Advertise

24 March 2023

25.03.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

25.03.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಸಂಜೆ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಕೊಡಗು, ಮೈಸೂರು, ಹಾಸನ, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡದ ವಾತಾವರಣ ಇರಲಿದ್ದು, ಸಂಜೆ, ರಾತ್ರಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲಿನ ವಾತಾವರಣದ ಮುನ್ಸೂಚನೆ ಇದೆ. 

ಇವತ್ತಿನಿಂದ ಮಾರ್ಚ್ ಕೊನೇಯ ತನಕವೂ ಕಾಸರಗೋಡು, ದಕ್ಷಿಣ ಕನ್ನಡ, ಕೊಡಗು ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಸಂಜೆ, ರಾತ್ರಿ ಅಲ್ಲಲ್ಲಿ ಮೋಡದ ವಾತಾವರಣ ಇರಲಿದ್ದು ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 
ಮೈಸೂರು, ಚಾಮರಾಜನಗರ, ರಾಮನಗರ ಭಾಗಗಳಲ್ಲಿ ತುಂತುರುಗಿಂತ ಸ್ವಲ್ಪ ಜಾಸ್ತಿ ಇರಬಹುದು. 

No comments:

Post a Comment

20.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

20.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರ್ನಾಟಕ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ...