03.02.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಸಂಜೆ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಮಳೆಯ ಸಾಧ್ಯತೆ ಕಡಿಮೆಯಾಗುತ್ತಿದೆ.
ಕೊಡಗು, ಮೈಸೂರು, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಚಾಮರಾಜನಗರ, ಬೆಂಗಳೂರು ಹಾಗೂ ಕೋಲಾರದ ಒಂದೆರಡು ಪ್ರದೇಶಗಳಲ್ಲಿ ಇವತ್ತು ಹಾಗೂ ನಾಳೆ ತುಂತುರು ಮಳೆಯ ಸಾಧ್ಯತೆಯೂ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ.
ಈಗನ ಮುನ್ಸೂಚನೆಯಂತೆ ಫೆಬ್ರುವರಿ 4 ರಿಂದ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ.
Thank you
ReplyDelete