18 February 2023

19.02.2023 ರ ಬೆಳಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

19. 02.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಭಾಗಗಳಲ್ಲಿ ಸಂಜೆ, ರಾತ್ರಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಸಹ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಒಣ ಹವೆ ಮುಂದುವರಿಯಲಿದೆ. 

ಅರಬ್ಬಿ ಸಮುದ್ರ ಕಡೆಯಿಂದ ಬೀಸುತ್ತಿರುವ ಗಾಳಿಯ ಪ್ರಭಾವದಿಂದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ವಾತಾವರಣದ ತೇವಾಂಶ ಸ್ವಲ್ಪ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಉಷ್ಣಾಂಶ ಏರಿಕೆಯಾಗುವ ಲಕ್ಷಣಗಳಿವೆ. ರಾತ್ರಿಹಾಗೂ ಮುಂಜಾನೆಯ ಕನಿಷ್ಠ ತಾಪಮಾನ ಸಹ ಏರಿಕೆಯಾಗುವ ಸಾಧ್ಯತೆ ಇದೆ. 
ಆದರೆ ಸಧ್ಯಕ್ಕೆ ಮಳೆಯ ಮುನ್ಸೂಚನೆ ಇಲ್ಲ. 


No comments:

Post a Comment