಿ ಸಹ ರಾತ್ರಿ, ತಡ ರಾತ್ರಿ ಮೋಡದ ವಾತಾವರಣದ ಸಾಧ್ಯತೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ. 

ಮಾರ್ಚ್ 4 ಅಥವಾ 5 ರಂದು ಮಹಾರಾಷ್ಟ್ರ ಹಾಗೂ ಗುಜರಾತ್ ರಾಜ್ಯಗಳ ಅಲ್ಲಲ್ಲಿ ವರ್ಷದ ಮೊದಲ ಬೇಸಿಗೆ ಮಳೆ ಆರಂಭವಾಗುವ ಮುನ್ಸೂಚನೆ ಇದೆ. 

ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ ಭಾಗಗಳಲ್ಲಿ  ಮಾರ್ಚ್ 2ರಂದು ಸಹ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಆಮೇಲೆ ಮಾರ್ಚ್ 7ರಿಂದ ಮತ್ತೆ ಮೋಡದ ವಾತಾವರಣದ ಮುನ್ಸೂಚನೆ ಇದೆ. 
ಮಹಾರಾಷ್ಟ್ರದ ಮಳೆಯ ಪ್ರಭಾವದಿಂದ ರಾಜ್ಯದಲ್ಲೂ ವಾತಾವರಣದ ತೇವಾಂಶ ಅಧಿಕವಾದರೆ ಮಳೆಯ ಸಾಧ್ಯತೆ ಇದೆ. 



20 February 2023

21.02.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

21.02.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಸಂಜೆ, ರಾತ್ರಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸುಬ್ರಹ್ಮಣ್ಯ ಹಾಗೂ ಸುಳ್ಯ ಸುತ್ತಮುತ್ತ ಮೋಡ ಸ್ವಲ್ಪ ಜಾಸ್ತಿ ಇರಲಿದ್ದು ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ. 

ಕೊಡಗು, ಮೈಸೂರು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಸಹ ಸಂಜೆ, ರಾತ್ರಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಮಳೆಯ ಸಾಧ್ಯತೆ ಕಡಿಮೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಒಣ ಹವೆ ಮುಂದುವರಿಯಲಿದೆ. 

ಉತ್ತರ ಭಾರತ ಕಡೆಯಿಂದ ಬೀಸುತ್ತಿರುವ ಶುಷ್ಕ ಗಾಳಿಯು ಸಂಪೂರ್ಣವಾಗಿ ಹಿಂದೆ ಸರಿದಿದ್ದು, ಮುಂದಿನ ದಿನಗಳಲ್ಲಿ ರಾಜ್ಯದಾದ್ಯಂತ ಉಷ್ಣಾಂಶ ಏರಿಕೆಯಾಗುವ ಸಾಧ್ಯತೆ ಇದೆ. 
ಈಗಿನ ಪ್ರಕಾರ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮುಂದಿನ 10 ದಿನಗಳವರೆಗೂ ಸಂಜೆ, ರಾತ್ರಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

18 February 2023

19.02.2023 ರ ಬೆಳಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

19. 02.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಭಾಗಗಳಲ್ಲಿ ಸಂಜೆ, ರಾತ್ರಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಸಹ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಒಣ ಹವೆ ಮುಂದುವರಿಯಲಿದೆ. 

ಅರಬ್ಬಿ ಸಮುದ್ರ ಕಡೆಯಿಂದ ಬೀಸುತ್ತಿರುವ ಗಾಳಿಯ ಪ್ರಭಾವದಿಂದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ವಾತಾವರಣದ ತೇವಾಂಶ ಸ್ವಲ್ಪ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಉಷ್ಣಾಂಶ ಏರಿಕೆಯಾಗುವ ಲಕ್ಷಣಗಳಿವೆ. ರಾತ್ರಿಹಾಗೂ ಮುಂಜಾನೆಯ ಕನಿಷ್ಠ ತಾಪಮಾನ ಸಹ ಏರಿಕೆಯಾಗುವ ಸಾಧ್ಯತೆ ಇದೆ. 
ಆದರೆ ಸಧ್ಯಕ್ಕೆ ಮಳೆಯ ಮುನ್ಸೂಚನೆ ಇಲ್ಲ. 


17 February 2023

18.02.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

ಫೆಬ್ರುವರಿ 19ರ ತನಕ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ. 
ಉತ್ತರ ಭಾರತ ಕಡೆಯಿಂದ ಬೀಸುತ್ತಿರುವ ಶುಷ್ಕ ಗಾಳಿಯ ಪ್ರಭಾವವು ತಗ್ಗುತ್ತಲಿದ್ದು, ಫೆಬ್ರುವರಿ 20, 21ರಿಂದ ದಿನದ ಉಷ್ಣಾಂಶ ಏರಿಕೆಯಾಗುವ ಲಕ್ಷಣಗಳಿವೆ. ಫೆಬ್ರುವರಿ 21ರಿಂದ ಕೇರಳದ ಕೆಲವೆಡೆ ಮೋಡ ಕವಿದ ವಾತಾವರಣ ಇರಲಿದ್ದು. ಫೆಬ್ರುವರಿ 23ರಿಂದ ಕರ್ನಾಟಕ ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಉಂಟಾಗುವ ಮುನ್ಸೂಚನೆ ಇದೆ. 
ಈಗಿನ ಮುನ್ಸೂಚನೆಯಂತೆ ಮಳೆಯ ಸಾಧ್ಯತೆ ಕಡಿಮೆ.

13 February 2023

13.02.2023ರಿಂದ ಮುಂದಿನ 10 ದಿನಗಳವರೆಗಿನ ಹವಾಮಾನ ಮುನ್ಸೂಚನೆ

13.02.2023ರಿಂದ ಮುಂದಿನ 10 ದಿನಗಳವರೆಗಿನ ಹವಾಮಾನ ಮುನ್ಸೂಚನೆ :

ಉತ್ತರ ಭಾರತ ಕಡೆಯಿಂದ ಈಗ ಬೀಸುತ್ತಿರುವ ಗಾಳಿಯ ಪರಿಣಾಮವಾಗಿ ಕಾಸರಗೋಡು ಸೇರಿದಂತೆ ಕರ್ನಾಟಕ ರಾಜ್ಯದಾದ್ಯಂತ ಮಳೆಯ ಸಾಧ್ಯತೆ ಇಲ್ಲವಾಗಿದ್ದು ಒಣ ಹವೆ ಮುಂದುವರಿಯಲಿದೆ ಹಾಗೂ ರಾತ್ರಿಯ ಸಮಯದಲ್ಲಿ ತಾಪಮಾನ ಸ್ವಲ್ಪ ಮಟ್ಟಿಗೆ ಇಳಿಕೆಯಾಗುವ ಲಕ್ಷಣಗಳಿವೆ.

09 February 2023

10.02.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

10.02.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ಮಂಗಳೂರು ಸುತ್ತಮುತ್ತ ಸಂಜೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಒಂದೆರಡು ಕಡೆ ತುಂತುರು ಸಾಧ್ಯತೆಯೂ ಇದೆ. 

ಉಳಿದ ಕಾಸರಗೋಡು ಹಾಗೂ ದಕ್ಷಿಣ ಕನ್ನಡದ ಅಲ್ಲಲ್ಲಿ ಸಂಜೆ ರಾತ್ರಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ರಾಜ್ಯದ ಉಳಿದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ. 

ಕರಾವಳಿ ಭಾಗಗಳಲ್ಲಿ ನಿಧಾನವಾಗಿ ಉಷ್ಣಾಂಶ ಏರಿಕೆಯಾಗುವ ಲಕ್ಷಣಗಳಿವೆ. 

05 February 2023

06.02.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

ಕೊಡಗು ಹಾಗೂ ದಕ್ಷಿಣ ಕನ್ನಡ ಹಗುರವಾಗಿ ಒಂದೆರಡು ಕಡೆ ಮೋಡ ಇದ್ದರೂ ನಾಳೆಯಿಂದ ಅದೂ ಕಡಿಮೆಯಾಗಿ ಒಣ ಹವೆ ಮುಂದುವರಿಯಲಿದೆ. 

ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ. ಈಗಿನ ಮುನ್ಸೂಚನೆಯಂತೆ ಮುಂದಿನ 10 ದಿನಗಳವರೆಗೂ ಯಾವುದೇ ಮಳೆ ಅಥವಾ ಮೋಡದ ವಾತಾವರಣ ಇರುವುದಿಲ್ಲ. 


03 February 2023

04.02.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

04.02.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಕೊಡಗು, ಮೈಸೂರು, ಹಾಸನ, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಒಣ ಹವೆ ಮುಂದುವರಿಯಲಿದೆ. 

ಈಗನ ಈ ವಾತಾವರಣವು ಫೆಬ್ರುವರಿ 4ರ ತನಕ ಮುಂದುವರಿಲಿದ್ದು. ಆಮೇಲೆ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ. 
ವಾಯುಭಾರ ಕುಸಿತವು ದುರ್ಬಲಗೊಳ್ಳುತ್ತಿದೆ. 

02 February 2023

03.02.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

03.02.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಸಂಜೆ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಮಳೆಯ ಸಾಧ್ಯತೆ ಕಡಿಮೆಯಾಗುತ್ತಿದೆ. 

ಕೊಡಗು, ಮೈಸೂರು, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಚಾಮರಾಜನಗರ, ಬೆಂಗಳೂರು ಹಾಗೂ ಕೋಲಾರದ ಒಂದೆರಡು ಪ್ರದೇಶಗಳಲ್ಲಿ ಇವತ್ತು ಹಾಗೂ ನಾಳೆ ತುಂತುರು ಮಳೆಯ ಸಾಧ್ಯತೆಯೂ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ. 
ಈಗನ ಮುನ್ಸೂಚನೆಯಂತೆ ಫೆಬ್ರುವರಿ 4 ರಿಂದ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ. 

07.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

07.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಸಂ...