Advertise

12 April 2023

13.04.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

13.04.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ರಾತ್ರಿ, ತಡ ರಾತ್ರಿ ಮೋಡ ಕವಿದ ವಾತಾವರಣ ಇರಲಿದ್ದು, ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಾದ ಸುಳ್ಯ, ಸುಬ್ರಹ್ಮಣ್ಯ, ಧರ್ಮಸ್ಥಳ, ಕಾರ್ಕಳ ಸುತ್ತಮುತ್ತ ಪ್ರದೇಶದಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ. 

ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ರಾತ್ರಿ, ತಡರಾತ್ರಿ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದೆ. ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆಯೂ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಹಗುರವಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಈಗನ ಮುನ್ಸೂಚನೆಯಂತೆ ಎಪ್ರಿಲ್ 14 ಅಥವಾ 15 ಅಂದರೆ ಸೌರಮಾನ ಯುಗಾದಿ (ವಿಷು)ಯಿಂದ ಕೊಡಗು ಹಾಗೂ ಕುದುರೆಮುಖ, ಆಗುಂಬೆ, ಶಿೃಂಗೇರಿ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಇದರ ಪ್ರಭಾವದಿಂದ ದಕ್ಷಿಣ ಕನ್ನಡ, ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಹಾಗೂ ಉತ್ತರ ಒಳನಾಡಿನ ಉತ್ತಮ ಮಳೆಯ ಸಾಧ್ಯತೆ ಇದೆ. 
ಎಪ್ರಿಲ್ 17,18ರ ನಂತರ ದಕ್ಷಿಣ ಒಳನಾಡು ಭಾಗಗಳಲ್ಲಿಯೂ ಮಳೆಯ ಮುನ್ಸೂಚನೆ ಇದೆ. 

No comments:

Post a Comment

20.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

20.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರ್ನಾಟಕ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ...