18 March 2023

19.03.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

19.03.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಹೆಚ್ಚಿನ ಅವಧಿಯೂ ಬಿಸಿಲು ಹಾಗೂ ಅಲ್ಲಲ್ಲಿ ಸ್ವಲ್ಪ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಕೊಡಗು, ಮೈಸೂರು, ಹಾಸನ, ಮಂಡ್ಯ, ಚಿತ್ರದುರ್ಗ, ಬಳ್ಳಾರಿ, ಕೊಪ್ಪಳ ಜಿಲ್ಲೆಗಳಲ್ಲಿ ಸಂಜೆ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 

ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ರಾಯಚೂರು, ಯಾದಗಿರಿ, ವಿಜಾಪುರ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 
ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಈಗಿನ ಮುನ್ಸೂಚನೆಯಂತೆ ರಾಜ್ಯದ ದಕ್ಷಿಣ ಕರಾವಳಿ ಭಾಗಗಳಲ್ಲಿ ಮಾರ್ಚ್ 25ರ ನಂತರ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. 

No comments:

Post a Comment