Advertise

25 March 2023

26.03.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

26.03.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ ಭಾಗಗಳಲ್ಲಿ ಮೋಡ ವಾತಾವರಣ ಇರಲಿದ್ದು, ಸಂಜೆ ದಕ್ಷಿಣ ಕನ್ನಡದ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ. 

ಕೊಡಗು, ಮೈಸೂರು, ಹಾಸನ, ಮಂಡ್ಯ, ತುಮಕೂರು ಭಾಗಗಳಲ್ಲಿ ಮೋಡದ ವಾತಾವರಣದೊಂದಿಗೆ ಸಂಜೆ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ. 

ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲಿನ ವಾತಾವರಣದೊಂದಿಗೆ ಅಲ್ಲಲ್ಲಿ ಮೋಡ ಇರುವ ಮುನ್ಸೂಚನೆ ಇದೆ. 

ಮಾರ್ಚ್ ಕೊನೆಯ ತನಕವೂ ರಾಜ್ಯದಾದ್ಯಂತ ಮಳೆ ಸಾಧ್ಯತೆ ಕಡಿಮೆಯಾಗಿದ್ದು, ಈಗಿನ ಮುನ್ಸೂಚನೆಯಂತೆ ಕೊಡಗು, ದಕ್ಷಿಣ ಕನ್ನಡ ಹಾಗೂ ಕಾಸರಗೋಡು ಭಾಗಗಳಲ್ಲಿ ಎಪ್ರಿಲ್ 2 ರಿಂದ ಮಳೆಯ ಸಾಧ್ಯತೆ ಇದೆ. 

No comments:

Post a Comment

31.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

31.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ನಿನ್ನೆಯ ತನಕ ಮುನ್ಸೂಚನೆಯಲ್ಲಿ ದಕ್ಷಿಣ ಒಳನಾಡು, ಮಲೆನಾಡು ಹಾಗೂ...