Advertise

26 April 2023

27.04.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

27.04.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕೊಡಗು, ಸಕಲೇಶಪುರ, ಮೂಡಿಗೆರೆ, ಶಿೃಂಗೇರಿ, ಕುದುರೆಮುಖ, ಚಿಕ್ಕಮಗಳೂರು, ಉತ್ತಮ ಮಳೆಯ ಮುನ್ಸೂಚನೆ ಇದೆ. 

ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳಲ್ಲಿ ಸಹ ಮಳೆಯ ಮುನ್ಸೂಚನೆ ಇದೆ. 

ಕಾಸರಗೋಡು ಮೋಡದೊಂದಿಗೆ ಒಂದೆರಡು ಕಡೆ ( ಮುಳ್ಳೇರಿಯ, ಈಶ್ವರಮಂಗಲ ಸುತ್ತಮುತ್ತ) ತುಂತುರು  ಮಳೆಯ ಸಾಧ್ಯತೆಯೂ ಇದೆ. ದಕ್ಷಿಣ ಹಾಗೂ ಉಡುಪಿ ಹೆಚ್ಚಿನ ಭಾಗಗಳಲ್ಲಿ ಮೋಡದ ವಾತಾವರಣ ಇರಲಿದ್ದು ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ದಕ್ಷಿಣ ಕನ್ನಡ ಭಾಗಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಗಾಳಿ ಮಹತ್ವದ ಪಾತ್ರ ವಹಿಸಲಿದೆ. ಉತ್ತರ ಕನ್ನಡ ಅಲ್ಲಲ್ಲಿ ಮೋಡ ಮಾತ್ರ ಇರಬಹುದು. 

ಮೈಸೂರು, ಮಂಡ್ಯ, ಚಾಮರಾಜನಗರ, ಹಾಸನ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಉಳಿದ ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಬಳ್ಳಾರಿ, ರಾಯಚೂರು, ಕೊಪ್ಪಳ, ವಿಜಯಪುರ ಜಿಲ್ಲೆಗಳ ಅಲ್ಲಲ್ಲಿ ತುಂತುರು ಹಾಗೂ ಕೆಲವು ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಇವತ್ತಿನಿಂದ ಕೇರಳ ಅರಬ್ಬಿ ಸಮುದ್ರ ಕಡೆಯಿಂದಲೂ ಮೋಡಗಳು ಕಾಣಿಸಿಕೊಳ್ಳಲಿದ್ದು ದಕ್ಷಿಣ ಹಾಗೂ ಮಧ್ಯ ಕೇರಳ ಕರಾವಳಿಯ ಹಲವೆಡೆ ಮಳೆಯ ಮುನ್ಸೂಚನೆ ಇದೆ. 
ಇನ್ನೆರಡು ದಿನಗಳಲ್ಲಿ ಕಾಸರಗೋಡು ಹಾಗೂ ದಕ್ಷಿಣದ ಕರಾವಳಿಯಲ್ಲೂ ಮಳೆಯ ಸಾಧ್ಯತೆ ಇದೆ. 



No comments:

Post a Comment

20.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

20.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರ್ನಾಟಕ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ...