Advertise

30 April 2023

01.05.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

01.05.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಹಾಗೂ ದಕ್ಷಿಣ ಕನ್ನಡದ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 
ಉಡುಪಿ ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 

ಕೊಡಗು, ಸೋಮವಾರಪೇಟೆ, ಸಕಲೇಶಪುರ, ಮೂಡಿಗೆರೆ, ಕಳಸ, ಶಿೃಂಗೇರಿ, ಕುದುರೆಮುಖ, ತೀರ್ಥಹಳ್ಳಿ, ಹೊಸನಗರ ಸುತ್ತಮುತ್ತ ಭಾಗಗಳಲ್ಲಿ ಸಹ ಮಳೆಯ ಮುನ್ಸೂಚನೆ ಇದೆ. 

ಮೈಸೂರು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 

ಬಳ್ಳಾರಿ, ರಾಯಚೂರು ಉತ್ತಮ ಮಳೆಯ ಮುನ್ಸೂಚನೆ ಇದೆ. 

ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಕೊಪ್ಪಳ, ಯಾದಗಿರಿ, ಕಲಬುರ್ಗಿ, ವಿಜಯಪುರ, ಬೀದರ್ ಜಿಲ್ಲೆಗಳ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ 

ಮಾಲ್ಡೀವ್ಸ್ ಕಡಲಲ್ಲಿ ವಾಯುಭಾರ ಕುಸಿತದಂತಹ ತಿರುವಿಕೆಯು ಇಂದು ರಾತ್ರಿ ಶಿಥಿಲಗೊಳ್ಳುತ್ತಿದ್ದು, ಪರಿಣಾಮದಿಂದ ಕೇರಳ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ರಾಜ್ಯದ ದಕ್ಷಿಣ ಒಳನಾಡು, ಮಲೆನಾಡು ಭಾಗಗಳಲ್ಲಿ ಸಹ ಮಳೆಯಾಗುತ್ತಿದ್ದು. ಮೇ 2ರ ನಂತರ ಇದರ ಪ್ರಭಾವ ಕೊನೆಗೊಂಡು ಮತ್ತೆ ಬಿಸಿಲಿನ ವಾತಾವರಣದ ಲಕ್ಷಣಗಳಿವೆ. 

29 April 2023

30.04. 2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

30.04.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ತೀರ ಭಾಗಗಳಲ್ಲಿ ಸಾಮಾನ್ಯ ಮಳೆ, ಉಳಿದ ಭಾಗಗಳಲ್ಲಿ ತುಂತುರು ಇರಬಹುದು. ದಕ್ಷಿಣ ಕನ್ನಡ , ಉಡುಪಿ ಘಟಕದ ತಪ್ಪಲು ಪ್ರದೇಶಗಳಾದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ, ಕಾರ್ಕಳ ಸುತ್ತಮುತ್ತ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಕರಾವಳಿ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಗಾಳಿ ಮಹತ್ವದ ಪಾತ್ರ ವಹಿಸಲಿದೆ. 

ಕೊಡಗು ಭಾರಿ ಮಳೆಯ ಮುನ್ಸೂಚನೆ ಇದ್ದರೆ, ಸೋಮವಾರಪೇಟೆ, ಸಕಲೇಶಪುರ, ಮೂಡಿಗೆರೆ, ಕಳಸ, ಶಿೃಂಗೇರಿ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಕೊಪ್ಪ, ತೀರ್ಥಹಳ್ಳಿ, ಹೊಸನಗರ, ಸಾಗರ ಸುತ್ತಮುತ್ತ ಭಾಗಗಳಲ್ಲಿ ಸಹ ಮಳೆಯ ಮುನ್ಸೂಚನೆ ಇದೆ. 

ಹಾಸನ, ಚಿಕ್ಕಮಗಳೂರು, ತುಮಕೂರು, ಚಾಮರಾಜನಗರದ ಬಿಳಿಗಿರಿ ರಂಗನ ಬೆಟ್ಟದ ಸುತ್ತಮುತ್ತ, ರಾಮನಗರ, ಬೆಂಗಳೂರು, ಚಿಕ್ಕಬಳ್ಳಾಪುರ, ಚಿತ್ರದುರ್ಗ - ದಾವಣಗೆರೆ ಗಡಿ ಭಾಗಗಳಲ್ಲಿ, ಬಳ್ಳಾರಿ, ರಾಯಚೂರು, ಕೊಪ್ಪಳ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಹೆಚ್ಚಿನ ಭಾಗಗಳಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 

ಈಗನ ಮುನ್ಸೂಚನೆಯಂತೆ ಎ. 30ರಂದು ರಾಯಚೂರು, ಯಾದಗಿರಿ, ಕೊಪ್ಪಳ, ವಿಜಯಪುರ, ಕಲಬುರ್ಗಿ, ಬೀದರ್ಇ ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ಇದೆ. 
ಇತ್ತಿನಿಂದ ಮೇ 1ನೇ ತಾರೀಕಿನ ತನಕ ದಕ್ಷಿಣ ಒಳನಾಡು ಹಾಗೂ ಮಲೆನಾಡು ಭಾಗಗಳಲ್ಲಿ ಅಲ್ಲಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. 

28 April 2023

29.04.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

29.04.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಕರಾವಳಿ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದರೆ ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಸ್ವಲ್ಪ ಜಾಸ್ತಿ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಹೆಚ್ಚಿನ ಭಾಗಗಳಲ್ಲಿ ಮೋಡದ ವಾತಾವರಣದೊಂದಿಗೆ ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆಯೂ ಇದೆ. 

ಗಾಳಿ ಮಹತ್ವದ ಪಾತ್ರ ವಹಿಸಲಿದೆ 

ಕೊಡಗು, ಸೋಮವಾರಪೇಟೆ, ಸಕಲೇಶಪುರ, ಮೂಡಿಗೆರೆ, ಕಳಸ, ಶಿೃಂಗೇರಿ, ಕುದುರೆಮುಖ, ಆಗುಂಬೆ, ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಕೊಪ್ಪ, ತೀರ್ಥಹಳ್ಳಿ, ಹೊಸನಗರ, ಸಾಗರ ಸುತ್ತಮುತ್ತ ಭಾಗಗಳಲ್ಲಿ ಸಹ ಮಳೆಯ ಮುನ್ಸೂಚನೆ ಇದೆ. 

ಯಾದಗಿರಿ, ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. 

ಇವತ್ತು ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 

ಅರಬ್ಬಿ ಸಮುದ್ರದಲ್ಲಿ ಕನ್ಯಾಕುಮಾರಿ ಬಳಿ ಸಣ್ಣ ಪ್ರಮಾಣದ ವಾಯುಭಾರ ಕುಸಿತದಂತಹ ತಿರುವಿಕೆಯಿಂದ ಅರಬ್ಬಿ ಸಮುದ್ರದಲ್ಲಿ ಮೋಡಗಳು ಉಂಟಾಗಿದ್ದು, ಆ ಮೋಡಗಳು ಈಶಾನ್ಯಕ್ಕೆ (ಉತ್ತರ - ಪೂರ್ವ) ಚಲಿಸುವ ಸಾಧ್ಯತೆ ಹೆಚ್ಚಿದೆ. ಇದರಿಂದ ಕರ್ನಾಟಕದ ಕರಾವಳಿ ಭಾಗಗಳಲ್ಲಿ ಮಳೆಯ ಸಾಧ್ಯತೆ ಇದೆ. 
ಎಪ್ರಿಲ್ 30 ರಿಂದ ಮೇ 1ನೇ ತಾರೀಕಿನವರೆಗೆ ದಕ್ಷಿಣ ಒಳನಾಡು ಭಾಗಗಳಲ್ಲಿ ಉತ್ತಮ ಮಳೆಯ ನಿರೀಕ್ಷೆ ಇದೆ. 


27 April 2023

28.04.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

28.04.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕೊಡಗು, ಸೋಮವಾರಪೇಟೆ, ಮೂಡಿಗೆರೆ, ಶಿೃಂಗೇರಿ, ಕುದುರೆಮುಖ, ಆಗುಂಬೆ ಸುತ್ತಮುತ್ತ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. 

ರಾಯಚೂರು, ಯಾದಗಿರಿ, ಕೊಪ್ಪಳ ಹಾಗೂ ವಿಜಯಪುರ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಕೆಲವು ಕಡೆ ಭಾರಿ ಮಳೆಯ ಸಾಧ್ಯತೆಯೂ ಇದೆ. 

ಕಾಸರಗೋಡು ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ದಕ್ಷಿಣ ಕನ್ನ ಹಾಗೂ ಉಡುಪಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡ ಇರಲಿದ್ದು, ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಾದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ, ಕಾರ್ಕಳ ಸುತ್ತಮುತ್ತ ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಸಾಧ್ಯತೆ ಇದೆ. ಉತ್ತರ ಕನ್ನಡ ಅಲ್ಲಲ್ಲಿ ಮೋಡ ಅಥವಾ ತುಂತುರು ಮಳೆಯ ಮುನ್ಸೂಚನೆ ಇದೆ. ಗಾಳಿ ಮಹತ್ವದ ಪಾತ್ರ ವಹಿಸಲಿದೆ 

 ಹಾವೇರಿ, ಪಾವಗಡ, ತುಮಕೂರಿನ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಮೈಸೂರು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ಉಳಿದ ತುಮಕೂರು, ಚಿತ್ರದುರ್ಗ, ದಾವಣಗೆರೆ, ಧಾರವಾಡ, ಬಳ್ಳಾರಿ, ಕೊಪ್ಪಳ, ಬಾಗಲಕೋಟೆ, ಗದಗ, ಬೀದರ್ ಜಿಲ್ಲೆಗಳಲ್ಲಿ ಸಂಜೆ, ರಾತ್ರಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 

26 April 2023

27.04.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

27.04.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕೊಡಗು, ಸಕಲೇಶಪುರ, ಮೂಡಿಗೆರೆ, ಶಿೃಂಗೇರಿ, ಕುದುರೆಮುಖ, ಚಿಕ್ಕಮಗಳೂರು, ಉತ್ತಮ ಮಳೆಯ ಮುನ್ಸೂಚನೆ ಇದೆ. 

ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳಲ್ಲಿ ಸಹ ಮಳೆಯ ಮುನ್ಸೂಚನೆ ಇದೆ. 

ಕಾಸರಗೋಡು ಮೋಡದೊಂದಿಗೆ ಒಂದೆರಡು ಕಡೆ ( ಮುಳ್ಳೇರಿಯ, ಈಶ್ವರಮಂಗಲ ಸುತ್ತಮುತ್ತ) ತುಂತುರು  ಮಳೆಯ ಸಾಧ್ಯತೆಯೂ ಇದೆ. ದಕ್ಷಿಣ ಹಾಗೂ ಉಡುಪಿ ಹೆಚ್ಚಿನ ಭಾಗಗಳಲ್ಲಿ ಮೋಡದ ವಾತಾವರಣ ಇರಲಿದ್ದು ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ದಕ್ಷಿಣ ಕನ್ನಡ ಭಾಗಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಗಾಳಿ ಮಹತ್ವದ ಪಾತ್ರ ವಹಿಸಲಿದೆ. ಉತ್ತರ ಕನ್ನಡ ಅಲ್ಲಲ್ಲಿ ಮೋಡ ಮಾತ್ರ ಇರಬಹುದು. 

ಮೈಸೂರು, ಮಂಡ್ಯ, ಚಾಮರಾಜನಗರ, ಹಾಸನ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಉಳಿದ ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಬಳ್ಳಾರಿ, ರಾಯಚೂರು, ಕೊಪ್ಪಳ, ವಿಜಯಪುರ ಜಿಲ್ಲೆಗಳ ಅಲ್ಲಲ್ಲಿ ತುಂತುರು ಹಾಗೂ ಕೆಲವು ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಇವತ್ತಿನಿಂದ ಕೇರಳ ಅರಬ್ಬಿ ಸಮುದ್ರ ಕಡೆಯಿಂದಲೂ ಮೋಡಗಳು ಕಾಣಿಸಿಕೊಳ್ಳಲಿದ್ದು ದಕ್ಷಿಣ ಹಾಗೂ ಮಧ್ಯ ಕೇರಳ ಕರಾವಳಿಯ ಹಲವೆಡೆ ಮಳೆಯ ಮುನ್ಸೂಚನೆ ಇದೆ. 
ಇನ್ನೆರಡು ದಿನಗಳಲ್ಲಿ ಕಾಸರಗೋಡು ಹಾಗೂ ದಕ್ಷಿಣದ ಕರಾವಳಿಯಲ್ಲೂ ಮಳೆಯ ಸಾಧ್ಯತೆ ಇದೆ. 



25 April 2023

26.04.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

26.04.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 
ಸುಳ್ಯ, ಸುಬ್ರಹ್ಮಣ್ಯ, ಧರ್ಮಸ್ಥಳ ಸುತ್ತಮುತ್ತ ಭಾಗಗಳಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ. 

ಕೊಡಗು, ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದ್ದರೆ, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಬಳ್ಳಾರಿ, ರಾಯಚೂರು, ಯಾದಗಿರಿ, ಕಲಬುರ್ಗಿ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 
ಕೊಪ್ಪಳ, ವಿಜಯಪುರ ಜಿಲ್ಲೆಗಳ ಅಲ್ಲಲ್ಲಿ ಮೋಡ ಅಥವಾ ತುಂತುರು ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಒಣ ಹವೆ ಮುಂದುವರಿಯಲಿದೆ. 


24 April 2023

25.04.2023

25.04.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸುಳ್ಯ ಹಾಗೂ ಸುಬ್ರಹ್ಮಣ್ಯ ಸುತ್ತಮುತ್ತ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ. 

ಕೊಡಗು, ಮೈಸೂರು, ಚಿಕ್ಕಮಗಳೂರು ಅಲ್ಲಲ್ಲಿ ಮೋಡ ಅಥವಾ ತುಂತುರು ಮಳೆಯ ಮುನ್ಸೂಚನೆ ಇದೆ. 

ಹಾಸನ, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 

ಚಿತ್ರದುರ್ಗ, ಪಾವಗಡ, ಬಳ್ಳಾರಿ, ರಾಯಚೂರು, ಯಾದಗಿರಿ, ಕಲಬುರ್ಗಿ, ಬೀದರ್, ಗುಲ್ಬರ್ಗ ಜಿಲ್ಲಾ ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಒಣ ಹವೆ ಮುಂದುವರಿಯಲಿದೆ. 

ಈಗನ ಮುನ್ಸೂಚನೆಯಂತೆ ಇನ್ನು 2 ದಿನಗಳ ತನಕ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದ್ದರೆ, ಎಪ್ರಿಲ್ 26ರಿಂದ ರಾಜ್ಯದಾದ್ಯಂತ (ಕರಾವಳಿ ಹೊರತುಪಡಿಸಿ) ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 
ಎಪ್ರಿಲ್ 26ರಿಂದ ಅರಬ್ಬಿ ಸಮುದ್ರ ಕಡೆಯಿಂದ ಮೋಡಗಳು ಕಾಣಿಸಿಕೊಳ್ಳಲಿದ್ದು 28ರಿಂದ ಕರಾವಳಿ ಭಾಗಗಳಲ್ಲಿ ಮಳೆ ಆರಂಭವಾಗುವ ಮುನ್ಸೂಚನೆ ಇದೆ. 


23 April 2023

23.04.2023ರ ಹವಾಮಾನ ವರದಿ

ಅರಬ್ಬಿ ಸಮುದ್ರದಲ್ಲಿ ಸರಿಯಾಗಿ ಮೋಡಗಳು ಉತ್ಪತ್ತಿಗೊಂಡರೆ ಮಾತ್ರ ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಉತ್ತಮ ಮಳೆಯ ಸಾಧ್ಯತೆ ಇದೆ. 

13.04.2022 ರಂದು ಕರಾವಳಿ ಹಾಗೂ ಮಲೆನಾಡು ಭಾಗಗಳ ಅಲ್ಲಲ್ಲಿ ಉತ್ತಮ ಮಳೆಯಾಗಿತ್ತು. 
http://saishekharbb.blogspot.com/2022/04/140422-8.html
ಇದು 2022 ಎಪ್ರಿಲ್ 13ರ ಹವಾಮಾನ ಮುನ್ಸೂಚನೆ. 
ಎಪ್ರಿಲ್ 13 ರಂದು ಸಂಜೆ ಸುಳ್ಯ ತಾಲೂಕಿನ ಕರಿಕಳ, ಪಂಜ ಸುತ್ತಮುತ್ತ 80.00mmಗೂ ಅಧಿಕ ಮಳೆಯಾಗಿತ್ತು. 
ಆ ಸಮಯದಲ್ಲಿ ಅರಬ್ಬಿ ಸಮುದ್ರದಲ್ಲಿ ಅಧಿಕ ಮೋಡ ಹಾಗೂ ಮಳೆಯ ವಾತಾವರಣದಿಂದಾಗಿ ಕರಾವಳಿ ಭಾಗಗಳಲ್ಲಿ ಮಳೆಯಾಗಿತ್ತು. 


24.04.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

24.04.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು. ಮಳೆಯ ಸಾಧ್ಯತೆ ಕಡಿಮೆ. ಇನ್ನು ಎ. 26ರ ನಂತರ ಕರಾವಳಿಯಲ್ಲಿ ಮಳೆಯ ಸಾಧ್ಯತೆ ಇದೆ. 

ಕೊಡಗು, ಮೈಸೂರು, ಮಂಡ್ಯ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಕೋಲಾರ ಅಲ್ಲಲ್ಲಿ ಮೋಡ ಅಥವಾ ತುಂತುರು ಮಳೆಯ ಮುನ್ಸೂಚನೆ ಇದೆ. 

ಚಾಮರಾಜನಗರ, ರಾಮನಗರ, ಬೆಂಗಳೂರು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 
ಉಳಿದ ಕರ್ನಾಟಕದ ಭಾಗಗಳಲ್ಲಿ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ. 

ಈಗಿನ ಮುನ್ಸೂಚನೆಯಂತೆ ಎಪ್ರಿಲ್ 25ರಿಂದ ದಕ್ಷಿಣ ಒಳನಾಡಿನ ಬಹುತೇಕ ಭಾಗಗಳಲ್ಲಿ (ಕರಾವಳಿ ಹೊರತುಪಡಿಸಿ) ಹಾಗೂ 26ರಿಂದ ಮಧ್ಯ ಹಾಗೂ ಉತ್ತರ ಒಳನಾಡಿನ ಭಾಗಗಳಲ್ಲಿಯೂ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 




22 April 2023

23.04.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

23.04.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ. 

ಕೊಡಗು ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. 

ಮೈಸೂರು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 
ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಒಣ ಹವೆ ಮುಂದುವರಿಯಲಿದೆ. 

ಈಗನ ಪರಿಸ್ಥಿತಿಯಲ್ಲಿ ಅರಬ್ಬಿ ಸಮುದ್ರದಲ್ಲಿ ಸರಿಯಾಗಿ ಮೋಡಗಳು ಉತ್ಪತ್ತಿಗೊಂಡರೆ ಮಾತ್ರ ಕರಾವಳಿ ಭಾಗಗಳಲ್ಲಿ ಮಳೆಯ ಸಾಧ್ಯತೆ ಇದೆ. ಈಗಿನ ಪ್ರಕಾರ ಎ. 25ರಿಂದ ಕೇರಳ ಕರಾವಳಿಯ ಸಮುದ್ರ ಭಾಗಗಳಲ್ಲಿ ಮೋಡಗಳು ಕಾಣಿಸಿಕೊಳ್ಳಲಿದ್ದು, 26ರಿಂದ ಕರ್ನಾಟಕದ ಕರಾವಳಿ ಸಮುದ್ರ ಭಾಗಗಳಲ್ಲಿ ಮೋಡಗಳು ಕಾಣಿಸಿಕೊಳ್ಳಲಿವೆ. 



21 April 2023

22.04.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

22.04.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕೊಡಗು, ಸೋಮವಾರಪೇಟೆ, ಸಕಲೇಶಪುರ, ಮೂಡಿಗೆರೆ, ಕೊಪ್ಪ, ಶಿೃಂಗೇರಿ, ಕುದುರೆಮುಖ, ಆಗುಂಬೆ ಭಾಗಗಳಲ್ಲಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ. ಒಂದೆರಡು ಕಡೆ ಭಾರಿ ಮಳೆಯ ಸಾಧ್ಯತೆಯೂ ಇದೆ. 

ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಕಡಬ, ಬೆಳ್ತಂಗಡಿ, ಧರ್ಮಸ್ಥಳ, ಕಾರ್ಕಳ ಸುತ್ತಮುತ್ತ ಭಾಗಗಳಲ್ಲಿ ಸಹ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಕಾಸರಗೋಡು, ಉಳಿದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಗಾಳಿ ಮಹತ್ವದ ಪಾತ್ರ ವಹಿಸಲಿದೆ 

ಚಿಕ್ಕಮಗಳೂರು, ಶಿವಮೊಗ್ಗ, ಹಾವೇರಿ, ಧಾರವಾಡ, ದಾವಣಗೆರೆ, ಚಿತ್ರದುರ್ಗ, ಬಳ್ಳಾರಿ, ರಾಯಚೂರು, ಯಾದಗಿರಿ, ಕಲಬುರ್ಗಿ, ಬೀದರ್, ಚಿತ್ರದುರ್ಗ, ಪಾವಗಡ, ಹಾಸನ, ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ. 

ಕ್ಷಣ ಕ್ಷಣಕ್ಕೂ ಹವಾಮಾನ ಬದಲಾವುತ್ತಾ ಇರುವುದರಿಂದ ಎರಡು ಅಥವಾ ಹೆಚ್ಚು ದಿನಗಳ ಮುನ್ಸೂಚನೆ ನೀಡಲು ಸಾಧ್ಯವಾಗುತ್ತಿಲ್ಲ. 


20 April 2023

21.04.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

21.94.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಸಂಜೆ, ರಾತ್ರಿ ಅಲ್ಲಲ್ಲಿ ಮೋಡ ಅಥವಾ ತುಂತುರು ಮಳೆಯ ಮುನ್ಸೂಚನೆ ಇದೆ. ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಸಾಮಾನ್ಯ ಮಳೆಯ ಸಾಧ್ಯತೆ ಇದ್ದರೆ, ಕಾರ್ಕಳ, ಕುದುರೆಮುಖ, ಶಿೃಂಗೇರಿ, ಆಗುಂಬೆ, ತೀರ್ಥಹಳ್ಳಿ ಸುತ್ತಮುತ್ತ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. 

ಕೊಡಗು ಉತ್ತಮ ಮಳೆಯ ಮುನ್ಸೂಚನೆ ಇದ್ದರೆ, ಮೈಸೂರು, ಉಳಿದ ಚಿಕ್ಕಮಗಳೂರು, ಶಿವಮೊಗ್ಗ, ರಾಮನಗರ, ಬೆಂಗಳೂರು,  ತುಮಕೂರು, ಕಲಬುರ್ಗಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ 



19 April 2023

20.04.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

20.04.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಸಂಜೆ ರಾತ್ರಿ ಮೋಡದ ವಾತಾವರಣದ ಮುನ್ಸೂಚನೆ ಇರಲಿದ್ದು, ಸುಳ್ಯ, ಸುಬ್ರಹ್ಮಣ್ಯ, ಧರ್ಮಸ್ಥಳ, ಕಾರ್ಕಳ ಸುತ್ತಮುತ್ತ ಭಾಗಗಳಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ. 

ಕೊಡಗು, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಸಂಜೆ ಮೋಡದ ವಾತಾವರಣದ ಜೊತೆ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ. 

ಈಗನ ಮುನ್ಸೂಚನೆಯಂತೆ ಎಪ್ರಿಲ್ 20ರಿಂದ ದಕ್ಷಿಣ ಕರಾವಳಿ, ಕೊಡಗು, ಚಿಕ್ಕಮಗಳೂರು ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 
ಎಪ್ರಿಲ್ 26ರಿಂದ ಉತ್ತರ ಕರಾವಳಿ ಹಾಗೂ ಮಧ್ಯ, ಉತ್ತರ ಒಳನಾಡು ಭಾಗಗಳಲ್ಲಿ ಸಹ ಮಳೆಯ ಮುನ್ಸೂಚನೆ ಇದೆ. 

17 April 2023

18.04.2023ಲ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

18.04.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸುಬ್ರಹ್ಮಣ್ಯ, ಧರ್ಮಸ್ಥಳ ಸುತ್ತಮುತ್ತ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. 
ಕೊಡಗು ಹೆಚ್ಚಿನ ಭಾಗಗಳಲ್ಲಿ ಸಂಜೆ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 
ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಸಂಜೆ, ರಾತ್ರಿ ಅಲ್ಲಲ್ಲಿ ಹಗುರವಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಈಗನ ಮುನ್ಸೂಚನೆಯಂತೆ ಎಪ್ರಿಲ್ 19 ಹಾಗೂ 20ರಂದು ಉತ್ತರ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಸಾಧ್ಯತೆ ಇದ್ದರೆ, 20ರಿಂದ 24 ತನಕ ಮಧ್ಯ,  ದಕ್ಷಿಣ ಕರಾವಳಿ, ಒಳನಾಡು ಹಾಗೂ ಮಲೆನಾಡು ಭಾಗಗಳಲ್ಲಿ ಅಲ್ಲಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. 

16 April 2023

17.04.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

17.04.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಹೆಚ್ಚಿನ ಅವಧಿಯೂ ಮೋಡದ ವಾತಾವರಣ ಇರಲಿದ್ದು,  
ಧರ್ಮಸ್ಥಳ, ಕಾರ್ಕಳ, ಕುದುರೆಮುಖ ಸುತ್ತಮುತ್ತ ಭಾಗಗಳಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಎಪ್ರಿಲ್ 19ರ ತನಕವೂ ಇದೇ ವಾತಾವರಣ ಮುಂದುವರಿಯುವ ಲಕ್ಷಣಗಳಿವೆ. ಎಪ್ರಿಲ್ 20ರಿಂದ ಕೊಡಗು ಹಾಗೂ ಕುದುರೆಮುಖ, ಆಗುಂಬೆ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಇದರ ಪ್ರಭಾವದಿಂದ ದಕ್ಷಿಣ ಕನ್ನಡ ಹಾಗೂ ಕಾಸರಗೋಡು ಜಿಲ್ಲೆಗಳ ಅಲ್ಲಲ್ಲಿ ಮಳೆಯ ಸಾಧ್ಯತೆ ಇದೆ. 
ಎಪ್ರಿಲ್ 19ರಿಂದ ಉತ್ತರ ಒಳನಾಡು ಹಾಗೂ ಎಪ್ರಿಲ್ 20ರಿಂದ ದಕ್ಷಿಣ ಒಳನಾಡು ಸೇರಿದಂತೆ ಕರ್ನಾಟಕದ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. 

15 April 2023

16.04.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

16.04.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 
ಸುಳ್ಯ, ಸುಬ್ರಹ್ಮಣ್ಯ ಸುತ್ತಮುತ್ತ ಭಾಗಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದ್ದರೆ, ಧರ್ಮಸ್ಥಳ, ಕಾರ್ಕಳ, ಮೂಡಿಗೆರೆ, ಶಿೃಂಗೇರಿ, ಕುದುರೆಮುಖ, ತೀರ್ಥಹಳ್ಳಿ, ಹೊಸನಗರ, ಸಾಗರ, ಶಿರಸಿ ಸುತ್ತಮುತ್ತ ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 
ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಧಾರವಾಡ, ಬೆಳಗಾವಿ ಜಿಲ್ಲೆಗಳ ಅಲ್ಲಲ್ಲಿ ಮೋಡ ಅಥವಾ ತುಂತುರು ಮಳೆಯ ಮುನ್ಸೂಚನೆ ಇದೆ. ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆಯೂ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಈಗನ ಮುನ್ಸೂಚನೆಯಂತೆ ದಿನ ಕಳೆದಂತೆ ಮಳೆಯ ಸಾಧ್ಯತೆ ಕ್ಷೀಣಿಸುತ್ತಿದೆ. ಕರಾವಳಿ ಭಾಗಗಳಲ್ಲಿ ಎಪ್ರಿಲ್ 20ರಿಂದ ಉತ್ತಮ ಮಳೆಯ ನಿರೀಕ್ಷೆ ಇದೆ. ಉತ್ತರ ಒಳನಾಡು ಭಾಗಗಳಲ್ಲಿ ಎ. 18 ರಿಂದ 20ರ ವರೆಗೆ ಮತ್ತು ದಕ್ಷಿಣ ಒಳನಾಡು ಭಾಗಗಳಲ್ಲಿ ಎ. 20ರಿಂದ 24ರ ತನಕ ಮಳೆಯ ನಿರೀಕ್ಷೆ ಇದೆ. ಬದಲಾಗಬಹುದು. 
 

14 April 2023

15.04.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

15.04.2023ಲ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡದ ವಾತಾವರಣ ಇರಲಿದ್ದು, ಸಂಜೆ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ, ಕಾರ್ಕಳ ಸುತ್ತಮುತ್ತ ಭಾಗಗಳಲ್ಲಿ ಗುಡುಗಿನೊಂದಿಗೆ ತುಂತುರು ಮಳೆಯ ಮುನ್ಸೂಚನೆ ಇದೆ. ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆಯೂ ಇದೆ. 

ಕೊಡಗು, ಮೂಡಿಗೆರೆ, ಶಿೃಂಗೇರಿ, ಕುದುರೆಮುಖ, ತೀರ್ಥಹಳ್ಳಿ ಸುತ್ತಮುತ್ತ ಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 
ಬೆಳಗಾವಿ ಸೇರಿದಂತೆ ಕರ್ನಾಟಕ - ಮಹಾರಾಷ್ಟ್ರ ಗಡಿ ಭಾಗಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 
ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಈಗನ ಮುನ್ಸೂಚನೆಯಂತೆ ಎಪ್ರಿಲ್ 15 ರಿಂದ ಕೊಡಗು ಹಾಗೂ ಕುದುರೆಮುಖ, ಶಿೃಂಗೇರಿ, ತೀರ್ಥಹಳ್ಳಿ ಭಾಗಗಳಲ್ಲಿ ಅಲ್ಲಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಇದರ ಪ್ರಭಾವದಿಂದ ದಕ್ಷಿಣ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ, ಕಾರ್ಕಳ ಸುತ್ತಮುತ್ತ ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 
ಆದರೆ ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿಯಾದ್ಯಂತ ಉತ್ತಮ ಮಳೆಯು ಎಪ್ರಿಲ್ 20ರಿಂದ ಆರಂಭವಾಗುವ ಮುನ್ಸೂಚನೆ ಇದೆ. 

12 April 2023

13.04.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

13.04.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ರಾತ್ರಿ, ತಡ ರಾತ್ರಿ ಮೋಡ ಕವಿದ ವಾತಾವರಣ ಇರಲಿದ್ದು, ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಾದ ಸುಳ್ಯ, ಸುಬ್ರಹ್ಮಣ್ಯ, ಧರ್ಮಸ್ಥಳ, ಕಾರ್ಕಳ ಸುತ್ತಮುತ್ತ ಪ್ರದೇಶದಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ. 

ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ರಾತ್ರಿ, ತಡರಾತ್ರಿ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದೆ. ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆಯೂ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಹಗುರವಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಈಗನ ಮುನ್ಸೂಚನೆಯಂತೆ ಎಪ್ರಿಲ್ 14 ಅಥವಾ 15 ಅಂದರೆ ಸೌರಮಾನ ಯುಗಾದಿ (ವಿಷು)ಯಿಂದ ಕೊಡಗು ಹಾಗೂ ಕುದುರೆಮುಖ, ಆಗುಂಬೆ, ಶಿೃಂಗೇರಿ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಇದರ ಪ್ರಭಾವದಿಂದ ದಕ್ಷಿಣ ಕನ್ನಡ, ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಹಾಗೂ ಉತ್ತರ ಒಳನಾಡಿನ ಉತ್ತಮ ಮಳೆಯ ಸಾಧ್ಯತೆ ಇದೆ. 
ಎಪ್ರಿಲ್ 17,18ರ ನಂತರ ದಕ್ಷಿಣ ಒಳನಾಡು ಭಾಗಗಳಲ್ಲಿಯೂ ಮಳೆಯ ಮುನ್ಸೂಚನೆ ಇದೆ. 

10 April 2023

11.04.2023ಲ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

11.04.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಅಲ್ಲಲ್ಲಿ ಮೋಡ ಅಥವಾ ತುಂತುರು, ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ, ಕಾರ್ಕಳ ಸುತ್ತಮುತ್ತ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 

ಕೊಡಗು ಹಾಗೂ ಮೂಡಿಗೆರೆ, ಕುದುರೆಮುಖ, ಆಗುಂಬೆ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. 

ಶಿೃಂಗೇರಿ, ತೀರ್ಥಹಳ್ಳಿ, ಹೊಸನಗರ ಸುತ್ತಮುತ್ತ ಸಹ ಮಳೆಯ ಮುನ್ಸೂಚನೆ ಇದೆ. 

ಹಾವೇರಿ ಜಿಲ್ಲೆಯ ಒಂದೆರಡು ಭಾಗಗಳಲ್ಲಿ ಹಾಗೂ ಹುಬ್ಬಳ್ಳಿ ಸುತ್ತಮುತ್ತ ತುಂತುರು ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲಿನ ವಾತಾವರಣ ಮುಂದುವರಿಯಲಿದೆ. 

ಆದರೂ ಕರಾವಳಿ ಜಿಲ್ಲೆಗಳಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗುತ್ತಿಲ್ಲ. ಈಗಿನ ಮುನ್ಸೂಚನೆಯಂತೆ ಸೌರಮಾನ ಯುಗಾದಿ (ವಿಷು) ಅಂದರೆ ಎಪ್ರಿಲ್ 15ರ ನಂತರದ ದಿನಗಳಲ್ಲಿ ಉತ್ತಮ ಮಳೆಯ ನಿರೀಕ್ಷೆ ಇದೆ. 


09 April 2023

10.04.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

10.04.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಅಲ್ಲಲ್ಲಿ ಮೋಡ ಅಥವಾ ತುಂತುರು ಮಳೆಯ ಮುನ್ಸೂಚನೆ ಇದೆ. 
ದಕ್ಷಿಣ ಕನ್ನಡ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಹಾಗೂ ಉಡುಪಿಯ ಕಾರ್ಕಳ ( ಘಟ್ಟ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ) ಅಲ್ಲಲ್ಲಿ ತುಂತುರು ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆಯೂ ಇದೆ. ಉಳಿದ ಕರಾವಳಿ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಅಲ್ಲಲ್ಲಿ ಹಗುರವಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 


08 April 2023

09.04.2023 ರ ಬೆಳಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

09.04.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಧಾರವಾಡ, ಬೆಳಗಾವಿ ಜಿಲ್ಲೆಗಳ ಅಲ್ಲಲ್ಲಿ ಸಹ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಹಗುರವಾಗಿ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದೆ. 



07 April 2023

08.04.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

08.04.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 

ಕೊಡಗು, ಹಾಸನ (ಸಕ್ಲೇಶ್ಪುರ ಭಾಗಗಳಲ್ಲಿ), ಚಿಕ್ಕಮಗಳೂರು, ಶಿವಮೊಗ್ಗ, ಹಾವೇರಿ, ಧಾರವಾಡ, ಬೆಳಗಾವಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. 
( ಗೋವಾ, ಬೆಳಗಾವಿ, ಉತ್ತರ ಕನ್ನಡ ಉತ್ತಮ ಮಳೆಯ ಮುನ್ಸೂಚನೆ ಇದೆ) 

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಹಗುರವಾಗಿ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದೆ. 

ಈಗನ ಮುನ್ಸೂಚನೆಯಂತೆ ಮುಂದಿನ 10 ದಿನಗಳವರೆಗೂ ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. 

ಘಟ್ಟ ಪ್ರದೇಶಗಳಲ್ಲಿ ಉತ್ಪತ್ತಿಯಾದ ಮೋಡಗಳು ಪೂರ್ವಕ್ಕೆ ಚಲಿಸಿದ ಕಾರಣ ನಿನ್ನೆ ಕರಾವಳಿ ಭಾಗಗಳಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗಿಲ್ಲ. ರಾತ್ರಿ ಹಾಗೂ ಮುಂಜಾನೆ ಅರಬ್ಬಿ ಸಮುದ್ರ ಕಡೆಯಿಂದ ಬಂದ ಮೋಡಗಳಿಂದ ಕರಾವಳಿಯ ಕೆಲವು ಭಾಗಗಳಲ್ಲಿ ಅಬ್ಬರವಿಲ್ಲದೆ ಮಳೆಯಾಗಿದೆ. 
ಇವತ್ತು ಸ್ಥಳೀಯ ಮೋಡಗಳೂ ಸೇರಿಕೊಂಡರೆ ಗುಡುಗು ಸಹಿತ ಮಳೆಯ ಸಾಧ್ಯತೆ ಇದೆ. 


06 April 2023

07.04.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

07.04.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಹಾಗೂ ಉಡುಪಿ ಜಿಲ್ಲಾ ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ, ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳಲ್ಲಿ ಗುಡುಗಿನೊಂದಿಗೆ ಉತ್ತಮ ಮಳೆಯ ಮುನ್ಸೂಚನೆ ಇದೆ. (ಇಲ್ಲಿ ಗಾಳಿ ಮಹತ್ವದ ಪಾತ್ರ ವಹಿಸಲಿದೆ) ಉಳಿದ ದ. ಕ. ಅಲ್ಲಲ್ಲಿ ಸಾಮಾನ್ಯ ಮಳೆ ಮುನ್ಸೂಚನೆ ಇದೆ. 

ಕೊಡಗು ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಉತ್ತಮ, ಮೈಸೂರು, ಚಾಮರಾಜನಗರ, ಹಾಸನ, ಶಿವಮೊಗ್ಗ, ಹಾವೇರಿ, ಧಾರವಾಡ, ಬಾಗಲಕೋಟೆ, ದಾವಣಗೆರೆ, ಬಳ್ಳಾರಿ, ರಾಯಚೂರು, ಕೊಪ್ಪಳ, ಯಾದಗಿರಿ, ವಿಜಾಪುರ, ಕಲಬುರ್ಗಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 

ಚಿತ್ರದುರ್ಗ ಮೋಡದೊಂದಿಗೆ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 
ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. 



05 April 2023

06.04.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

06.04.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ ಹೆಚ್ಚಿನ ಭಾಗಗಳಲ್ಲಿ ಸಂಜೆ ಮೋಡದ ವಾತಾವರಣ ಇರಲಿದ್ದು, ಸುಳ್ಯ, ಸುಬ್ರಹ್ಮಣ್ಯ ಸುತ್ತಮುತ್ತ ಭಾಗಗಳಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 

ಕೊಡಗು, ಮೈಸೂರು, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಪಾವಗಡ, ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಹಗುರವಾಗಿ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದೆ. 

ಈಗನ ಮುನ್ಸೂಚನೆಯಂತೆ ಕೊಡಗಿನಲ್ಲಿ ಇವತ್ತಿನಿಂದ ಮಳೆ ಪ್ರಾರಂಭವಾಗುವ ಲಕ್ಷಣಗಳಿದ್ದು ಮುಂದಿನ 10 ದಿನಗಳವರೆಗೂ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಇದರೊಂದಿಗೆ ಎ. 6ರಿಂದ ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ, ಚಿಕ್ಕಮಗಳೂರು, ಶಿವಮೊಗ್ಗ ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮುಂದಿನ 10 ದಿನಗಳ ಒಳಗಾಗಿ ಎರಡು, ಮೂರು ಮಳೆಯಾಗುವ ಲಕ್ಷಣಗಳಿವೆ. 

07.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

07.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಸಂ...