11.03.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಕೊಡಗು, ಮೈಸೂರು, ಹಾಸನ, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಸಹ ಮೋಡದ ವಾತಾವರಣದ ಮುನ್ಸೂಚನೆ ಇದೆ. ಮಳೆಯ ಸಾಧ್ಯತೆ ಕಡಿಮೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ.
ಉಷ್ಣ ಹವೆ : IMD ಸೂಚನೆಯಂತೆ ಕೇರಳ, ಕರ್ನಾಟಕ ಹಾಗೂ ಹಾಗೂ ಗೋವಾ ರಾಜ್ಯಗಳ ಕರಾವಳಿ ಭಾಗಗಳಲ್ಲಿ ಇವತ್ತು ಉಷ್ಣ ಮಾರುತಗಳ ಸೂಚನೆ ನೀಡಿದೆ.
ಕರಾವಳಿ ಭಾಗಗಳಿಗೆ ಅರಬ್ಬಿ ಸಮುದ್ರದ ಮೂಲಕ ದಕ್ಷಿಣದ ಗಾಳಿ ಒಳನುಸುಳುವ ಕಾರಣ ಇರಲೂಬಹುದು.
ಈಗನ ಮುನ್ಸೂಚನೆಯಂತೆ ಮಾರ್ಚ್ 12ರಿಂದ ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಕರಾವಳಿ ಭಾಗಗಳಲ್ಲಿ ಮಳೆ ಮೋಡ ಕಾಣಿಸಿಕೊಳ್ಳಲಿದ್ದು, ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆಯೂ ಇದೆ. ಮಾರ್ಚ್ 15 ಹಾಗೂ 16ರಂದು ರಾಜ್ಯದ ಹೆಚ್ಚಿನ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
No comments:
Post a Comment