Advertise

10 April 2023

11.04.2023ಲ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

11.04.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಅಲ್ಲಲ್ಲಿ ಮೋಡ ಅಥವಾ ತುಂತುರು, ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ, ಕಾರ್ಕಳ ಸುತ್ತಮುತ್ತ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. 

ಕೊಡಗು ಹಾಗೂ ಮೂಡಿಗೆರೆ, ಕುದುರೆಮುಖ, ಆಗುಂಬೆ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. 

ಶಿೃಂಗೇರಿ, ತೀರ್ಥಹಳ್ಳಿ, ಹೊಸನಗರ ಸುತ್ತಮುತ್ತ ಸಹ ಮಳೆಯ ಮುನ್ಸೂಚನೆ ಇದೆ. 

ಹಾವೇರಿ ಜಿಲ್ಲೆಯ ಒಂದೆರಡು ಭಾಗಗಳಲ್ಲಿ ಹಾಗೂ ಹುಬ್ಬಳ್ಳಿ ಸುತ್ತಮುತ್ತ ತುಂತುರು ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲಿನ ವಾತಾವರಣ ಮುಂದುವರಿಯಲಿದೆ. 

ಆದರೂ ಕರಾವಳಿ ಜಿಲ್ಲೆಗಳಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗುತ್ತಿಲ್ಲ. ಈಗಿನ ಮುನ್ಸೂಚನೆಯಂತೆ ಸೌರಮಾನ ಯುಗಾದಿ (ವಿಷು) ಅಂದರೆ ಎಪ್ರಿಲ್ 15ರ ನಂತರದ ದಿನಗಳಲ್ಲಿ ಉತ್ತಮ ಮಳೆಯ ನಿರೀಕ್ಷೆ ಇದೆ. 


No comments:

Post a Comment

19.09.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

19.09.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು ಸೇರಿದಂತೆ ರಾಜ...