Advertise

07 April 2023

08.04.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

08.04.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 

ಕೊಡಗು, ಹಾಸನ (ಸಕ್ಲೇಶ್ಪುರ ಭಾಗಗಳಲ್ಲಿ), ಚಿಕ್ಕಮಗಳೂರು, ಶಿವಮೊಗ್ಗ, ಹಾವೇರಿ, ಧಾರವಾಡ, ಬೆಳಗಾವಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. 
( ಗೋವಾ, ಬೆಳಗಾವಿ, ಉತ್ತರ ಕನ್ನಡ ಉತ್ತಮ ಮಳೆಯ ಮುನ್ಸೂಚನೆ ಇದೆ) 

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಹಗುರವಾಗಿ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದೆ. 

ಈಗನ ಮುನ್ಸೂಚನೆಯಂತೆ ಮುಂದಿನ 10 ದಿನಗಳವರೆಗೂ ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. 

ಘಟ್ಟ ಪ್ರದೇಶಗಳಲ್ಲಿ ಉತ್ಪತ್ತಿಯಾದ ಮೋಡಗಳು ಪೂರ್ವಕ್ಕೆ ಚಲಿಸಿದ ಕಾರಣ ನಿನ್ನೆ ಕರಾವಳಿ ಭಾಗಗಳಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗಿಲ್ಲ. ರಾತ್ರಿ ಹಾಗೂ ಮುಂಜಾನೆ ಅರಬ್ಬಿ ಸಮುದ್ರ ಕಡೆಯಿಂದ ಬಂದ ಮೋಡಗಳಿಂದ ಕರಾವಳಿಯ ಕೆಲವು ಭಾಗಗಳಲ್ಲಿ ಅಬ್ಬರವಿಲ್ಲದೆ ಮಳೆಯಾಗಿದೆ. 
ಇವತ್ತು ಸ್ಥಳೀಯ ಮೋಡಗಳೂ ಸೇರಿಕೊಂಡರೆ ಗುಡುಗು ಸಹಿತ ಮಳೆಯ ಸಾಧ್ಯತೆ ಇದೆ. 


No comments:

Post a Comment

20.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

20.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರ್ನಾಟಕ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ...