20 March 2023

21.03.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

21.03.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿಯಾದ್ಯಂತ ಹೆಚ್ಚಿನ ಅವಧಿ ಬಿಸಿಲಿನ ವಾತಾವರಣ ಇರಲಿದ್ದು ದಕ್ಷಿಣ ಕನ್ನಡ, ಕಾಸರಗೋಡು ಭಾಗಗಳಲ್ಲಿ ಅಲ್ಲಲ್ಲಿ ಆಗಾಗ ಮೋಡದ ವಾತಾವರಣ ಸಾಧ್ಯತೆ ಇದೆ. ಮಳೆಯ ಸಾಧ್ಯತೆ ಇರುವುದಿಲ್ಲ. 

ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಭಾಗಗಳಲ್ಲಿ ಅಲ್ಲಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚನೆ ಇದೆ ಇದ್ದು, ಚಾಮರಾಜನಗರದ ಒಂದೆರಡು ಪ್ರದೇಶಗಳಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ. 

ಈಗನ ಮುನ್ಸೂಚನೆಯಂತೆ ಮಾರ್ಚ್ 22ರಿಂದ ಕೊಡಗು ಜಿಲ್ಲಾ ಭಾಗಗಳಲ್ಲಿ ಅಲ್ಲಲ್ಲಿ ಮೋಡ ಹಾಗೂ ತುಂತುರು ಮಳೆಯ ಸಾಧ್ಯತೆ ಇದ್ದು, 25ರಂದು ಉತ್ತಮ ಮಳೆಯ ಮುನ್ಸೂಚನೆ ಇದೆ. ಇದೇ ದಿನ ಸುಳ್ಯ ಸುತ್ತಮುತ್ತ ಭಾಗಗಳಲ್ಲಿ ಸಹ ಸಾಮಾನ್ಯ ಮಳೆಯ ಸಾಧ್ಯತೆ ಇದೆ. 

No comments:

Post a Comment