Advertise

05 April 2023

06.04.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

06.04.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ ಹೆಚ್ಚಿನ ಭಾಗಗಳಲ್ಲಿ ಸಂಜೆ ಮೋಡದ ವಾತಾವರಣ ಇರಲಿದ್ದು, ಸುಳ್ಯ, ಸುಬ್ರಹ್ಮಣ್ಯ ಸುತ್ತಮುತ್ತ ಭಾಗಗಳಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 

ಕೊಡಗು, ಮೈಸೂರು, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಪಾವಗಡ, ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಹಗುರವಾಗಿ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದೆ. 

ಈಗನ ಮುನ್ಸೂಚನೆಯಂತೆ ಕೊಡಗಿನಲ್ಲಿ ಇವತ್ತಿನಿಂದ ಮಳೆ ಪ್ರಾರಂಭವಾಗುವ ಲಕ್ಷಣಗಳಿದ್ದು ಮುಂದಿನ 10 ದಿನಗಳವರೆಗೂ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಇದರೊಂದಿಗೆ ಎ. 6ರಿಂದ ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ, ಚಿಕ್ಕಮಗಳೂರು, ಶಿವಮೊಗ್ಗ ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮುಂದಿನ 10 ದಿನಗಳ ಒಳಗಾಗಿ ಎರಡು, ಮೂರು ಮಳೆಯಾಗುವ ಲಕ್ಷಣಗಳಿವೆ. 

No comments:

Post a Comment

20.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

20.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರ್ನಾಟಕ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ...