Advertise

19 March 2023

20.03.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

20.03.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಮುಂಜಾನೆ ಮಳೆಯಾದ ವರದಿಗಳಿವೆ. ಇದರ ಪ್ರಭಾವದಿಂದ ತೇವಾಂಶ ಅಧಿಕವಾಗಿ ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಾದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ, ಕಾರ್ಕಳ ಸುತ್ತಮುತ್ತ ಭಾಗಗಳಲ್ಲಿ ಗುಡುಗಿನೊಂದಿಗೆ ಅಲ್ಲಲ್ಲಿ ಸಾಮಾನ್ಯ ಮಳೆಯ ಸಾಧ್ಯತೆ ಇದೆ.

ಕೊಡಗು, ಸಕಲೇಶಪುರ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಮೈಸೂರು, ಹಾಸನ, ಚಾಮರಾಜನಗರ, ಮಂಡ್ಯ ಜಿಲ್ಲೆಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 

ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಹಗುರವಾಗಿ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದೆ. 

ಈಗನ ಮುನ್ಸೂಚನೆಯಂತೆ ರಾಜ್ಯದ ದಕ್ಷಿಣ ಕರಾವಳಿ ಭಾಗಗಳಲ್ಲಿ ಮಾರ್ಚ್ 24ರ ನಂತರ ಮಳೆಯ ವಾತಾವರಣ ಗೋಚರಿಸುತ್ತಿದೆ. 




No comments:

Post a Comment

15.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

15.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :  ಕಾಸರಗೋಡು ಸೇರಿದಂತೆ ರಾ...