Advertise

28 April 2023

29.04.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

29.04.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಕರಾವಳಿ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದರೆ ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಸ್ವಲ್ಪ ಜಾಸ್ತಿ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಹೆಚ್ಚಿನ ಭಾಗಗಳಲ್ಲಿ ಮೋಡದ ವಾತಾವರಣದೊಂದಿಗೆ ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆಯೂ ಇದೆ. 

ಗಾಳಿ ಮಹತ್ವದ ಪಾತ್ರ ವಹಿಸಲಿದೆ 

ಕೊಡಗು, ಸೋಮವಾರಪೇಟೆ, ಸಕಲೇಶಪುರ, ಮೂಡಿಗೆರೆ, ಕಳಸ, ಶಿೃಂಗೇರಿ, ಕುದುರೆಮುಖ, ಆಗುಂಬೆ, ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಕೊಪ್ಪ, ತೀರ್ಥಹಳ್ಳಿ, ಹೊಸನಗರ, ಸಾಗರ ಸುತ್ತಮುತ್ತ ಭಾಗಗಳಲ್ಲಿ ಸಹ ಮಳೆಯ ಮುನ್ಸೂಚನೆ ಇದೆ. 

ಯಾದಗಿರಿ, ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. 

ಇವತ್ತು ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 

ಅರಬ್ಬಿ ಸಮುದ್ರದಲ್ಲಿ ಕನ್ಯಾಕುಮಾರಿ ಬಳಿ ಸಣ್ಣ ಪ್ರಮಾಣದ ವಾಯುಭಾರ ಕುಸಿತದಂತಹ ತಿರುವಿಕೆಯಿಂದ ಅರಬ್ಬಿ ಸಮುದ್ರದಲ್ಲಿ ಮೋಡಗಳು ಉಂಟಾಗಿದ್ದು, ಆ ಮೋಡಗಳು ಈಶಾನ್ಯಕ್ಕೆ (ಉತ್ತರ - ಪೂರ್ವ) ಚಲಿಸುವ ಸಾಧ್ಯತೆ ಹೆಚ್ಚಿದೆ. ಇದರಿಂದ ಕರ್ನಾಟಕದ ಕರಾವಳಿ ಭಾಗಗಳಲ್ಲಿ ಮಳೆಯ ಸಾಧ್ಯತೆ ಇದೆ. 
ಎಪ್ರಿಲ್ 30 ರಿಂದ ಮೇ 1ನೇ ತಾರೀಕಿನವರೆಗೆ ದಕ್ಷಿಣ ಒಳನಾಡು ಭಾಗಗಳಲ್ಲಿ ಉತ್ತಮ ಮಳೆಯ ನಿರೀಕ್ಷೆ ಇದೆ. 


No comments:

Post a Comment

20.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

20.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರ್ನಾಟಕ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ...