01.03.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ರಾತ್ರಿ, ತಡ ರಾತ್ರಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಮಳೆಯ ಸಾಧ್ಯತೆ ಕಡಿಮೆ.
ಕೊಡಗು ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಅಲ್ಲಲ್ಲಿ ಸಹ ರಾತ್ರಿ, ತಡ ರಾತ್ರಿ ಮೋಡದ ವಾತಾವರಣದ ಸಾಧ್ಯತೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ.
ಮಾರ್ಚ್ 4 ಅಥವಾ 5 ರಂದು ಮಹಾರಾಷ್ಟ್ರ ಹಾಗೂ ಗುಜರಾತ್ ರಾಜ್ಯಗಳ ಅಲ್ಲಲ್ಲಿ ವರ್ಷದ ಮೊದಲ ಬೇಸಿಗೆ ಮಳೆ ಆರಂಭವಾಗುವ ಮುನ್ಸೂಚನೆ ಇದೆ.
ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ ಭಾಗಗಳಲ್ಲಿ ಮಾರ್ಚ್ 2ರಂದು ಸಹ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಆಮೇಲೆ ಮಾರ್ಚ್ 7ರಿಂದ ಮತ್ತೆ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಮಹಾರಾಷ್ಟ್ರದ ಮಳೆಯ ಪ್ರಭಾವದಿಂದ ರಾಜ್ಯದಲ್ಲೂ ವಾತಾವರಣದ ತೇವಾಂಶ ಅಧಿಕವಾದರೆ ಮಳೆಯ ಸಾಧ್ಯತೆ ಇದೆ.
No comments:
Post a Comment