01 March 2023

02.03.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

02.03.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 
ನಾಳೆಯಿಂದ ಬಿಸಿಲು ಹಾಗೂ ಒಣ ಹವೆ ಮುಂದುವರಿಯಲಿದೆ. 
ಮಾರ್ಚ್ 5ರಿಂದ ಮತ್ತೆ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದೆ. 

ಕೊಡಗು, ಮೈಸೂರು, ಚಾಮರಾಜನಗರ, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ಅಲ್ಲಲ್ಲಿ ಸಹ ಮೋಡದ ವಾತಾವರಣದ ಮುನ್ಸೂಚನೆ ಇದೆ. 
ನಾಳೆಯಿಂದ ಬಿಸಿಲು ಹಾಗೂ ಒಣ ಹವೆ ಮುಂದುವರಿಯಲಿದೆ. ಮಾರ್ಚ್ 5ರಿಂದ ಮತ್ತೆ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದೆ. 

ಮಾರ್ಚ್ 3ರಿಂದ ಮಾರ್ಚ್ 8ರ ತನಕ ಮಹಾರಾಷ್ಟ್ರ, ಗುಜರಾತ್ ರಾಜ್ಯಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಕರ್ನಾಟಕದಾದ್ಯಂತ ಮುಂದಿನ 10 ದಿನಗಳವರೆಗೂ ಮಳೆಯ ಸಾಧ್ಯತೆ ಕಡಿಮೆ.
 

No comments:

Post a Comment