21.02.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಸಂಜೆ, ರಾತ್ರಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸುಬ್ರಹ್ಮಣ್ಯ ಹಾಗೂ ಸುಳ್ಯ ಸುತ್ತಮುತ್ತ ಮೋಡ ಸ್ವಲ್ಪ ಜಾಸ್ತಿ ಇರಲಿದ್ದು ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ.
ಕೊಡಗು, ಮೈಸೂರು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಸಹ ಸಂಜೆ, ರಾತ್ರಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಮಳೆಯ ಸಾಧ್ಯತೆ ಕಡಿಮೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಒಣ ಹವೆ ಮುಂದುವರಿಯಲಿದೆ.
ಉತ್ತರ ಭಾರತ ಕಡೆಯಿಂದ ಬೀಸುತ್ತಿರುವ ಶುಷ್ಕ ಗಾಳಿಯು ಸಂಪೂರ್ಣವಾಗಿ ಹಿಂದೆ ಸರಿದಿದ್ದು, ಮುಂದಿನ ದಿನಗಳಲ್ಲಿ ರಾಜ್ಯದಾದ್ಯಂತ ಉಷ್ಣಾಂಶ ಏರಿಕೆಯಾಗುವ ಸಾಧ್ಯತೆ ಇದೆ.
ಈಗಿನ ಪ್ರಕಾರ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮುಂದಿನ 10 ದಿನಗಳವರೆಗೂ ಸಂಜೆ, ರಾತ್ರಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
No comments:
Post a Comment