Advertise

31 May 2023

01.06.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

01.06.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಅಲ್ಲಲ್ಲಿ, ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಗಾಳಿಯ ಪಾತ್ರ ಮಹತ್ವದ್ದು, ಎಚ್ಚರವಿರಲಿ. ದ. ಕ. ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ. 

ಕೊಡಗು, ಸೋಮವಾರಪೇಟೆ, ಸಕಲೇಶಪುರ, ಮೂಡಿಗೆರೆ, ಶಿೃಂಗೇರಿ, ಕೊಪ್ಪ, ಕುದುರೆಮುಖ, ಆಗುಂಬೆ, ತೀರ್ಥಹಳ್ಳಿ, ಹೊಸನಗರ, ಸಾಗರ ಸುತ್ತಮುತ್ತ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. 

ಚಿಕ್ಕಮಗಳೂರು, ಶಿವಮೊಗ್ಗ, ಮೈಸೂರು, ಹಾಸನ, ಚಾಮರಾಜನಗರ ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 

ಗಾಳಿಯ ಬಗ್ಗೆ ಎಚ್ಚರವಿರಲಿ 

ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಹಾವೇರಿ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಸಾಧ್ಯತೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಹಗುರವಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಮುಂಗಾರು ಸ್ಥಿತಿ : ಜೂನ್ 5ರ ಅಂದಾಜು ಅರಬ್ಬಿ ಸಮುದ್ರದಲ್ಲಿ ಸಣ್ಣ ಪ್ರಮಾಣದ ವಾಯುಭಾರ ಕುಸಿತ ( ಈಗ 40% ಮಾತ್ರ ಸಾಧ್ಯತೆ) ಉಂಟಾಗುವ ಲಕ್ಷಣಗಳಿದ್ದು,
ಆ ನಂತರ ಅರಬ್ಬಿ ಸಮುದ್ರದಲ್ಲಿ ಮುಂಗಾರಿಗೆ ಪೂರಕವಾದ ಗಾಳಿಯ ಚಟುವಟಿಕೆಗಳು ಸಮರ್ಪಕವಾಗಿ, ಮುಂಗಾರು ಸ್ವಲ್ಪ ಚುರುಕಾಗುವ ಸಾಧ್ಯತೆ ಇದೆ. 

30 May 2023

31.05.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

31.05.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಹೆಚ್ಚಿನ ಭಾಗಗಳಲ್ಲಿ ಮೋಡದ ವಾತಾವರಣ ಇರಲಿದ್ದು ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಕನ್ನಡದ ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಾದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಮಳೆಯ ಮುನ್ಸೂಚನೆ ಇದೆ. ಉಡುಪಿ ಕರಾವಳಿಯ ಅಲ್ಲಲ್ಲಿ ಈಗಾಗಲೇ ಮಳೆಯಾಗುತ್ತಿದ್ದು, ಉತ್ತರ ಕನ್ನಡ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 

ಕೊಡಗು, ಹಾಸನ, ಮೈಸೂರು, ಚಿಕ್ಕಮಗಳೂರು ಹಾಗೂ ಶಿವಮೊಗ್ಗ, ಕೋಲಾರ, ಬೆಂಗಳೂರು ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. 

ಚಾಮರಾಜನಗರ ಒಂದೆರಡು ಕಡೆ, ಮಂಡ್ಯ, ರಾಮನಗರ,  ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಹಾವೇರಿ ಜಿಲ್ಲೆಗಳ ಹೆಚ್ಚಿನ ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇಲ್ಲದಿದ್ದರೂ ತಾಪಮಾನ ಏರಿಕೆಯಿಂದ ಅನಿರೀಕ್ಷಿತ ಮಳೆಯ ಸಾಧ್ಯತೆಯೂ ಇದೆ. ಗಾಳಿಯ ಬಗ್ಗೆ ಎಚ್ಚರವಿರಲಿ. 

 ಮುಂಗಾರು ಸ್ಥಿತಿ : ಅರಬ್ಬಿ ಸಮುದ್ರದಲ್ಲಿ ಇದ್ದಕ್ಕಿದ್ದಂತೆ ಮುಂಗಾರಿಗೆ ಪೂರಕವಾದ ಗಾಳಿಯ ಚಟುವಟಿಕೆಗಳು ಸಮರ್ಪಕವಾಗಿ ಇಲ್ಲದಿರುವುದು ಈಗಿನ ಪೂರ್ವದ ಮಳೆಗೆ ಅನುಕೂಲವಾಗಿದೆ. 
ಇದರಿಂದ ಮುಂಗಾರು ತಡವಾಗುವ ಆತಂಕವಿದೆ. ಈಗಿನ ಪ್ರಕಾರ ಜೂನ್ 5ರ ಅಂದಾಜು ಅರಬ್ಬಿ ಸಮುದ್ರದಲ್ಲಿ ಸಣ್ಣ ಪ್ರಮಾಣದ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿವೆ. 
ಈ ವಾಯುಭಾರ ಕುಸಿತವು ಶಿಥಿಲಗೊಳ್ಳುತ್ತಿದ್ದಂತೆ ಮುಂಗಾರು ಚುರುಕಾಗುವ ಸಾಧ್ಯತೆ ಇದೆ. 

29 May 2023

30.05.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

30.05.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ:

ಕಾಸರಗೋಡು ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಕನ್ನಡದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 
ಈಗನ ಮಳೆಯು ಮುಂಗಾರು ರೀತಿಯಲ್ಲಿದ್ದರೂ ತಾಪಮಾನ ಏರಿಕೆಯಿಂದ ಸಿಡಿಲು ಹಾಗೂ ಗಾಳಿಯ ಸಹಿತ ಮಳೆಯ ನಿರೀಕ್ಷೆ ಇದೆ. 

ಕೊಡಗು, ಸೋಮವಾರಪೇಟೆ, ಸಕಲೇಶಪುರ, ಮೂಡಿಗೆರೆ, ಶಿೃಂಗೇರಿ, ಕೊಪ್ಪ, ಕುದುರೆಮುಖ, ಆಗುಂಬೆ ಸುತ್ತಮುತ್ತ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದ್ದರೆ, ಹಾಸನ, ಉಳಿದ ಚಿಕ್ಕಮಗಳೂರು ಹಾಗೂ ಶಿವಮೊಗ್ಗ, ಬೆಂಗಳೂರು, ತುಮಕೂರು, ಚಾಮರಾಜನಗರದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 

ಮೈಸೂರು, ಮಂಡ್ಯ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಪಾವಗಡ, ಚಿತ್ರದುರ್ಗ, ದಾವಣಗೆರೆ, ಹಾವೇರಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡದ ವಾತಾವರಣ ಇರಲಿದ್ದು ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಗಾಳಿಯು ಪ್ರಮುಖ ಪಾತ್ರ ವಹಿಸಲಿದೆ. ಗಾಳಿಯ ಬಗ್ಗೆ ಎಚ್ಚರವಿರಲಿ 

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಸಂಜೆ ಅಲ್ಲಲ್ಲಿ ಹಗುರವಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಉಷ್ಣಾಂಶ ಏರಿಕೆಯಿಂದಾಗಿ ರಾಜ್ಯದ ಒಂದೆರಡು ಕಡೆ ಅನಿರೀಕ್ಷಿತ ಗಾಳಿಯ ಸಹಿತ ಮಳೆಯ ಸಾಧ್ಯತೆಯೂ ಇದೆ. 

ಮುಂಗಾರು ಸ್ಥಿತಿ : ಈಗಿನ ಮುನ್ಸೂಚನೆಯಂತೆ 
ಮುಂಗಾರು ಜೂನ್ 6 ಅಥವಾ 7ರಂದು ಕೇರಳ ಕರಾವಳಿ ಪ್ರವೇಶಿಸುವ ಲಕ್ಷಣಗಳಿವೆ. 
ಆರಂಭಕ ಮುಂಗಾರು ದುರ್ಬಲವಾಗಿರುವ ದುರ್ಬಲವಾಗಿರಲಿದೆ. 

28 May 2023

29.05.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

29.05.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ನಡುವೆ ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಾದ ಳ್ಯ, ಸುಬ್ರಹ್ಮಣ್ಯ, ಧರ್ಮಸ್ಥಳ ಸುತ್ತಮುತ್ತ ಭಾಗಗಳಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 

ಕೊಡಗು ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದರೆ, ಚಿಕ್ಕಮಗಳೂರು ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ. 
ಮೈಸೂರು ಹಾಗೂ ಚಾಮರಾಜನಗರ ಭಾಗಗಳಲ್ಲಿ ಸಹ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಹೆಚ್ಚಿನ ಅವಧಿಯೂ ಬಿಸಿಲಿನ ವಾತಾವರಣದ ಇರಲಿದ್ದು ಸಂಜೆ, ರಾತ್ರಿ ಅಲ್ಲಲ್ಲಿ ಹಗುರವಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಮುಂಗಾರು ಸ್ಥಿತಿ : ಮುಂಗಾರು ನಿನ್ನೆಯ ಯಥಾಸ್ಥಿತಿಯನ್ನು ಕಾಪಾಡಿಕೊಂಡಿದೆ. ಮುಂದುವರಿಕೆ ನಿಧಾನವಾಗುತ್ತಿದೆ. 
IMDಯು ಜೂನ್ ತಿಂಗಳಲ್ಲಿ ಮುಂಗಾರು ದುರ್ಬಲವಾಗಿರುವ ಮುನ್ಸೂಚನೆ ನೀಡಿದೆ


27 May 2023

28.05.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

28.05.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ. 
ದಕ್ಷಿಣ ಕನ್ನಡದ ಸುಳ್ಯ ಹಾಗೂ ಸುಬ್ರಹ್ಮಣ್ಯ ಸುತ್ತಮುತ್ತ ಭಾಗಗಳ ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆಯೂ ಇದೆ. 

ಕೊಡಗು, ಚಿಕ್ಕಮಗಳೂರು ಹಾಗೂ ಚಾಮರಾಜನಗರ ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 

ಶಿವಮೊಗ್ಗ, ಹಾಸನ, ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಇರಲಿದ್ದು ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 
ಉಷ್ಣಾಂಶ ಏರಿಕೆಯಿಂದಾಗಿ ಒಂದೆರಡು ಕಡೆ ಗುಡುಗು ಸಹಿತ ಗಾಳಿಯೊಂದಿಗೆ ಸಾಮಾನ್ಯ ಮಳೆಯ ಸಾಧ್ಯತೆಯೂ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಹಗುರವಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಮುಂಗಾರು ಸ್ಥಿತಿ : ದಕ್ಷಿಣ ಕೇರಳದ ಹೆಚ್ಚಿನ ಭಾಗಗಳಲ್ಲಿ ಮುಂಗಾರು ರೀತಿಯ ಮಳೆ ಈಗಾಗಲೇ ಆರಂಭವಾಗಿದ್ದು. ಜೂನ್ 3 ಅಥವಾ 4 ರಂದು ಮುಂಗಾರು ಅಧಿಕೃತವಾಗಿ ಪ್ರಕಟಿಸುವ ಸಾಧ್ಯತೆಯನ್ನು IMD ವರದಿ ಮಾಡಿದೆ. ಅಲ್ಲಿಂದ 2 ದಿನಗಳಲ್ಲಿ ರಾಜ್ಯದ ಕರಾವಳಿ ಭಾಗಗಳಿಗೂ ಮುಂಗಾರು ಅಧಿಕೃತವಾಗಿ ಪ್ರಕಟಿಸುವ ಮುನ್ಸೂಚನೆ ಇದೆ. 
ನಕ್ಷೆಯಲ್ಲಿ ತೋರಿಸಿದಂತೆ ಕೆಂಪು ಗುರುತಿನವರೆಗೆ ಮುಂಗಾರು ಈಗಾಗಲೇ ತಲುಪಿದ್ದು ಹಸಿರು ಗುರುತು ಇನ್ನಷ್ಟೇ ಮುಂದುವರಿಯಬೇಕಿದೆ. 
ಆರಂಭಕ ಮುಂಗಾರು ದುರ್ಬಲವಾಗಿರುವ ಸಾಧ್ಯತೆ ಹೆಚ್ಚಿದೆ (IMD ತನ್ನ ವರದಿಯಲ್ಲಿಯೂ ಉಲ್ಲೇಖಿಸಿದೆ).

26 May 2023

27.05.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

27.05.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

 ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ ಸುತ್ತಮುತ್ತ ಮಳೆಯ ಮುನ್ಸೂಚನೆ ಇದೆ. 
ಕಾಸರಗೋಡು ಹಾಗೂ ದಕ್ಷಿಣ ಕನ್ನಡದ ಅಲ್ಲಲ್ಲಿ ಅನಿರೀಕ್ಷಿತ ಮುಂಗಾರು ರೀತಿಯ ಸಾಮಾನ್ಯ ಮಳೆಯ ಸಾಧ್ಯತೆ ಇದೆ. 

ಕೊಡಗು, ಮೈಸೂರು, ಚಾಮರಾಜನಗರ ಭಾಗಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 

 ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ, ಚಿಕ್ಕಮಗಳೂರು, ತುಮಕೂರು ಬೆಂಗಳೂರು, ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಯ ಅಲ್ಲಲ್ಲಿ ಅನಿರೀಕ್ಷಿತ ಮಳೆಯ ಸಾಧ್ಯತೆಯೂ ಇದೆ. (ಮಳೆಯ ಮುನ್ಸೂಚನೆ ಇಲ) 

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಹಗುರವಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 
ಮುಂಗಾರು ಸ್ಥಿತಿ : ಕೆಂಪು ಗುರುತಿನವರೆಗೆ ಮುಂಗಾರು ಮುಂದುವರಿದಿದ್ದು. ಮುಂದಕ್ಕೆ ಚಲಿಸಲು ಅನುಕೂಲಕರ ವಾತಾವರಣ ನಿರ್ಮಾಣವಾಗಿದ್ದು, ಮೇ 30 ಅಥವಾ 31ರಂದು ಕೇರಳಕ್ಕೆ ಪ್ರವೇಶಿಸುವ ಸಾಧ್ಯತೆ ಇದೆ. 
ಜೂನ್ 2 ಅಥವಾ 3ರಂದು ಕರ್ನಾಟಕಕ್ಕೆ ತಲುಪುವ ಸಾಧ್ಯತೆ ಇದೆ. 
ಆರಂಭಿಕ ಮುಂಗಾರು ದುರ್ಬಲವಾಗಿರುವ ಸಾಧ್ಯತೆ ಹೆಚ್ಚಿದೆ 


25 May 2023

26.05.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

26.05.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದ್ದರೆ, ದಕ್ಷಿಣ ಕನ್ನಡ ಹೆಚ್ಚಿನ ಭಾಗಗಳಲ್ಲಿ ಮೋಡದ ವಾತಾವರಣದೊಂದಿಗೆ ಸುಳ್ಯ, ಸುಬ್ರಹ್ಮಣ್ಯ, ಧರ್ಮಸ್ಥಳ ಸುತ್ತಮುತ್ತ ಸಾಮಾನ್ಯ ಮಳೆಯ ಸಾಧ್ಯತೆ ಇದೆ. (ಮುನ್ಸೂಚನೆ ಪ್ರಕಾರ ತುಂತುರು ಮಳೆ) 
ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 
ಮುಂಗಾರು ರೀತಿಯ ಮೋಡದ ಚಲನೆ ಪ್ರಾರಂಭವಾಗುರುವುದರಿಂದ ಕರಾವಳಿಗೆ ಇನ್ನು ಪೂರ್ವ ಮುಂಗಾರು ಮಳೆ ಮುಗಿದಂತೆಯೆ. ಜೂನ್ ಮೊದಲ ವಾರದಲ್ಲಿ ಮುಂಗಾರು ಪ್ರವೇಶಿಸುವ ಲಕ್ಷಣಗಳಿವೆ. ಆದರೂ ಇವತ್ತಿನಿಂದ ಕಾಸರಗೋಡು, ದಕ್ಷಿಣ ಕನ್ನಡದ ಅಲ್ಲಲ್ಲಿ ಹಾಗೂ ಉಡುಪಿ ಜಿಲ್ಲೆಗಳ ಒಂದೆರಡು ಕಡೆ ಅನಿರೀಕ್ಷಿತವಾಗಿ ಮುಂಗಾರು ರೀತಿಯ ಮಳೆಯ ಸಾಧ್ಯತೆ ಇದೆ. 
ಆರಂಭಕ ಮುಂಗಾರು ದುರ್ಬಲವಾಗಿರುವ ಸಾಧ್ಯತೆ ಹೆಚ್ಚಿದೆ 

ಕೊಡಗು, ಚಿಕ್ಕಮಗಳೂರು, ಹಾಸನ, ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚನೆ ಇದೆ. (ತಾಪಮಾನ ಏರಿಕೆಯಿಂದ ಮುನ್ಸೂಚನೆಗೆ ಸಿಗದೆ ಅಲ್ಲಲ್ಲಿ ಅನಿರೀಕ್ಷಿತ ಮಳೆಯ ಸಾಧ್ಯತೆಯೂ ಇದೆ.) 
ಮುಂಗಾರು : ಮುಂಗಾರು ಈಗಾಗಲೇ ಕೆಂಪು ಗುರುತಿನವರೆಗೆ ಮುಂದುವರಿದಿದೆ. 
ಹಸಿರು ಗುರುತು ಇನ್ನಷ್ಟೇ ಮುಂದುವರಿಯಬೇಕಿದೆ. 

24 May 2023

25.05.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

25.05.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ಹೆಚ್ಚಿನ ಭಾಗಗಳಲ್ಲಿ, ದಕ್ಷಿಣ ಕನ್ನಡದ, ಸುಳ್ಯ, ಪುತ್ತೂರು, ವಿಟ್ಲ, ಬಂಟ್ವಾಳ, ಮಂಗಳೂರು, ಬೆಳ್ತಂಗಡಿ, ಧರ್ಮಸ್ಥಳ, ಕಾರ್ಕಳ ಸುತ್ತಮುತ್ತ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಉಡುಪಿ ಒಂದೆರಡು ಕಡೆ ಮಳೆಯ ಮುನ್ಸೂಚನೆ ಇದ್ದರೆ, ಉತ್ತರ ಕನ್ನಡ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಕೊಡಗು, ಸೋಮವಾರಪೇಟೆ, ಸಕಲೇಶಪುರ, ಮೂಡಿಗೆರೆ, ಶಿೃಂಗೇರಿ, ಕೊಪ್ಪ, ಕುದುರೆಮುಖ, ಆಗುಂಬೆ ಸುತ್ತಮುತ್ತ ಭಾಗಗಳಲ್ಲಿ, ಚಿಕ್ಕಮಗಳೂರು, ಹಾಸನ ಹೆಚ್ಚಿನ ಭಾಗಗಳಲ್ಲಿ ತುಮಕೂರು, ಚಿತ್ರದುರ್ಗ ಹಾಗೂ ಮೈಸೂರು ಒಂದೆರಡು ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. 
ಬೆಂಗಳೂರು ಸಹ ಮಳೆಯ ಮುನ್ಸೂಚನೆ ಇದೆ. 

ಗಾಳಿಯ ಪಾತ್ರ ಪ್ರಮುಖವಾಗಿದೆ. ಗಾಳಿಯ ಬಗ್ಗೆ ಎಚ್ಚರವಿರಲಿ 

ಉಳಿದ ಕರ್ನಾಟಕದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು. 

ಮುಂಗಾರು ಸ್ಥಿತಿ : ಇವತ್ತು, ನಾಳೆಯಲ್ಲಿ ಹಿಂದೂಮಹಾಸಾಗರದ ವಾಯುಭಾರ ಕುಸಿತವು ಶಿಥಿಲಗೊಳ್ಳಲಿದ್ದು ಅಂಡಮಾನಿಂದ ಮುಂಗಾರು ಮುಂದುವರಿಯಲು ವೇದಿಕೆ ಸಜ್ಜಾಗಲಿದೆ. 
ಜೂನ್ 1ರಿಂದ ಕೇರಳ ಕರಾವಳಿಯಾದ್ಯಂತ ಮುಂಗಾರು ಮಳೆಯ ಮುನ್ಸೂಚನೆ ಇದೆ. 

23 May 2023

24.05.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

24.05.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಹೆಚ್ಚಿನ ಭಾಗಗಳಲ್ಲಿ, ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳಲ್ಲಿ, ಉಡುಪಿ, ಹಾಗೂ ಉತ್ತರ ಕನ್ನಡ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

ಕೊಡಗು ಉತ್ತಮ, ಸೋಮವಾರಪೇಟೆ, ಸಕಲೇಶಪುರ, ಮೂಡಿಗೆರೆ, ಶಿೃಂಗೇರಿ, ಕೊಪ್ಪ, ಕುದುರೆಮುಖ, ಆಗುಂಬೆ ಸುತ್ತಮುತ್ತ ಭಾಗಗಳಲ್ಲಿ ಸಹ ಮಳೆಯ ಮುನ್ಸೂಚನೆ ಇದೆ.
ಗಾಳಿಯ ಪ್ರಭಲವಾಗಿದ್ದರೆ ಕರಾವಳಿಯ ಹಲವೆಡೆ ಮಳೆಯ ಸಾಧ್ಯತೆ ಇದೆ 

ಉಳಿದ ಚಿಕ್ಕಮಗಳೂರು, ಶಿವಮೊಗ್ಗ, ಧಾರವಾಡ, ಬೆಳಗಾವಿ, ದಾವಣಗೆರೆ, ಬಾಗಲಕೋಟೆ, ಚಿತ್ರದುರ್ಗ, ಪಾವಗಡ, ಬಳ್ಳಾರಿ, ತುಮಕೂರು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

ಇವತ್ತು ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಧ್ಯಾಹ್ನ ಮೇಲೆ, ಸಂಜೆ ಮೋಡ ಕವಿದ ವಾತಾವರಣ ಇರಲಿದ್ದು ಗಾಳಿಯ ಪ್ರಭಾವದಿಂದ ಕೆಲವು ಭಾಗಗಳಲ್ಲಿ ಅನಿರೀಕ್ಷಿತ ಮಳೆಯ ಸಾಧ್ಯತೆಯೂ ಇದೆ.

ಮುಂಗಾರು ಸ್ಥಿತಿ : ಹಿಂದೂಮಹಾಸಾಗರದಲ್ಲಿಯ ವಾಯುಭಾರ ಕುಸಿತವು ಕ್ಷೀಣಿಸುತ್ತಿದ್ದ ಹಾಗೆ ಮುಂಗಾರು ಸ್ವಲ್ಪ ಬಲಗೊಳ್ಳುವ ಲಕ್ಷಣಗಳಿವೆ. 
ಜೂನ್ 1ರಂದು ಕೇರಳಕ್ಕೆ ಆಗಮಿಸರುವ
ಮುಂಗಾರು ರಾಜ್ಯಕ್ಕೆ ಪ್ರವೇಶಿಸುವ ತನಕ ಈಗಿನ ಗುಡುಗು ಸಿಡಿಲು ಸಹಿತ ಮಳೆ ಮುಂದುವರಿಯಲಿದೆ. 

22 May 2023

23.05.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

23.05.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಮೋಡದ ವಾತಾವರಣ, ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ, ಮೂಡಬಿದರೆ, ಪಡುಬಿದ್ರಿ ಸುತ್ತಮುತ್ತ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಉಡುಪಿಯ ಕಾರ್ಕಳ, ಉಡುಪಿ ಸುತ್ತಮುತ್ತ ಭಾಗಗಳಲ್ಲಿಯೂ ಮಳೆಯ ಮುನ್ಸೂಚನೆ ಇದೆ. ಗಾಳಿಯ ಪಾತ್ರ ಮಹತ್ವದ್ದು. ಗಾಳಿಯ ವೇಗ ಹೆಚ್ಚಿದ್ದರೆ ದ. ಕ. ಉಡುಪಿ ಹೆಚ್ಚಿನ ಭಾಗಗಳಲ್ಲಿ ಮಳೆಯ ಸಾಧ್ಯತೆ ಇದೆ. 

ಕೊಡಗು, ಸೋಮವಾರಪೇಟೆ, ಸಕಲೇಶಪುರ, ಮೂಡಿಗೆರೆ, ಶಿೃಂಗೇರಿ, ಕೊಪ್ಪ, ಕುದುರೆಮುಖ, ಆಗುಂಬೆ, ಹೊಸನಗರ, ಸಾಗರ (ಶರಾವತಿ ನದಿ ಪಾತ್ರದ ಸುತ್ತಮುತ್ತ) ಮಳೆಯ ಮುನ್ಸೂಚನೆ ಇದೆ. 

ಮೈಸೂರು ಒಂದೆರಡು ಕಡೆ, ಚಾಮರಾಜನಗರದ ಬಿಳಿಗಿರಿ ರಂಗನ ಬೆಟ್ಟದ ಸುತ್ತಮುತ್ತ ಮಳೆಯ ಮುನ್ಸೂಚನೆ ಇದೆ. 

ಚಿಕ್ಕಮಗಳೂರು, ಶಿವಮೊಗ್ಗ, ಧಾರವಾಡ, ಹಾವೇರಿ, ಬಾಗಲಕೋಟೆ, ವಿಜಾಪುರ, ಗದಗ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಹಗುರವಾಗಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಹಗಲಿನ ಉಷ್ಣಾಂಶ ಏರಿಕೆಯಿಂದಾಗಿ ಈಗನ ಈ ಮುಂಗಾರು ಪೂರ್ವ ಮಳೆಯು ಭಾರಿ ಗಾಳಿಯು ಒಳಗೊಂಡಿರುವುದರಿಂದ ಮಳೆಯ ವ್ಯಾಪ್ತಿಯಲ್ಲಿ ಬದಲಾಗುತ್ತಿದೆ. 

ಗಾಳಿಯ ಬಗ್ಗೆ ಎಚ್ಚರವಿರಲಿ 

ಮುಂಗಾರು ಸ್ಥಿತಿ : ಮುಂಗಾರು ದುರ್ಬಲತೆ ಮುಂದುವರಿಯಲಿದೆ. ಮುಂಗಾರು ತಾರ್ತಿಕವಾಗಿ ಆರಂಭಗೊಂಡಿದ್ದರೂ,  ಹಿಂದೂ ಮಹಾಸಾಗರದಲ್ಲಿಯ ಈಗಿನ ವಾಯುಭಾರ ಕುಸಿತವು ಮೇ 26ರ ಒಳಗಾಗಿ ಕ್ಷೀಣಿಸಲಿದ್ದು ಆಮೇಲೆ ಅಂಡಮಾನ್ ಕಡೆಯಿಂದ ಮುಂದುವರಿಯುವ ಲಕ್ಷಣಗಳಿವೆ. 

21 May 2023

22.05.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

22.05.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡಿನ ಮುಳ್ಳೇರಿಯ ಸುತ್ತಮುತ್ತ, ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ, ಕಾರ್ಕಳ ಸುತ್ತಮುತ್ತ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಗಾಳಿ ಪ್ರಮುಖ ಪಾತ್ರ ವಹಿಸಲಿದೆ

ಕೊಡಗು ಉತ್ತಮ, ಸೋಮವಾರಪೇಟೆ, ಸಕಲೇಶಪುರ, ಮೂಡಿಗೆರೆ, ಶಿೃಂಗೇರಿ, ಕೊಪ್ಪ, ಕುದುರೆಮುಖ, ಆಗುಂಬೆ ಸುತ್ತಮುತ್ತ ಭಾಗಗಳಲ್ಲಿ ಸಹ ಮಳೆಯ ಮುನ್ಸೂಚನೆ ಇದೆ. 

ಚಾಮರಾಜನಗರ, ಮೈಸೂರು ಅಲ್ಲಲ್ಲಿ, ಬೆಂಗಳೂರು  ಹಾಗೂ ತುಮಕೂರು ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. 

ಉಳಿದ ದಕ್ಷಿಣ ಒಳನಾಡು ಭಾಗಗಳ ಹೆಚ್ಚಿನ ಕಡೆ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 
ಗಾಳಿಯ ಪಾತ್ರ ಮಹತ್ವದ್ದು. 

ಮಲೆನಾಡು, ದಕ್ಷಿಣ ಒಳನಾಡು ಹಾಗೂ ದಕ್ಷಿಣ ಕರಾವಳಿ ಭಾಗಗಳಲ್ಲಿ ಅಲ್ಲಲ್ಲಿ ಮುಂಗಾರು ಪೂರ್ವ ಮಳೆಯು ಮುಂದುವರಿಯಲಿದೆ. 
 
ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಹಗುರವಾಗಿ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದೆ. 

ಮುಂಗಾರು ಸ್ಥಿತಿ : IMD ವರದಿಯಂತೆ ಅಂಡಮಾನ್ ಗೆ ಈಗಾಗಲೇ ಮುಂಗಾರು ತಲುಪಿದ್ದು ಜೂನ್ 4 ರ ಆಸುಪಾಸು ಕೇರಳಕ್ಕೆ ಪ್ರವೇಶಿಸುವ ಸಾಧ್ಯತೆ ತಿಳಿಸಿದೆ.
ಆದರೆ ಅರಬ್ಬಿ ಸಮುದ್ರದಲ್ಲಿ ಮುಂಗಾರಿಗೆ ಪೂರಕವಾದ ಗಾಳಿಯ ಚಟುವಟಿಕೆಗಳು ಇನ್ನೂ ಚುರುಕಾಗಬೇಕಾಗಿದೆ.
ಹಿಂದೂಮಹಾಸಾಗರದ ಈಗಿನ ಚಂಡಮಾರುತವು ಮುಂಗಾರು ಮುನ್ನಡೆಗೆ ಸ್ವಲ್ಪ ಮಟ್ಟಿಗೆ ತೊಡಕಾಗಿದೆ.
ಅಂತೂ ಜೂನ್ ತಿಂಗಳಲ್ಲಿ ಆರಂಭಿಕ ಮುಂಗಾರು ದುರ್ಬಲವಾಗಿರುವ ಸಾಧ್ಯತೆ ಹೆಚ್ಚಿದೆ. 

19 May 2023

20.05.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

20.05.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಅನಿರೀಕ್ಷಿತ ಮಳೆಯ ಸಾಧ್ಯತೆಯೂ ಇದೆ. ಗಾಳಿ ಮಹತ್ವದ ಪಾತ್ರ ವಹಿಸಲಿದೆ 

ಕೊಡಗು ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದ್ದರೆ, ಚಿಕ್ಕಮಗಳೂರು, ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ ( ಗುಡುಗು, ಗಾಳಿ ಸಹಿತ). 

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಹಗುರವಾಗಿ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದೆ. 

ಮುಂಗಾರು ಸ್ಥಿತಿ :  IMDಯವರ ಮಾಹಿತಿಯಂತೆ ಮುಂದಿನ ಒಂದು ಅಥವಾ ಎರಡು ದಿನಗಳಲ್ಲಿ ಮುಂಗಾರು ಅಂಡಮಾನ್ ನಿಕೋಬಾರ್ ತಲಪುವ ನಿರೀಕ್ಷೆಯಿದೆ ಎಂದು ತಿಳಿಸಿದೆ. ಇನ್ನೆರಡು ದಿನಗಳಲ್ಲಿ ಈಶಾನ್ಯ ರಾಜ್ಯಗಳಲ್ಲಿ ಮುಂಗಾರು ರೀತಿಯ ಭಾರಿ ಮಳೆಯ ಮುನ್ಸೂಚನೆ ಇದೆ. 
ಭೂ ಮಧ್ಯ ರೇಖೆಗಿಂತ ಕೆಳಗೆ ಹಿಂದೂ ಮಹಾಸಾಗರದಲ್ಲಿ ಉಂಟಾಗಿರುವ ಚಂಡಮಾರುತದ ಪರಿಣಾಮದಿಂದ ರಾಜ್ಯಕ್ಕೆ ಮುಂಗಾರು ಪ್ರವೇಶದ ಅನಿಶ್ಚಿತತೆ ಮುಂದುವರಿಯಲಿದೆ. 
ಆದರೂ ರಾಜ್ಯದಲ್ಲಿ ಮುಂಗಾರು ಪೂರ್ವ ಗುಡುಗು ಸಹಿತ ಅಲ್ಲಲ್ಲಿ ಮಳೆ ಮುಂದುವರಿಯುವ ಲಕ್ಷಣಗಳಿವೆ. 


18 May 2023

19.05.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ


19.05.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಮಳೆಯ ಸಾಧ್ಯತೆ ಕಡಿಮೆ. 

ಕೊಡಗು, ಮೈಸೂರು, ಚಾಮರಾಜನಗರ ಸೇರಿದಂತೆ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 
ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಹಗುರವಾಗಿ ಮೋಡದ ವಾತಾವರಣ ಇರಬಹುದು.
ಉಷ್ಣಾಂಶ ಏರಿಕೆಯಿಂದಾಗಿ ಒಂದೆರಡು ಕಡೆ ಅನಿರೀಕ್ಷಿತ ಮಳೆಯ ಸಾಧ್ಯತೆಯೂ ಇದೆ.

ಮುಂಗಾರು : IMD ಮಾಹಿತಿಯಂತೆ ಜೂನ್ 4 (+-4)ರಂದು ಮುಂಗಾರು ಕೇರಳಕ್ಕೆ ಪ್ರವೇಶಿಸಲಿದೆ.
ಕಳೆದ ವರ್ಷ 2022 ರ ಮೇ ಇದೇ ಸಮಯದಲ್ಲಿ ಮುಂಗಾರು ಪ್ರಭಲವಾಗಿ ದಕ್ಷಿಣ ಕೇರಳ ಭಾಗದಲ್ಲಿ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗಿ ಕೇರಳ ಹಾಗೂ ರಾಜ್ಯದ ಕರಾವಳಿಯಲ್ಲಿ ಭಾರಿ ಮಳೆಯಾಗಿತ್ತು. 
ಆದರೆ ಈ ಸಲ ಭೂಮಧ್ಯ ರೇಖೆಗಿಂತ ಕೆಳಗೆ ಹಿಂದೂ ಮಹಾಸಾಗರದಲ್ಲಿ ಉಂಟಾಗಿರುವ ಚಂಡಮಾರುತ ಈಗ ಶಿಥಿಲಗೊಳ್ಳುತ್ತಿದ್ದರೂ ಮುಂಗಾರು ಮುಂದೆ ಚಲಿಸಲು ತೊಡಕಾಗಿದೆ.
ಆದರೂ ಕೇರಳದಲ್ಲಿ ಮುಂಗಾರು ಪೂರ್ವ ಮಳೆಯ ಪುನಃ ಆರಂಭಗೊಂಡಿದ್ದು ರಾಜ್ಯದಲ್ಲೂ ಮೇ 20ರ ನಂತರ ಗುಡುಗು, ಗಾಳಿ ಸಹಿತ ಮಳೆಯ ಮುನ್ಸೂಚನೆ ಇದೆ. 

17 May 2023

18.05.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

18.05.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 
ಕೊಡಗು ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದ್ದರೆ, ಮೈಸೂರು ಹಾಗೂ ಚಾಮರಾಜನಗರ ಭಾಗಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 
ಶಿೃಂಗೇರಿ ಹಾಗೂ ಕುದುರೆಮುಖ ಭಾಗಗಳಲ್ಲಿ ಸಹ ತುಂತುರು ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಹೆಚ್ಚಿನ ಅವಧಿಯೂ ಬಿಸಿಲಿನ ವಾತಾವರಣದ ಇರಲಿದ್ದು ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣಧ ಮುನ್ಸೂಚನೆ ಇದೆ. 

ಮುಂಗಾರು : ದಕ್ಷಿಣ ಕರಾವಳಿ ಭಾಗಗಳಲ್ಲಿ ಮುಂಗಾರಿಗೆ ಪೂರಕವಾದ ವಾತಾವರಣ ಸೃಷ್ಠಿಯಾಗುತ್ತಿದೆ. IMD ಯು ಜೂನ್ 4 (+-4)ರಂದು ಕೇರಳಕ್ಕೆ ಮುಂಗಾರು ಪ್ರವೇಶಿಸುವ ಮುನ್ಸೂಚನೆ ನೀಡಿದೆ. 
ಆದರೂ ಭೂ ಮಧ್ಯ ರೇಖೆಗಿಂತ ಕೆಳಗೆ ಹಿಂದೂ ಮಹಾಸಾಗರದಲ್ಲಿ ಉಂಟಾಗಿರುವ ಚಂಡಮಾರುತದ ಪ್ರಭಾವದಿಂದ ಸ್ವಲ್ಪ ಅನಿಶ್ಚಿತತೆ ಇರುವುದರಿಂದ ಕಾದು ನೋಡಬೇಕಾಗಿದೆ. ಈಗಿನ ಪ್ರಕಾರ ಆರಂಭಿಕ ಮುಂಗಾರು ದುರ್ಬಲವಾಗಿರುವ ಸಾಧ್ಯತೆ ಹೆಚ್ಚಿದೆ. 

16 May 2023

17.05.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

17.05.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ. ಕಾರ್ಕಳ ಸುತ್ತಮುತ್ತ ಸಾಧ್ಯತೆ ಹೆಚ್ಚಿದೆ. 

ಕೊಡಗು ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದ್ದರೆ, ಮೂಡಿಗೆರೆ, ಶಿೃಂಗೇರಿ, ಕೊಪ್ಪ, ಕುದುರೆಮುಖ, ಆಗುಂಬೆ ಸುತ್ತಮುತ್ತ ಭಾಗಗಳಲ್ಲಿ ಮೋಡ ಅಥವಾ ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆಯೂ ಇದೆ. 

ಮೈಸೂರು, ಹಾಸನ, ಉಳಿದ ಚಿಕ್ಕಮಗಳೂರು, ಚಾಮರಾಜನಗರ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು. 

ಉಳಿದ ಕರ್ನಾಟಕದ ಭಾಗಗಳಲ್ಲಿ ಹಗುರವಾಗಿ ಅಲ್ಲಲ್ಲಿ ಮೋಡದ ವಾತಾವರಣದ ಇದ್ದು, ಮಳೆಯ ಮುನ್ಸೂಚನೆ ಇರುವುದಿಲ್ಲ. 

ಮುಂಗಾರು : ಹಿಂದೂಮಹಾಸಾಗರದಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಮುಂಗಾರನ್ನು ಅನಿಶ್ಚಿತತೆಗೆ ದೂಡುವ ಲಕ್ಷಣಗಳಿವೆ. 

15 May 2023

16.05.2023 ರ ಬೆಳಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

16.05.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚನೆ ಇದೆ. 
ಮಳೆಯ ಸಾಧ್ಯತೆ ಕಡಿಮೆ ಇದ್ದರೂ ಅನಿರೀಕ್ಷಿತವಾಗಿ ಅಲ್ಲಲ್ಲಿ ತುಂತುರು ಒಂದೆರಡು ಸಾಮಾನ್ಯ ಮಳೆಯಾಗಬಹುದು. 

ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ. 

ಮುಂಗಾರು : ಈಗಿನ ಮುನ್ಸೂಚನೆಯಂತೆ ಜೂನ್ ಮೊದಲವಾರದಲ್ಲಿ ಮುಂಗಾರು ಆಗಮನದ ನಿರೀಕ್ಷೆ ಇದೆ. 
ಆದರೆ ಈಗಿನ ಕನ್ಯಾಕುಮಾರಿಗೆ ನೇರವಾಗಿ ಭೂ ಮಧ್ಯ ರೇಖೆಗಿಂತ ಕೆಳಗೆ ಹಿಂದೂ ಮಹಾಸಾಗರದಲ್ಲಿ ಚಂಡಮಾರುತ ಉಂಟಾಗಿದ್ದು ಮುಂಗಾರು ಚಲನೆಗೆ ತೊಡಕಾಗಿದೆ. ಅದು ದಕ್ಷಿಣ ಆಫ್ರಿಕಾ ಖಂಡದ ಕರಾವಳಿ ಕಡೆ ಚಲಿಸುತ್ತಿದ್ದರೂ ಸಮಯ ತೆಗೆದುಕೊಳ್ಳುವ ಲಕ್ಷಣಗಳಿವೆ. 
ಈಗಿನಂತೆ ಮೇ 24ರಿಂದ ಕೇರಳದ ಹೆಚ್ಚಿನ ಭಾಗಗಳಲ್ಲಿ ಮುಂಗಾರು ರೀತಿಯ ವಾತಾವರಣ ಉಂಟಾಗುವ ಮುನ್ಸೂಚನೆ ಇದೆ. 


12 May 2023

13.05.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

13.05.1023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಢದ ವಾತಾವರಣ ಇರಲಿದ್ದು ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 

ಕೊಡಗು, ಸೋಮವಾರಪೇಟೆ, ಸಕಲೇಶಪುರ, ಮೂಡಿಗೆರೆ, ಶಿೃಂಗೇರಿ, ಕೊಪ್ಪ, ಕುದುರೆಮುಖ, ಆಗುಂಬೆ, ತೀರ್ಥಹಳ್ಳಿ, ಹೊಸನಗರ ಸುತ್ತಮುತ್ತ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. 

ಮೈಸೂರು, ಹಾಸನ, ಉಳಿದ ಚಿಕ್ಕಮಗಳೂರು, ಉಳಿದ ಶಿವಮೊಗ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಹಗುರವಾಗಿ ಮೋಡ ಕವಿದ ವಾತಾವರಣದ ಮುನ್ಸೂಚನೆ ಇದೆ. 

ನಾಳೆಯಿಂದ ರಾಜ್ಯದಾದ್ಯಂತ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ. 

ಮಾಚಾ : ಮೇ 14ರಂದು ಮಾಚಾ ಚಂಡಮಾರುತದವು ಮ್ಯಾನ್ಮಾರ್ ಗೆ ಅಪ್ಪಳಿಸುವ ಲಕ್ಷಣಗಳಿವೆ. 





11 May 2023

12.05.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

12.05.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ ಹೆಚ್ಚಿನ ಭಾಗಗಳಲ್ಲಿ, ಉಡುಪಿಯ ಅಲ್ಲಲ್ಲಿ, ಉತ್ತರ ಕನ್ನಡ, ಗೋವಾ ಗಡಿಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಉತ್ತಮ ಮಳೆಯ ಸಾಧ್ಯತೆ ಇದೆ. ಗಾಳಿ ಮಹತ್ವದ ಪಾತ್ರ ವಹಿಸಲಿದೆ 

ಕೊಡಗು, ಚಿಕ್ಕಮಗಳೂರು, ಹಾಸನ, ಉತ್ತಮ ಮಳೆಯ ಮುನ್ಸೂಚನೆ ಇದ್ದರೆ ಮೈಸೂರು, ಮಂಡ್ಯ, ಶಿವಮೊಗ್ಗ ಅಲ್ಲಲ್ಲಿ ಹಾಗೂ ತುಮಕೂರಿನ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಚಂಡಮಾರುತ ಮೋಚಾ : ಮೇ 13ರ ತಡ ರಾತ್ರಿ ಮ್ಯಾನ್ಮಾರ್ ಗೆ ಅಪ್ಪಳಿಸುವ ಮುನ್ಸೂಚನೆ ಇದೆ. 
ನಾಳೆಯಿಂದ ರಾಜ್ಯದ ಕರಾವಳಿ ಭಾಗಗಳಲ್ಲಿ ಸಹ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ. ಆದರೆ ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮೋಡದ ವಾತಾವರಣ ಮುಂದುವರಿಯುವ ಸಾಧ್ಯತೆ ಇದ್ದು, ಒಂದೆರಡು ಕಡೆ ಅನಿರೀಕ್ಷಿತ ಮಳೆಯ ಸಾಧ್ಯತೆಯೂ ಇದೆ. 




07.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ

07.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಸಂ...