Advertise

06 April 2023

07.04.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

07.04.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಹಾಗೂ ಉಡುಪಿ ಜಿಲ್ಲಾ ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ, ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳಲ್ಲಿ ಗುಡುಗಿನೊಂದಿಗೆ ಉತ್ತಮ ಮಳೆಯ ಮುನ್ಸೂಚನೆ ಇದೆ. (ಇಲ್ಲಿ ಗಾಳಿ ಮಹತ್ವದ ಪಾತ್ರ ವಹಿಸಲಿದೆ) ಉಳಿದ ದ. ಕ. ಅಲ್ಲಲ್ಲಿ ಸಾಮಾನ್ಯ ಮಳೆ ಮುನ್ಸೂಚನೆ ಇದೆ. 

ಕೊಡಗು ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಉತ್ತಮ, ಮೈಸೂರು, ಚಾಮರಾಜನಗರ, ಹಾಸನ, ಶಿವಮೊಗ್ಗ, ಹಾವೇರಿ, ಧಾರವಾಡ, ಬಾಗಲಕೋಟೆ, ದಾವಣಗೆರೆ, ಬಳ್ಳಾರಿ, ರಾಯಚೂರು, ಕೊಪ್ಪಳ, ಯಾದಗಿರಿ, ವಿಜಾಪುರ, ಕಲಬುರ್ಗಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 

ಚಿತ್ರದುರ್ಗ ಮೋಡದೊಂದಿಗೆ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 
ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. 



No comments:

Post a Comment

19.09.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

19.09.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು ಸೇರಿದಂತೆ ರಾಜ...