Advertise

30 March 2023

31.03.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

31.03.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ:

ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಕೊಡಗು, ಹಾಸನ ಮೋಡದ ವಾತಾವರಣ ಇರಲಿದ್ದು, ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಹಗುರವಾಗಿ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದೆ. 

ಈಗನ ಮುನ್ಸೂಚನೆಯಂತೆ ಎಪ್ರಿಲ್ 3ರ ತನಕ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ವಾತಾವರಣ ಮುಂದುವರಿಯಲಿದ್ದು ಎಪ್ರಿಲ್ 4 ರಿಂದ ಮಲೆನಾಡು ಹಾಗೂ ಕರಾವಳಿ ಭಾಗಗಳಲ್ಲಿಯೂ ಮಳೆಯ ಮುನ್ಸೂಚನೆ ಇದೆ. 

29 March 2023

30.03.2023 ರ ಬೆಳಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

30.03. 2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಹಾಗೂ ದಕ್ಷಿಣ ಕನ್ನಡದ ಅಲ್ಲಲ್ಲಿ ಹಗುರವಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಕೊಡಗು, ಚಿಕ್ಕಮಗಳೂರು, ಹಾಸನ ಜಿಲ್ಲೆಯ ಬಹುತೇಕ ಭಾಗಗಳಲ್ಲಿ ಮೋಡದ ವಾತಾವರಣ ಇರಲಿದ್ದು, ಚಾಮರಾಜನಗರ, ರಾಮನಗರ, ಮಂಡ್ಯ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡದ ವಾತಾವರಣದೊಂದಿಗೆ ಒಂದೆರಡು ಕಡೆ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

ಈಗನ ಮುನ್ಸೂಚನೆಯಂತೆ ಎಪ್ರಿಲ್ 2ರ ನಂತರ ರಾಜ್ಯದ ದಕ್ಷಿಣ ಕರಾವಳಿ ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 

26 March 2023

27.03.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

27.03.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣ ಇದ್ದರೆ, ಮೈಸೂರು, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 
ಕೋಲಾರ ಉತ್ತಮ ಮಳೆಯ ಮುನ್ಸೂಚನೆ ಇದೆ. 
ಉಳಿದ ಕರ್ನಾಟಕದ ಭಾಗಗಳಲ್ಲಿ ಹೆಚ್ಚಿನ ಅವಧಿಯೂ ಬಿಸಿಲಿನ ವಾತಾವರಣದ ಮುನ್ಸೂಚನೆ ಇದೆ.

ಈಗನ ಮುನ್ಸೂಚನೆಯಂತೆ ಮಾರ್ಚ್ 31ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಎಪ್ರಿಲ್ 3 ಅಥವಾ 4 ರಿಂದ ದಕ್ಷಿಣ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮಳೆಯ ಸಾಧ್ಯತೆ ಇದೆ. 

25 March 2023

26.03.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

26.03.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ ಭಾಗಗಳಲ್ಲಿ ಮೋಡ ವಾತಾವರಣ ಇರಲಿದ್ದು, ಸಂಜೆ ದಕ್ಷಿಣ ಕನ್ನಡದ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ. 

ಕೊಡಗು, ಮೈಸೂರು, ಹಾಸನ, ಮಂಡ್ಯ, ತುಮಕೂರು ಭಾಗಗಳಲ್ಲಿ ಮೋಡದ ವಾತಾವರಣದೊಂದಿಗೆ ಸಂಜೆ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ. 

ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲಿನ ವಾತಾವರಣದೊಂದಿಗೆ ಅಲ್ಲಲ್ಲಿ ಮೋಡ ಇರುವ ಮುನ್ಸೂಚನೆ ಇದೆ. 

ಮಾರ್ಚ್ ಕೊನೆಯ ತನಕವೂ ರಾಜ್ಯದಾದ್ಯಂತ ಮಳೆ ಸಾಧ್ಯತೆ ಕಡಿಮೆಯಾಗಿದ್ದು, ಈಗಿನ ಮುನ್ಸೂಚನೆಯಂತೆ ಕೊಡಗು, ದಕ್ಷಿಣ ಕನ್ನಡ ಹಾಗೂ ಕಾಸರಗೋಡು ಭಾಗಗಳಲ್ಲಿ ಎಪ್ರಿಲ್ 2 ರಿಂದ ಮಳೆಯ ಸಾಧ್ಯತೆ ಇದೆ. 

24 March 2023

25.03.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

25.03.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಸಂಜೆ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಕೊಡಗು, ಮೈಸೂರು, ಹಾಸನ, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡದ ವಾತಾವರಣ ಇರಲಿದ್ದು, ಸಂಜೆ, ರಾತ್ರಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲಿನ ವಾತಾವರಣದ ಮುನ್ಸೂಚನೆ ಇದೆ. 

ಇವತ್ತಿನಿಂದ ಮಾರ್ಚ್ ಕೊನೇಯ ತನಕವೂ ಕಾಸರಗೋಡು, ದಕ್ಷಿಣ ಕನ್ನಡ, ಕೊಡಗು ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಸಂಜೆ, ರಾತ್ರಿ ಅಲ್ಲಲ್ಲಿ ಮೋಡದ ವಾತಾವರಣ ಇರಲಿದ್ದು ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 
ಮೈಸೂರು, ಚಾಮರಾಜನಗರ, ರಾಮನಗರ ಭಾಗಗಳಲ್ಲಿ ತುಂತುರುಗಿಂತ ಸ್ವಲ್ಪ ಜಾಸ್ತಿ ಇರಬಹುದು. 

20 March 2023

21.03.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

21.03.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿಯಾದ್ಯಂತ ಹೆಚ್ಚಿನ ಅವಧಿ ಬಿಸಿಲಿನ ವಾತಾವರಣ ಇರಲಿದ್ದು ದಕ್ಷಿಣ ಕನ್ನಡ, ಕಾಸರಗೋಡು ಭಾಗಗಳಲ್ಲಿ ಅಲ್ಲಲ್ಲಿ ಆಗಾಗ ಮೋಡದ ವಾತಾವರಣ ಸಾಧ್ಯತೆ ಇದೆ. ಮಳೆಯ ಸಾಧ್ಯತೆ ಇರುವುದಿಲ್ಲ. 

ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಭಾಗಗಳಲ್ಲಿ ಅಲ್ಲಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚನೆ ಇದೆ ಇದ್ದು, ಚಾಮರಾಜನಗರದ ಒಂದೆರಡು ಪ್ರದೇಶಗಳಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ. 

ಈಗನ ಮುನ್ಸೂಚನೆಯಂತೆ ಮಾರ್ಚ್ 22ರಿಂದ ಕೊಡಗು ಜಿಲ್ಲಾ ಭಾಗಗಳಲ್ಲಿ ಅಲ್ಲಲ್ಲಿ ಮೋಡ ಹಾಗೂ ತುಂತುರು ಮಳೆಯ ಸಾಧ್ಯತೆ ಇದ್ದು, 25ರಂದು ಉತ್ತಮ ಮಳೆಯ ಮುನ್ಸೂಚನೆ ಇದೆ. ಇದೇ ದಿನ ಸುಳ್ಯ ಸುತ್ತಮುತ್ತ ಭಾಗಗಳಲ್ಲಿ ಸಹ ಸಾಮಾನ್ಯ ಮಳೆಯ ಸಾಧ್ಯತೆ ಇದೆ. 

19 March 2023

20.03.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

20.03.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಮುಂಜಾನೆ ಮಳೆಯಾದ ವರದಿಗಳಿವೆ. ಇದರ ಪ್ರಭಾವದಿಂದ ತೇವಾಂಶ ಅಧಿಕವಾಗಿ ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಾದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ, ಕಾರ್ಕಳ ಸುತ್ತಮುತ್ತ ಭಾಗಗಳಲ್ಲಿ ಗುಡುಗಿನೊಂದಿಗೆ ಅಲ್ಲಲ್ಲಿ ಸಾಮಾನ್ಯ ಮಳೆಯ ಸಾಧ್ಯತೆ ಇದೆ.

ಕೊಡಗು, ಸಕಲೇಶಪುರ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಮೈಸೂರು, ಹಾಸನ, ಚಾಮರಾಜನಗರ, ಮಂಡ್ಯ ಜಿಲ್ಲೆಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 

ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಹಗುರವಾಗಿ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದೆ. 

ಈಗನ ಮುನ್ಸೂಚನೆಯಂತೆ ರಾಜ್ಯದ ದಕ್ಷಿಣ ಕರಾವಳಿ ಭಾಗಗಳಲ್ಲಿ ಮಾರ್ಚ್ 24ರ ನಂತರ ಮಳೆಯ ವಾತಾವರಣ ಗೋಚರಿಸುತ್ತಿದೆ. 




18 March 2023

19.03.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

19.03.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಹೆಚ್ಚಿನ ಅವಧಿಯೂ ಬಿಸಿಲು ಹಾಗೂ ಅಲ್ಲಲ್ಲಿ ಸ್ವಲ್ಪ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಕೊಡಗು, ಮೈಸೂರು, ಹಾಸನ, ಮಂಡ್ಯ, ಚಿತ್ರದುರ್ಗ, ಬಳ್ಳಾರಿ, ಕೊಪ್ಪಳ ಜಿಲ್ಲೆಗಳಲ್ಲಿ ಸಂಜೆ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 

ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ರಾಯಚೂರು, ಯಾದಗಿರಿ, ವಿಜಾಪುರ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 
ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಈಗಿನ ಮುನ್ಸೂಚನೆಯಂತೆ ರಾಜ್ಯದ ದಕ್ಷಿಣ ಕರಾವಳಿ ಭಾಗಗಳಲ್ಲಿ ಮಾರ್ಚ್ 25ರ ನಂತರ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. 

17 March 2023

18.03.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

18.03.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಬಿಸಿಲು ಹಾಗೂ  ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 
ಮುಂದಿನ 10 ದಿನಗಳವರೆಗೂ ಮಳೆಯ ಸಾಧ್ಯತೆ ಕಡಿಮೆ. 

ಕೊಡಗು, ಮೈಸೂರು, ಹಾಸನ, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ, ರಾಯಚೂರು, ಕೊಪ್ಪಳ, ಯಾದಗಿರಿ, ಕಲಬುರ್ಗಿ, ವಿಜಯಪುರ, ಗುಲ್ಬರ್ಗ ಜಿಲ್ಲೆಗಳಲ್ಲಿ ಸಂಜೆ ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಈಗನ ಮುನ್ಸೂಚನೆಯಂತೆ ದಿನ ಕಳೆದಂತೆ ಮಳೆಯ ವಾತಾವರಣವೂ ಕಡಿಮೆಯಾಗುತ್ತಾ ಇನ್ನೆರಡು ದಿನಗಳಲ್ಲಿ ರಾಜ್ಯದಾದ್ಯಂತ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮಾತ್ರ ಇರಬಹುದು. 


16 March 2023

17.03.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

17.03.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡ ಹಾಗೂ ಬಿಸಿಲಿನ ವಾತಾವರಣ ಇರಲಿದ್ದು, ಸಂಜೆ ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ದೊಡ್ಡ ಮಳೆಯ ಸಾಧ್ಯತೆ ಕಡಿಮೆಯಾಗುತ್ತಿದೆ. 
ನಾಳೆಯಿಂದ ಕರಾವಳಿಗೆ ಮಳೆಯ ಸಾಧ್ಯತೆ ಕಡಿಮೆ. 

ಕೊಡಗು, ಮೈಸೂರು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 

ರಾಯಚೂರು, ಕೊಪ್ಪಳ, ಯಾದಗಿರಿ, ಕಲಬುರ್ಗಿ, ವಿಜಯಪುರ, ಗುಲ್ಬರ್ಗ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು, ಮೋಡ ಇರಲಿದ್ದು, ಸಂಜೆ, ರಾತ್ರಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 



15 March 2023

16.03.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

16.03.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.

ಕೊಡಗು, ಮೂಡಿಗೆರೆ, ಶಿೃಂಗೇರಿ, ಕುದುರೆಮುಖ, ಆಗುಂಬೆ, ತೀರ್ಥಹಳ್ಳಿ, ಹೊಸನಗರ, ಸಾಗರ ಸುತ್ತಮುತ್ತ ಭಾಗಗಳಲ್ಲಿ ಗುಡುಗಿನೊಂದಿಗೆ ಉತ್ತಮ ಮಳೆಯ ಮುನ್ಸೂಚನೆ ಇದೆ.

ಮೈಸೂರು, ಚಾಮರಾಜನಗರ, ಮಂಡ್ಯ, ಹಾಸನ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಜಿಲ್ಲೆಗಳ ಅಲ್ಲಲ್ಲಿ  ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

ಉಳಿದ ಚಿಕ್ಕಮಗಳೂರು, ಉಳಿದ ಶಿವಮೊಗ್ಗ ದಾವಣಗೆರೆ, ಚಿತ್ರದುರ್ಗ, ಪಾವಗಡ, ಹಾವೇರಿ ಧಾರವಾಡ, ಬಾಗಲಕೋಟೆ ಭಾಗಗಳಲ್ಲಿ ಸಹ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 
ಬಳ್ಳಾರಿ, ರಾಯಚೂರು, ಕೊಪ್ಪಳ, ಯಾದಗಿರಿ, ಕಲಬುರ್ಗಿ, ವಿಜಯಪುರ, ಗುಲ್ಬರ್ಗ ಜಿಲ್ಲೆಗಳಲ್ಲಿ ತಡ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

ಈಗನ ಮುನ್ಸೂಚನೆಯಂತೆ ಮಾರ್ಚ್ 15 ಹಾಗೂ 16ರಂದು ರಾಜ್ಯದ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದ್ದು, 17, 18ರ ತನಕ ಬಳ್ಳಾರಿ, ರಾಯಚೂರು, ಯಾದಗಿರಿ, ಕಲಬುರ್ಗಿ, ವಿಜಯಪುರ, ಗುಲ್ಬರ್ಗ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

14 March 2023

15.03.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

15.03.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಸಂಜೆ ಮೋಡ ಕವಿದ ವಾತಾವರಣದೊಂದಿಗೆ ತಡರಾತ್ರಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 

ಕೊಡಗು, ಮೈಸೂರು, ಚಿಕ್ಕಮಗಳೂರು, ಶಿವಮೊಗ್ಗ, ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು ತಡರಾತ್ರಿ ಒಂದೆರಡು ಪ್ರದೇಶಗಳಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ 

ರಾಜ್ಯದ ಬಹುತೇಕ ಭಾಗಗಳಲ್ಲಿ ಸಂಜೆ ರಾತ್ರಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

(ವಾತಾವರಣದಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ತೇವಾಂಶ ಇಲ್ಲದಿರುವುದರಿಂದ ಸ್ಥಳೀಯವಾಗಿ ಮೋಡ ಉತ್ಪತ್ತಿಯಾಗುತ್ತಿಲ್ಲ. ತೇವಾಂಶ ಗರಿಷ್ಠ ಉಷ್ಣತೆಯಲ್ಲಿ ಸಹ 50, 55%ರಿಂದ  ಮೇಲ್ಪಟ್ಟು ಇದ್ದರೆ ಮಳೆ ಮೋಡಗಳು ಹುಟ್ಟಲು ಅನುಕೂಲವಾಗುತ್ತದೆ) 
 
ಈಗನ ಮುನ್ಸೂಚನೆಯಂತೆ ಮಾರ್ಚ್ 15 ಹಾಗೂ 16 ರಂದು ರಾಜ್ಯದ ಬಹುತೇಕ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 
ನಂತರ ಮಾರ್ಚ್ 18,19ರ ತನಕ ಉತ್ತರ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 




13 March 2023

14.03.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

14.03.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಸಂಜೆ ಮೋಡ ಕವಿದ ವಾತಾವರಣದೊಂದಿಗೆ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 

ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಸಹ ಸಂಜೆ ಮೋಡ ಕವಿದ ವಾತಾವರಣದೊಂದಿಗೆ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ. 

ಉತ್ತರ ಕರ್ನಾಟಕದ ಹೆಚ್ಚಿನ ಭಾಗಗಳಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, 
ಮೈಸೂರು, ಹಾಸನ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಹಗುರವಾಗಿ ಮೋಡ ಕವಿದ ವಾತಾವರಣ ಸಾಧ್ಯತೆ ಇದೆ. 

ಈಗನ ಮುನ್ಸೂಚನೆಯಂತೆ ಮಾರ್ಚ್ 14ರಂದು ಸಹ ಸಂಜೆ ಕರಾವಳಿ ಹೆಚ್ಚಿನ ಭಾಗಗಳಲ್ಲಿ ಮೋಡ ಅಥವಾ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದ್ದು ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು. 
ಮಾರ್ಚ್ 15 ಹಾಗೂ 16ರಂದು ರಾಜ್ಯದ ಬಹುತೇಕ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕೊಡಗು, ಮೂಡಿಗೆರೆ, ಶಿೃಂಗೇರಿ, ಕುದುರೆಮುಖ, ತೀರ್ಥಹಳ್ಳಿ, ಆಗುಂಬೆ, ಹೊಸನಗರ, ಸಾಗರ ಸುತ್ತಮುತ್ತ ಭಾಗಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು. 




11 March 2023

12.03.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

12.03.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಂಜೆ, ರಾತ್ರಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 
ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಒಣ ಹವೆ ಮುಂದುವರಿಯಲಿದೆ. 

ಈಗನ ಮುನ್ಸೂಚನೆಯಂತೆ ಇವತ್ತಿನಿಂದ ರಾಜ್ಯದ ದಕ್ಷಿಣ ಕರಾವಳಿ ಭಾಗಗಳಲ್ಲಿ ಮಳೆ ಮೋಡಗಳು ಕಾಣಿಸಿಕೊಳ್ಳಲಿದ್ದು, ಮಾರ್ಚ್ 16ರ ತನಕ ಈ ಮೋಡಗಳ ಸರಣಿ ಮುಂದುವರಿಯಲಿದೆ. 
ಮಾರ್ಚ್ 15 ಹಾಗೂ 16ರಂದು ರಾಜ್ಯದ ಕರಾವಳಿ ಸೇರಿದಂತೆ ಬಹುತೇಕ ಭಾಗಗಳಲ್ಲಿ ಗುಡುಗು ಸಹಿತ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕೊಡಗು, ಕುದುರೆಮುಖ, ಶಿೃಂಗೇರಿ, ತೀರ್ಥಹಳ್ಳಿ, ಹೊಸನಗರ, ಸಾಗರ ಸುತ್ತಮುತ್ತ ಸ್ವಲ್ಪ ಜಾಸ್ತಿ ಇರಬಹುದು. ಇದರ ಪ್ರಭಾವದಿಂದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ, ಕಾರ್ಕಳ ಸುತ್ತಮುತ್ತ ಭಾಗಗಳಲ್ಲಿ ಸಹ ಗುಡುಗು ಸಹಿತ ಸಾಮಾನ್ಯ ಮಳೆಯ ಸಾಧ್ಯತೆ ಇದೆ. 
ಮಾರ್ಚ್ 17ರಿಂದ ಕರ್ನಾಟಕ ಹೊರತುಪಡಿಸಿ ದೇಶದ ಅನೇಕ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. 

10 March 2023

11.03.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

11.03.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 
ಕೊಡಗು, ಮೈಸೂರು, ಹಾಸನ, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಸಹ ಮೋಡದ ವಾತಾವರಣದ ಮುನ್ಸೂಚನೆ ಇದೆ. ಮಳೆಯ ಸಾಧ್ಯತೆ ಕಡಿಮೆ. 
ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ.

ಉಷ್ಣ ಹವೆ : IMD ಸೂಚನೆಯಂತೆ ಕೇರಳ, ಕರ್ನಾಟಕ ಹಾಗೂ ಹಾಗೂ ಗೋವಾ ರಾಜ್ಯಗಳ ಕರಾವಳಿ ಭಾಗಗಳಲ್ಲಿ ಇವತ್ತು ಉಷ್ಣ ಮಾರುತಗಳ ಸೂಚನೆ ನೀಡಿದೆ. 
ಕರಾವಳಿ ಭಾಗಗಳಿಗೆ ಅರಬ್ಬಿ ಸಮುದ್ರದ ಮೂಲಕ ದಕ್ಷಿಣದ ಗಾಳಿ ಒಳನುಸುಳುವ ಕಾರಣ ಇರಲೂಬಹುದು. 

ಈಗನ ಮುನ್ಸೂಚನೆಯಂತೆ ಮಾರ್ಚ್ 12ರಿಂದ ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಕರಾವಳಿ ಭಾಗಗಳಲ್ಲಿ ಮಳೆ ಮೋಡ ಕಾಣಿಸಿಕೊಳ್ಳಲಿದ್ದು, ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆಯೂ ಇದೆ. ಮಾರ್ಚ್ 15 ಹಾಗೂ 16ರಂದು ರಾಜ್ಯದ ಹೆಚ್ಚಿನ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 


08 March 2023

09.03.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

09.03.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಕೊಡಗು, ಚಿಕ್ಕಮಗಳೂರು ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಒಣ ಹವೆ ಮುಂದುವರಿಯಲಿದೆ. 

ಈಗನ ಮುನ್ಸೂಚನೆಯಂತೆ ಮಾರ್ಚ್ 11ರಿಂದ ಕಾಸರಗೋಡು, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆ ಮೋಡಗಳು ಕಾಣಿಸಿಕೊಳ್ಳಲಿದ್ದು, ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. 
14 ರಿಂದ ಕರಾವಳಿಯ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದರೆ. 15ರಂದು ರಾಜ್ಯದಾದ್ಯಂತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

04 March 2023

04.03.2023ರ ಹವಾಮಾನ ವರದಿ

2022ರ ಮಾರ್ಚ್ 3ರಂದು ಅಂದರೆ ಕಳೆದ ವರ್ಷ ಬಂಗಾಳಕೊಲ್ಲಿಯಲ್ಲಿ ಪ್ರಭಲ ವಾಯುಭಾರ ಕುಸಿತ ಉಂಟಾದರೂ ಕರ್ನಾಟಕದ ಕರಾವಳಿ ಭಾಗಗಳಲ್ಲಿ ತುಂತುರು ಮಳೆ ಮಾತ್ರ ಆಗಿತ್ತು. ಮಾರ್ಚ್ 19, 20 ರಿಂದ ಸುಬ್ರಹ್ಮಣ್ಯ, ಸುಳ್ಯ, ಬೆಳ್ತಂಗಡಿ ಸುತ್ತಮುತ್ತ ಉತ್ತಮ ಮಳೆ ಆರಂಭವಾಗಿತ್ತು. 
ಆದರೆ ವರ್ಷ ಅಂತಹ ಯಾವುದೇ ಲಕ್ಷಣಗಳು ಕಾಣುತ್ತಿಲ್ಲ. ಈಗ ಬಂಗಾಳಕೊಲ್ಲಿಯ ಕಡೆಯಿಂದ ಬೀಸುತ್ತಿರುವ ಗಾಳಿಯು ನಮ್ಮ ಒಳನಾಡು, ಮಲೆನಾಡು, ಕರಾವಳಿ ಭಾಗಗಳಿಗೆ ತಲಪುವಾಗ ಬಿಸಿಲಿನ ಪ್ರಭಾವದಿಂದ  (ಮೋಡವಿಲ್ಲದ್ದರಿಂದ) ಶುಷ್ಕಗೊಂಡು ಉಷ್ಣತೆ ಇನ್ನಷ್ಟು ಹೆಚ್ಚಿಸುತ್ತಿದೆ. 

ಅರಬ್ಬಿ ಸಮುದ್ರದ ಕಡೆಯಿಂದ ಗಾಳಿ ಬೀಸಲು ಆರಂಭಿಸದ ಹೊರತು ವಾತಾವರಣದಲ್ಲಿ ತೇವಾಂಶ ಕೊರತೆ ಮುಂದುವರಿಯಲಿದೆ ಹಾಗೂ ಮಳೆಯ ಸಾಧ್ಯತೆಯೂ ಕ್ಷೀಣಿಸುತ್ತಿದೆ.

ಹೀಗಾಗಿ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾದರೆ ಪಶ್ಚಿಮದ ಕಡೆ ಬೀಸುವ ಗಾಳಿಯ ಪ್ರಭಾವ ಕಡಿಮೆಯಾಗಬಹುದು. ಅದಿಲ್ಲದಿದ್ದರೆ ರಾಜ್ಯದಲ್ಲಿ ಬಿಸಿಲು ಹಾಗೂ ಒಣ ಹವೆ ಮುಂದುವರಿಯಬಹುದು. 

ಗುಜರಾತ್ ಹಾಗೂ ಮಹಾರಾಷ್ಟ್ರ ರಾಜ್ಯಗಳಲ್ಲಿ ಇವತ್ತು, ನಾಳೆಯಿಂದ ಮೋಡ, ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 
ಇದರ ಪ್ರಭಾವ ಕರ್ನಾಟಕದ ಕರಾವಳಿ ಭಾಗಗಳಿಗೂ ಉಂಟಾದರೆ ವಾತಾವರಣ ಬದಲಾಗಬಹುದು. ವಾತಾವರಣದಲ್ಲಿ ತೇವಾಂಶ ಉಂಟಾಗಿ ಹಗಲಿನ ಉಷ್ಣಾಂಶ ಸ್ವಲ್ಪ ಮಟ್ಟಿಗೆ ಕಡಿಮೆಯಾಗಬಹುದು. 

ಆದರೆ ಈಗಿನ ವಿದ್ಯಮಾನ ಪ್ರಕಾರ ಇವತ್ತಿನಿಂದ ರಾಜ್ಯದ ಕರಾವಳಿ ತೀರ ಭಾಗಗಳಲ್ಲಿ ಪಶ್ಚಿಮ ಹಾಗೂ ಪೂರ್ವದ ಗಾಳಿಯು ಸಂಧಿಸಲಿರುವುದರಿಂದ ಕರಾವಳಿ ತೀರ ಭಾಗಗಳಲ್ಲಿ ಉಷ್ಣಾಂಶ ಏರಿಕೆಯಾಗಬಹುದು. 

01 March 2023

02.03.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

02.03.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 
ನಾಳೆಯಿಂದ ಬಿಸಿಲು ಹಾಗೂ ಒಣ ಹವೆ ಮುಂದುವರಿಯಲಿದೆ. 
ಮಾರ್ಚ್ 5ರಿಂದ ಮತ್ತೆ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದೆ. 

ಕೊಡಗು, ಮೈಸೂರು, ಚಾಮರಾಜನಗರ, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ಅಲ್ಲಲ್ಲಿ ಸಹ ಮೋಡದ ವಾತಾವರಣದ ಮುನ್ಸೂಚನೆ ಇದೆ. 
ನಾಳೆಯಿಂದ ಬಿಸಿಲು ಹಾಗೂ ಒಣ ಹವೆ ಮುಂದುವರಿಯಲಿದೆ. ಮಾರ್ಚ್ 5ರಿಂದ ಮತ್ತೆ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದೆ. 

ಮಾರ್ಚ್ 3ರಿಂದ ಮಾರ್ಚ್ 8ರ ತನಕ ಮಹಾರಾಷ್ಟ್ರ, ಗುಜರಾತ್ ರಾಜ್ಯಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಕರ್ನಾಟಕದಾದ್ಯಂತ ಮುಂದಿನ 10 ದಿನಗಳವರೆಗೂ ಮಳೆಯ ಸಾಧ್ಯತೆ ಕಡಿಮೆ.
 

07.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

07.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಸಂ...